ನಾಯಕನಹಟ್ಟಿ : ಪರಿಶಿಷ್ಟರು, ವಿಶೇಷ ಚೇತನರಿಗೆ ವಿವಿಧ ಯೋಜನೆ

by | 09/11/23 | ಆರ್ಥಿಕ

ನಾಯಕನಹಟ್ಟಿ ನ.09:
ನಾಯಕನಹಟ್ಟಿ ಪಟ್ಟಣ ಪಂಚಾಯತಿ ವತಿಯಿಂದ 2023-24ನೇ ಸಾಲಿನ ಎಸ್‍ಎಫ್‍ಸಿ ಮುಕ್ತನಿಧಿ ಅನುದಾನದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷಚೇತನರಿಗೆ ವಿವಿಧ ಸೌಲಭ್ಯ ಮಂಜೂರಾತಿ ಹಾಗೂ ವಿಶೇಷ ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎಸ್‍ಎಫ್‍ಸಿ ಮುಕ್ತನಿಧಿ ಅನುದಾನದಡಿ ಶೇ. 24.10 ರ ಅನುದಾನದಲ್ಲಿ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್‍ಎಸ್‍ಎಲ್‍ಸಿ, ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಆಧಾರದ ಮೇರೆಗೆ ವಿಶೇಷ ನೆರವು ನೀಡಲಾಗುವುದು.
ಎಸ್‍ಎಫ್‍ಸಿ ಅನುದಾನದಡಿ ಶೇ. 5 ರ ಯೋಜನೆಯಡಿ ಬ್ಯಾಂಕ್‍ಗಳ ಸಾಲದ ನೆರೆವಿನಿಂದ ಸಣ್ಣ ಉದ್ದಿಮೆಯನ್ನು ಆರಂಭಿಸಲಿಚ್ಚಿಸುವ ವಿಶೇಷಚೇತನ ಸಣ್ಣ ಉದ್ದಿಮೆದಾರರಿಗೆ ಬ್ಯಾಂಕ್ ನಿಂದ ಸಾಲ ಮಂಜೂರು ಮಾಡಿದ ನಂತರ ಬ್ಯಾಂಕ್ ಅಂಡ್ ಸಬ್ಸಿಡಿ ರೂಪದಲ್ಲಿ ಸಾಲ ನೀಡಿದ ಬ್ಯಾಂಕ್‍ಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು. ಅರ್ಹ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಪಡೆಯಬಹುದು ಎಂದು ನಾಯಕನಹಟ್ಟಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *