ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸ್ವಯಂ ಉದ್ಯಮ ಪರಿಹಾರ

by | 09/10/23 | ಉದ್ಯೋಗ


ಚಿತ್ರದುರ್ಗ ಅ.9:
ಜನಸಂಖ್ಯಾಸ್ಪೋಟ ಹಾಗೂ ಅದರಿಂದ ಉಂಟಾಗುದ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಸ್ವಯಂ ಉದ್ಯಮ ಸ್ಥಾಪನೆ ಪರಿಹಾರವಾಗಬಹುದು ಎಂದು ಸರ್ಕಾರ ಉದ್ಯಮ ಶೀಲತಾ ತರಬೇತಿ ಕಾರ್ಯಕ್ರಮಗಳನ್ನು ಪ್ರಾಯೋಜಿಸುತ್ತದೆ ಎಂದು ಸಿಡಾಕ್ ಜಂಟಿ ನಿರ್ದೇಶಕ ಆರ್.ಪಿ.ಪಾಟೀಲ್ ಹೇಳಿದರು.
ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯ ಮಾರುತಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸೊಸೈಟಿಯಲ್ಲಿ ಈಚೆಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟಜಾತಿ, ವರ್ಗದವರಿಗೆ “ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ”ದ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯದಾದ್ಯಂತ ಉದ್ಯಮಶೀಲತೆಯನ್ನು ಅಭಿವೃದ್ದಿಪಡಿಸಲು ಸರ್ಕಾರದಿಂದ ಸ್ಥಾಪಿವಾಗಿರುವ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ), ಸಂಸ್ಥೆಯು “ಉದ್ಯಮಶೀಲತೆಯು ಹುಟ್ಟಿನಿಂದ ಮಾತ್ರ ಬರಬೇಕಾಗಿಲ್ಲ, ತರಬೇತಿಯ ಮೂಲಕ ಸಾಮಾನ್ಯ ಜನರಲ್ಲೂ ಉದ್ಯಮಶೀಲತೆಯನ್ನು ಉದ್ದೀಪನೆಗೊಳಿಸಬಹುದು” ಎಂಬ ತತ್ವದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಉದ್ಯಮಶೀಲತೆ ಎಂದರೇನು, ಮಹಿಳೆಯರಿಗಾಗಿ ಇರುವ ಉದ್ಯಮಾವಕಾಶಗಳ ಮಾಹಿತಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯಮ ಸ್ಥಾಪಿಸಲು ಸಹಕರಿಸುವ ಯೋಜನೆಗಳ ಮಾಹಿತಿ, ಸಮರ್ಪಕ ಮಾಹಿತಿಗಾಗಿ ಸಂಪರ್ಕಿಸಬೇಕಾದ ಇಲಾಖೆಗಳ ಮಾಹಿತಿಯನ್ನು ಪರಿಣಿತ ಅತಿಥಿ ಭೋಧಕರಾದ ಶ್ರೀ ಪ್ರಶಾಂತಕುಮಾರ ಎಂ.ಎಸ್ ಅವರು ನೀಡಲಿದ್ದಾರೆ. ಈ ತರಬೇತಿಯಲ್ಲಿ ಆಸಕ್ತಿಯಿಂದ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸುತ್ತಾ ನಿಮ್ಮ ಜೀವನದಲ್ಲಿ ಕಂಡ ಕನಸುಗಳು ನನಸಾಗಲಿ, ನೀವು ಯಶಸ್ವಿ ಉದ್ಯಮಶೀಲರಾಗಿ, ಆರ್ಥಿಕವಾಗಿ ಸಬಲರಾಗಿ ರಾಷ್ಟ್ರದ ಆರ್ಥಿಕತೆಗೆ ಕೊಡುವಂತಾಗಲಿ ಎಂದು ಹಾರೈಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕರು ಹಾಗೂ ಸಂಪನ್ಮೂಲ ವ್ಯಕ್ತಿ ಎಂ.ಎಸ್.ಪ್ರಶಾಂತ್ ಕುಮಾರ್ ಮಾತನಾಡಿ, ತರಬೇತಿಯಲ್ಲಿ ಉದ್ಯಮಶೀಲರ ಗುಣಲಕ್ಷಣಗಳನ್ನು ಯಾವ ರೀತಿಯಲ್ಲಿ ಅಳವಡಿಸಿಕೊಳ್ಳಬೇಕು, ಉದ್ಯಮವನ್ನ ಯಾವ ರೀತಿಯಲ್ಲಿ ಪ್ರಾರಂಭಿಸಬೇಕು, ಉದ್ಯಮ ಆರಂಭಿಸಲು ಇರುವಂತಹ ಅವಕಾಶಗಳನ್ನ ಗುರುತಿಸುವುದು ಹೇಗೆ, ಸವಾಲುಗಳನ್ನು ಎದುರಿಸುವ ಬಗೆ, ಸರ್ಕಾರಿ ಯೋಜನೆಗಳ ಮತ್ತು ವಿವಿಧ ಇಲಾಖೆಗಳ ಕುರಿತು ಮಾಹಿತಿ ನೀಡುವುದರ ಜೊತೆಗೆ ಯಾವ ರೀತಿಯಲ್ಲಿ ಪಡೆದುಕೊಳ್ಳುವ ಹಂತಗಳ ಬಗ್ಗೆ ತಿಳಿಸಿದರು.
