ಚಳ್ಳಕೆರೆ ಜನಧ್ವನಿ ವಾರ್ತೆ ಡಿ.27 ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿ. 27 ರಿಂದ 29 ರವರೆಗೆ ಕ್ಯ್ಯಾಂಪ್ಗಳನ್ನು ಆಯೋಜಿಸಲಾಗಿದೆ ಯಾವುದೇ ಶುಲ್ಕ ಇರುವುದಿಲ್ಲ ಉಚಿತ ಎಂದು ತಾಲೂಕು ಶಿಶುಅಭಿವೃದ್ಧಿ ಅಧಿಕಾರಿ ಹರಿಪ್ರಸಾದ್ ತಿಳಿಸಿದ್ದಾರೆ
ಕ್ಯಾಂಪ್ಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ,. ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹಾರ ಒದಗಿಸಲಾಗುತ್ತದೆ. ಫಲಾನುಭವಿಗಳು ನಿಗಧಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬಹುದು. ಎಂದು ತಾಲೂಕು ಶಿಶು ಅಭಿವೃದ್ಧಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಹರಿಪ್ರಸಾದ್ ತಿಳಿಸಿದ್ದಾರೆ. .
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments