ನರೇಗಾ ಕೂಲಿ ಹಣ 6.87 ಕೋಟಿ ರೂ ಬಾಕಿ ಸಂಕಷ್ಟದಲ್ಲಿ ಕೂಲಿ ಕಾರ್ಮಿಕರು.

by | 30/10/23 | Uncategorized

ಚಳ್ಳಕೆರೆ ಜನಧ್ವನಿ ವಾರ್ತೆ ಅ.30
ಗ್ರಾಮೀಣ ಕೂಲಿ ಕಾರ್ಮಿಕರ ಕಾಮಧೇನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯ ದುಡಿದ ಕೈಗಳಿಗೆ ಮೂರು ತಿಂಗಳು ಕಳೆದರೂ ಕೂಲಿ ಹಣ ಸುಮಾರು 6.87 ಕೋಟಿ ರೂ ಕಾರ್ಮಿಕರ ಕೂಲಿ ಹಣ ಪಾವತಿಗಾಗಿ ಕಾರ್ಮಿಕರು ಎದುರು ನೋಡುತ್ತಿದ್ದಾರೆ.
ಈಗಾಗಲೆ ಸಕರಾರ ಚಳ್ಳಕೆರೆ ತಾಲೂಕು ಈ ಬಾರಿಯೂ ಬರಪೀಡಿತ ಪ್ರದೇಶ ಎಂಬ ಹಣೆ ಪಟ್ಟಿಕೊಂಡಿದ್ದು ಪದೆ ಪದೇ ಬರಗಾಲಕ್ಕೆ ತುತ್ತಾಗುತ್ತಿದ್ದು ಒಂದು ವರ್ಷ ಮಳೆಯಾದರೆ ಮತ್ತೊಂದು ವರ್ಷ ವರುಣ ಕಣ್ಮರೆಯಾಗಿ ರೈತರ ಹಾಗೂ ಕೂಲಿ ಕಾರ್ಮಿರೊಂದಿಗೆ ಚೆಲ್ಲಾಟ ವಾಡುವ ಮಳೆರಾಯನಿಂದ ಬೇಸತ್ತು ಕೂಲಿ ಕಾರ್ಮಿಕರು ದೂರದ ನಗರಗಳಿಗೆ ದುಡಿಮೆ ಮಾಡಲು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆ ಜಾರಿಗೆ ತಂದಿದೆ.
ಮಹತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ರೈತರ ಹಾಗೂ ಕೂಲಿ ಕಾರ್ಮಿಕರ ಪಾಲಿಗೆ ವರದಾನವಾಗ ಬೇಕಿತ್ತು ಆಗಸ್ಟ್ 25 ರಂದು ಬಿಡಗಡೆಯಾಗಿದ್ದು ಬಿಟ್ಟರೆ ಮೂರು ತಿಂಗಳು ಕಳೆಯಲು ಬಂದರೂ ಇನ್ನು ಕೂಲಿ ಹಣ ಬಿಡುಗಡೆ ಮಾಡಿಲ್ಲ ಎಂದು ಕೂಲಿ ಕಾರ್ಮಿಕ ಸರಕಾರದ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಸಕಾಲಕ್ಕೆ ಮಳೆಯಿಲ್ಲದೆ ಬೆಳೆ ಸಂಪೂರ್ಣ ಕೈಕೊಟ್ಟಿದ್ದು ರೈತರು ಬೆಳೆ ವಿಮೆ. ಬೆಳೆಪರಿಹಾರಕ್ಕಾಗಿ ಎದುರು ನೋಡಿದ್ದಾರೆ.
ತಾಲೂಕುಗಳು ಬರಪೀಡಿತ ಪ್ರದೇಶಗಳೆಂದು ಘೋಷಣೆಯಾಗಿದ್ದರೂ, ಚಳ್ಳಕೆರೆ ತಾಲೂಕಿನಲ್ಲಿ ನರೇಗಾ ಕಾಮಗಾಗಿ ಪ್ರಗತಿಯಲ್ಲಿದ್ದರೂ ಸಹ ದುಡಿದ ಕೂಲಿ ಕಾರ್ಮಿಕರಿಗೆ ಸುಮಾರು 6.87 ಕೋಟಿ ರೂ ಕೂಲಿ ಹಣ ಬಿಡುಗಡೆಯಾಗದಿರುವುದು ಕಾರ್ಮಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಕೂಲಿ ವಿಳಂಭವಾದರೆ ದಂಢ
ಮಹಾತ್ಮ ಗಾಂಧಿ ರಾಷ್ಟ್ರೀಯಾ ಉದ್ದೋಗ ಖಾತರಿ ಯೋಜನೆಯಡಿಯಲ್ಲಿ ಕೂಲಿಕಾರರಿಗೆ ನೇರವಾಗಿ ಕೂಲಿ ಕಾರ್ಮಿಕರ ಖಾತೆಗೆ ವಿತರಣೆ ವಿಳಂಬವಾದರೆ ಸಂಬಂಧಿಸಿದ ಅಧಿಕಾರಿಗಳು, ನೌಕರರು, ಕೂಲಿ ಮೊತ್ತಕ್ಕೆ ಶೇ 0.50 ರಷ್ಟು ದಂಡ ಹಾಕಿ ಕೊಡ ಬೇಕೆಂಬ ನಿಯವಿದೆ. ಆದರೆ ಸರಕಾರವೇ ಕೂಲಿ ಹಣ ವಿಳಂಬ ಮಾಡಿದರೆ ದಂಡ ಕಟ್ಟುವವರುಯಾರು ? ಎಂಬ ಪ್ರಶ್ನೆ ತಲೆದೋರಿದ್ದು ಕೂಲಿ ಕೆಲಸ ಮಾಡಿ ಎರಡು ತಿಂಗಳು ಕಳೆದರೂ ಕೂಲಿ ಹಣ ಬಿಡುಗಡೆ ಮಾಡದೆ ಇರುವುದರಿಂದ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ನರೇಗಾ ಯೋಜನೆಯಡಿ ನಿರ್ಮಿಸಿದ ಕಾಮಗಾರಿಗಳು.
ನರೇಗಾ ಯೋಜನೆಯಡಿ ಬದುನಿರ್ಮಾಣ, ಕೃಷಿ ಹೊಂಡ, ತೋಟಗಾರಿಕೆ ಬೆಳೆಗಳು , ಬಚ್ಚಲು ಇಂಗು ಗುಂಡಿ, ಕೆರೆ ಕಾಲುವೆ , ಅಮೃತ ಸರೋವರ ಮಳೆ ನೀರು ಇಂಗಿಸುವುದು, ಕಲ್ಯಾಣಿ,ರಸ್ತೆ,ಚರಂಡಿ, ಹಾಗೂ ಕೆರೆ ಹೂಳೆತ್ತುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ಮಾಣ ಮಾಡಿದ ಕೂಲಿ ಕಾರ್ಮಿಕರ ಖಾತೆಗೆ ಎರಡು ತಿಂಗಳು ಕಳೆದರೂ ಕೂಲಿ ಹಣ ಪಾವತಿ ಮಾಡಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಬರಗಾಲದಿಂದ ರೈತರು ಜನಸಾಮನ್ಯರು ತತ್ತರಿಸಿ ಹೋಗಿದ್ದು ಇನ್ನು ಎರಡು ತಿಂಗಳು ಇದೇ ರೀತಿ ಮುಂದುವರೆದರೆ ಜನ ಜಾನುವಾರುಗಳಿಗೆ ಕುಡಿಯುವ ನೀರು ,ಮೇವಿಗಾಗಿ ಪರದಾಡ ಬೇಕಾಗುತ್ತದೆ ಕುರಿಗಳಿಗೆ ಮೇವಿಲ್ಲದೆ ಮಲೆನಾಡಿತ್ತ ಕುರಿಗಳನ್ನು ಹೊಡೆದು ಕೊಂಡು ಹೊರಟ್ಟಿದ್ದಾರೆ.
ಇತ್ತ ಗ್ಯಾರೆಂಟ್ ಯೋಜನೆಗಳಿಂದ ಅಭಿವೃದ್ಧಿಗೆ ಅನುದಾನ ಕೊರತೆಯಿಂದ ಅಭಿವೃದ್ಧಿ ಹಿನ್ನಡೆಯಾಗುತ್ತಿದೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಆಪರೇಷನ್ ಕಮಲ ಹಾಗೂ ಕಾಂಗ್ರೆಸ್ ಪಕ್ಷದಲ್ಲಿನ ಶಾಸಕ ಬಿನ್ನಾಭಿಪ್ರಾಯಗಳನ್ನು ಶಮನ ಮಾಡಲು ಸರಕಾರವನ್ನು ಉಳಿಸಿಕೊಳ್ಳಲು ಮುಂದಾಗಿದ್ದು ಸರಕಾರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತವೆ .
ಈಗಲಾದರೂ ಸಂಬಂಧ ಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನರೇಗಾ ಬಾಕಿ ಅನುದಾನ ಬಿಡುಗಡೆ ಸೇರಿದಂತೆ ಅಭಿವೃದ್ಧಿಯತ್ತ ಚಿತ್ತ ಹರಿಸುವರೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page