ಬಿ.ಜಿ.ಕೆರೆಯ ಮಾರುತಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸೊಸೈಟಿ ಕಾರ್ಯದರ್ಶಿ ಟಿ.ಚಂದ್ರಪ್ಪ ಮಾತನಾಡಿ, ಸಿಡಾಕ್ ಸಂಸ್ಥೆಯು ಉದ್ಯಮಶೀಲತೆ ಕಾರ್ಯಕ್ರಮಗಳನ್ನು ನಿರಂತರವಾಗಿ ಸಂಘಟಿಸುತ್ತಿರುವುದಕ್ಕೆ ಸಿಡಾಕ್‍ಗೆ ಅಭಿನಂದನೆ ತಿಳಿಸಿದ ಅವರು, ಪರಿಶಿಷ್ಟಜಾತಿ, ವರ್ಗದವರಿಗೆ ಸ್ವಾವಲಂಬಿಯಾಗಿ ಜೀವನ ನಡೆಸಲು ಅನೇಕ ರೀತಿಯ ಉದ್ಯೋಗಾವಕಾಶಗಳಿರುತ್ತವೆ. ಅವುಗಳನ್ನು ಉಪಯೋಗಿಸಿಕೊಳ್ಳಬೇಕು. ಅದಲ್ಲದೆ ಸ್ವಯಂ ಉದ್ಯಮಕ್ಕೆ ನಾನಾ ರೀತಿಯಲ್ಲಿವೆ ಉದಾ: ರೊಟ್ಟಿ ತಯಾರಿಕೆ, ಟೈಲರಿಂಗ್, ತರಕಾರಿ ವ್ಯಾಪಾರ, ಬಟ್ಟೆ ವ್ಯಾಪಾರ ಇನ್ನಿತರೆ ವ್ಯವಹಾರಗಳನ್ನು ಮಾಡುವ ಮೂಲಕ ಜೀವನ ನಿರ್ವಹಣೆ ಮಾಡಬಹುದು ಎಂದರು.
ತಿಳುವಳಿಕೆ ಶಿಬಿರದಲ್ಲಿ ಉದ್ಯಮಶೀಲತೆ ತಿಳುವಳಿಕೆ ಪಡೆದಲ್ಲಿ ಸ್ವಯಂ ಉದ್ಯಮವನ್ನು ಸ್ಥಾಪಿಸಿ ಅವರು ತಮ್ಮ ಕುಟುಂಬದ ಆರ್ಥಿಕ ಮಟ್ಟವನ್ನು ಸುಧಾರಿಸಲು ಸಹಾಯವಾಗುತ್ತದೆ. ಅಲ್ಲದೆ ಈ ತರಹದ ತರಬೇತಿಗಳಲ್ಲಿ ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ತರಬೇತಿಯಲ್ಲಿ ಭೋಧಿಸುವ ವಿಷಯಗಳನ್ನು ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರದಿಂದ ಪರಿಶಿಷ್ಟ ಜಾತಿ, ವರ್ಗದವರಿಗೆ ಉದ್ಯಮಿಗಳಿಗೆ ಅನೇಕ ರೀತಿಯ ಸಹಾಯಧನದ ಯೋಜನೆಗಳು ಲಭ್ಯವಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳಿ ಎಂದು ಶಿಬಿರಾರ್ಥಿಗಳನ್ನ ಉತ್ತೇಜಿಸಿದರು.
ಕಾರ್ಯಕ್ರಮದಲ್ಲಿ ಶಿಬಿರಾರ್ಥಿ ಕುಮಾರಿ ಡಿ. ಪ್ರಿಯಾಂಕ ಪ್ರಾರ್ಥಿಸಿದರು. ನಾಗವೇಣಿ ಸ್ವಾಗತಿಸಿದರು. ಶ್ರೀ ಮಾರುತಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ದಿ ಸೊಸೈಟಿ ಕಾರ್ಯದರ್ಶಿ ಟಿ ರಾಜಣ್ಣ ವಂದಿಸಿದರು, ಸಿಡಾಕ್ ತರಬೇತುದಾರ ಪಿ.ವಿಜಯಕುಮಾರ್ ನಿರೂಪಿಸಿದರು. 60 ಜನ ಆಸಕ್ತ ಶಿಬಿರಾರ್ಥಿಗಳು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page