ನರೇಗಾ ಯೋಜನೆಯು ಸ್ಥಳೀಯ ಮಟ್ಟದಲ್ಲಿ ನಿರಂತರ ಉದ್ಯೋಗ ಕಲ್ಪಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ವರದಾನ ಕೋಡಿಹಳ್ಳಿಆನಂದಪ್ಪ.

by | 05/07/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜು.5 ನರೇಗಾ ಯೋಜನೆಯು ಸ್ಥಳೀಯ ಮಟ್ಟದಲ್ಲಿ ನಿರಂತರ ಉದ್ಯೋಗ ಕಲ್ಪಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ವರದಾನವಾಗಿದೆ ಎಂದು ಕೋಡಿಹಳ್ಳಿಆನಂದಪ್ಪ ಹೇಳಿದ್ದಾರೆ.
ನಾಕನಹಟ್ಟಿ ಹೋಬಳಿವ್ಯಾಪ್ತಿಯ ಅಬ್ಬೇನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಮುಷ್ಟಲಗುಮ್ಮಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ನೂರಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಕೆಲಸವನ್ನು ಮಾಡುತ್ತಿರುವ ಸ್ಥಳದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಅತಿ ಕಡಿಮೆ ಮಳೆ ಬೀಳುವ ಪ್ರದೇಶ ನಮ್ಮ ನಾಯಕನಹಟ್ಟಿ ಹೋಬಳಿ ಈ ಭಾಗದಲ್ಲಿ ಅತಿ ಹೆಚ್ಚು ಕೂಲಿಕಾರ್ಮಿಕರು ರೈತರು ಇರುವುದರಿಂದ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ಜನರು ಕಂಗಲಾಗಿದ್ದು ಕೆಲಸವಿಲ್ಲದೆ ದೂರದ ಪಟ್ಟಣ ನಗರ ಪ್ರದೇಶಗಳಿಗೆ ಕೆಲಸಕ್ಕಾಗಿ ಗೂಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಷ್ಟಲಗುಮ್ಮಿ, ಚೌಳಕೆರೆ, ಅಬ್ಬೇನಹಳ್ಳಿ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವುದು ,ಕೃಷಿ ಹೊಂಡಮ ಬದು ನಿರ್ಮಾಣ, ತೋಟಗಾರಿಕೆ ಬೆಳೆ, ರಾಜ ಕಾಲುವೆ ಕಾಮಗಾರಿಗಳಲ್ಲಿ ಗ್ರಾಮದ ಪುರುಷರು ,ಮಹಿಳೆಯರು ಕಳೆದ ಎರಡು ವಾರದಿಂದ ಕೆಲಸವನ್ನು ಮಾಡುತ್ತಿದ್ದು.
ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ನೆರೆಗಾ ಯೋಜನೆ ವರದಾನವಾಗಿದೆ. ತಮ್ಮ ಮಕ್ಕಳ ವಿದ್ಯಾಭ್ಯಾಸ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಪಡೆದಂತ ಸಾಲಕ್ಕಾಗಿ ಉದ್ಯೋಗ ಖಾತ್ರಿ ಯೋಜನೆಯ ಹಣ ಉಪಯೋಗವಾಗಲಿದೆ ಎಂದು ತಿಳಿಸಿದರು.
ಕಾರ್ಮಿಕ ಮಂಜುನಾಥ್ ಮಾತನಾಡಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಮೋಹನ್ ದಾಸ್ ರವರೆಗೆ ನಾವು ಕೂಲಿ ಕೆಲಸ ಕೊಡುವಂತೆ ಮನವಿಯನ್ನು ಮಾಡಿಕೊಂಡ ಮೂರ್ನಾಲ್ಕು ದಿನಗಳ ಒಳಗಾಗಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸರ್ವ ಸದಸ್ಯರು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕೆಲಸ ಮಾಡುವಂತೆ ಸೂಚನೆಯನ್ನು ನೀಡಿದರು.
ಉದ್ಯೋಗ ಖಾತ್ರಿ ಯೋಜನೆ ಅಡಿಯ ಕೂಲಿ ಕೆಲಸ ಮಾಡುವುದರಿಂದ ನಮ್ಮ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಿದೆದ ಎಂದು ತಿಳಿಸಿದರು.
ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಜೆ .ಪಿ ಪ್ರಿಯಾಂಕ, ಎಸ್ ಪಿ ಪಾಲಯ್ಯ, ಒ.ವಿ. ಸಣ್ಣೋ ಬಯ್ಯ, ಪಿ.ಟಿ. ನಾಗೇಶ್, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಎಂ. ಎಸ್ ತಿಪ್ಪೇಸ್ವಾಮಿ, ಓಬಕ್ಕ, ಲಕ್ಷ್ಮಿ ದೇವಿ . ಕಾರ್ಮಿಕರಾದ ದುರುಗಮ್ಮ, ಓಬಣ್ಣ, ಎಂ.ಪಿ ಶೇಖರಪ್ಪ, ಜಿ ಪಿ ಗುರುವಯ್ಯ, ಕೆ ಎಸ್ ತಿಪ್ಪೇಸ್ವಾಮಿ, ಡಿ ನಿಂಗಪ್ಪ, ಎ.ಕೆ ಅಜ್ಜಯ್ಯ, , ಸುಜಾತ, ಇತರರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page