ನೀರಿನ ಅಸಮರ್ಪಕ ಬಳಕೆಯಿಂದ ಬರ ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

by | 26/02/24 | ಸುದ್ದಿ

ಚಿತ್ರದುರ್ಗ ಫೆ.23:
ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ ಮಾತ್ರ ಅಮೂಲ್ಯವಾದ ನೀರನ್ನು ಜೋಪಾನವಾಗಿ ಕಾಪಾಡಲು ಸಾಧ್ಯ ಎಂದು ಚಿತ್ರದುರ್ಗ ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥರಾದ ಎಂ.ರೇಣುಕಾ ಪ್ರಕಾಶ್ ತಿಳಿಸಿದರು.
ಇಲ್ಲಿನ ಆಕಾಶವಾಣಿ ಕೇಂದ್ರದಲ್ಲಿ ಶುಕ್ರವಾರ ಜಿಯೋ ರೈನ್ ವಾಟರ್ ಬೋರ್ಡ್ ಮತ್ತು ಆಕಾಶವಾಣಿ ವತಿಯಿಂದ ನಡೆದ ಜಿಯೋ ರೈನ್ ವಾಟರ್ ಬೋರ್ಡ್ ಜಲ ರಕ್ಷಕರು ಪ್ರಾಯೋಜಿತ ಸರಣಿಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಲವಾರು ನದಿ, ಕೆರೆಗಳಲ್ಲಿ ನೀರು ಕಡಿಮೆಯಾಗುತ್ತಿದ್ದು, ನೀರಿನ ಸಮಸ್ಯೆ ಸಾರ್ವತ್ರಿಕ ಸಮಸ್ಯೆಯಾಗಿದೆ. ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಬೇಕು. ಮಳೆ ನೀರು ಕೊಯ್ಲು ಮಾಡುವುದರಿಂದ ನೀರಿಗೆ ಬೇರೆಯವರ ಮೇಲೆ ಅವಲಂಬಿತರಾಗುವುದು ತಪ್ಪಲಿದೆ. ಜಲ ರಕ್ಷಕ ಸರಣಿ ಕಾರ್ಯಕ್ರಮದಲ್ಲಿ ವಿಜೇತರಾದವರು ಮುಂದಿನ ದಿನಗಳಲ್ಲಿ ಜಲ ತಜ್ಞರು ಹಾಗೂ ಜಲರಕ್ಷಕರಾಗಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ನೀರಿಲ್ಲದ ಬದುಕು ಊಹಿಸಿಕೊಳ್ಳಲು ಸಾಧ್ಯವಿಲ್ಲ. ನೀರಿಗಾಗಿ ದೇಶ ದೇಶಗಳ ನಡುವೆ ಯುದ್ದವಾದರೂ ಆಶ್ಚರ್ಯವಿಲ್ಲ. ಜನ-ಜಾನುವಾರುಗಳಿಗೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು ಎಂದು ಜಿಲ್ಲಾಡಳಿತದಿಂದ ಕ್ರಿಯಾ ಯೋಜನೆ ಸಿದ್ದವಾಗಿದೆ. ಪರಿಸರ ಕಾಡುಗಳ ನಾಶ. ಜಾಗತೀಕರಣದಿಂದ ನಗರೀಕರಣದೆಡೆಗೆ ಸಾಗುತ್ತಿರುವುದು ಕೂಡ ನೀರಿನ ಕೊರತೆಗೆ ಕಾರಣವಾಗಿದೆ. ಸರ್ಕಾರದ ಎಲ್ಲಾ ಪ್ರಯತ್ನಗಳಿಗೆ ಜನಸಾಮಾನ್ಯರು ಕೈಜೋಡಿಸಬೇಕು. ಭೂಮಿಯಿಂದ ನೀರನ್ನು ಮೇಲಕ್ಕೆತ್ತುವ ಕೆಲಸವಾಗುತ್ತಿದೆಯೇ ವಿನಃ ನೀರನ್ನು ಇಂಗಿಸುವ ಕಡೆ ಯಾರು ಗಮನ ಕೊಡದಿರುವುದು ಬೇಸರದ ಸಂಗತಿ ಎಂದು ವಿಷಾಧಿಸಿದರು.
ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದು ಪರಿಸರಕ್ಕೆ ಮಾರಕವಾಗಿದೆ. ಪ್ರತಿ ಮನೆಗಳಲ್ಲಿಯೂ ಮಳೆ ನೀರು ಕೊಯ್ಲು ಅಳವಡಿಸಿಕೊಂಡರೆ ನೀರಿನ ಸಮಸ್ಯೆಗೆ ಉಪಾಯ ಕಂಡುಕೊಳ್ಳಬಹುದು ಎಂದು ಹೇಳಿದರು.
ಅಂತರ್ಜಲ ತಜ್ಞ ಎನ್.ಜೆ.ದೇವರಾಜರೆಡ್ಡಿ ಮಾತನಾಡಿ, ಆಕಾಶವಾಣಿ ಕಾರ್ಯಕ್ರಮದಲ್ಲಿ ನೀರಿನ ಮಿತ ಬಳಕೆ ಹಾಗೂ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಆಕಾಶವಾಣಿಯಲ್ಲಿ ಸರಣಿ ಕಾರ್ಯಕ್ರಮ ನೀಡಬೇಕಾದರೆ ಸಾಕಷ್ಟು ಸಿದ್ದತೆ ಮಾಡಿಕೊಳ್ಳಬೇಕು. ಚಿತ್ರದುರ್ಗ ಆಕಾಶವಾಣಿಗೆ ತನ್ನದೆ ಆದ ಇತಿಹಾಸವಿದೆ. ಇಲ್ಲಿ ನೀಡಿದ ಮೂರು ಕಾರ್ಯಕ್ರಮಗಳಿಂದ ವಿಭಿನ್ನವಾದ ಪಾಠ ಕಲಿತಿದ್ದೇನೆ. ಊಟಕ್ಕೆ ಸಮಸ್ಯೆಯಿಲ್ಲ. ಸಾಕಷ್ಟು ಆಹಾರ ಧಾನ್ಯಗಳಿವೆ. ಆದರೆ ನಮ್ಮ ಮುಂದಿರುವ ಸವಾಲೆಂದರೆ ಜಲ ರಕ್ಷಿಸುವುದು ಎನ್ನುವುದನ್ನು ಯಾರು ಮರೆಯಬಾರದು. ಮಳೆ ನೀರು ಕೊಯ್ಲು ಕುರಿತು ಮನೆ ಮನೆಗಳಲ್ಲಿ ಜಾಗೃತಿ ಮೂಡಬೇಕಿದೆ ಎಂದರು.
ಜಲರಕ್ಷಕ ಕಾರ್ಯಕ್ರಮ ನಿರೂಪಕರಾದ ದ್ಯಾಮಲಾಂಬ ಉಪಸ್ಥಿತರಿದ್ದರು. ಜಲರಕ್ಷಕರು ಆಕಾಶವಾಣಿ ಕಾರ್ಯಕ್ರಮ ಸರಣಿಯ ಸ್ಪರ್ಧೆಯಲ್ಲಿ ವಿಜೇತರಾದ ಬಾಗಲಕೋಟೆ ಜಿಲ್ಲೆ ಮುದೋಳ ತಾಲ್ಲೂಕಿನ ಸಂಗಪ್ಪ ತೇರದಾಳ್, ಚಿತ್ರದುರ್ಗ ಜಿಲ್ಲೆ ಚಳ್ಳೆಕೆರೆ ತಾಲ್ಲೂಕಿನ ಜುಂಜರಗುಂಟೆ ಗ್ರಾಮದ ಬಿ.ಶ್ರೇಯಸ್, ನರಸಿಂಹಸ್ವಾಮಿ, ಚಿತ್ರದುರ್ಗ ನಗರದ ಚಿಕ್ಕಪೇಟೆಯ ರೂಪ ಪಾಂಡುರಂಗರಾವ್, ಗೋನೂರು ಗ್ರಾಮದ ಉಷ ಎಂ.ಮಂಜಣ್ಣ, ಬಚ್ಚಬೋರನಹಟ್ಟಿಯ ಸಣ್ಣಬೋರಯ್ಯ, ನಗರದ ಕೆ.ಮೂಗಬಸಪ್ಪ, ಮೊಳಕಾಲ್ಮುರು ತಾಲ್ಲೂಕಿನ ಓಬಣ್ಣ, ಪಾಪಣ್ಣ, ಹಿರಿಯೂರು ತಾಲ್ಲೂಕಿನ ಗಿರೀಶ್, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಗ್ರಾಮದ ಸುಬ್ರಾಯ ಎಲ್.ಹೆಗ್ಡೆ ಇವರುಗಳಿಗೆ ಬಹುಮಾನ ವಿತರಿಸಲಾಯಿತು.

=========

Latest News >>

ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ....

ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಅಗತ್ಯವಸ್ತುಗಳ ಖರೀದಿ ಬಲು ಜೋರು..

ಚಳ್ಳಕೆರೆ ಚಳ್ಳಕೆರೆ ಏ.8 ಅಗತ್ಯ ವಸ್ತುಗಳ ಬೆಳೆ ಏರಿಕೆ , ಬಿಸಿಲಿನ ತಾಪ ಹಾಗೂ ಬರಗಾಲದ ನಡುವೆಯೂ ರಂಜಾನ್ ಹಾಗೂ ಯುಗಾದಿ ಹಬ್ಬದ ಖರೀದಿ ಭರಾಟೆ...

ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು‌ ಶಾಂತಿ‌ಸೌಹಾರ್ಧತೆಯಿಂದ ಆಚರಿಸಿ ಠಾಣಾಧಿಕಾರಿ ಕೆ.ಕುಮಾರ್.

ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ...

ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಗೆ ಮೇವು ಸಾಗಟ ನಿಷೇಧ ಜಿಲ್ಲಾಧಿಕಾರಿ ವೆಂಕಟೇಶ್.

ಚಿತ್ರದುರ್ಗ ಏ.05: ಚಿತ್ರದುರ್ಗ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಪ್ರಸ್ತುತ...

ತಾಲೂಕಿನಬರಪರಿಸ್ಥಿತಿ ಎದುರಿಸಲು ಪಿಡಿಒಗಳು ಕಾರ್ಯೋನ್ಮುಖರಾಗಬೇಕು, ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗವಹಿಸಿ ನೋಡಲ್ ಅಧಿಕಾರಿ ರಾಮಾಂಜನೇಯ

ಚಳ್ಳಕೆರೆ: ರಾಜ್ಯ ಸರ್ಕಾರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಈಗಾಗಲೇ ಘೋಷಣೆ ಮಾಡಿರುವುದರಿಂದ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ...

ಜನರ ದಾಹ ತಣಿಸಲು ಅರವಟ್ಟಿಗೆ ಪಟ್ಟಣದ ವಿವಿಧ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು ವಿತರಣೆ. ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎ.ನಸರುಲ್ಲಾ..

ನಾಯಕನಹಟ್ಟಿ:: ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಜನರ ದಾಹ ತಣಿಸಲು ಅರವಟ್ಟಿಗೆ ತೆರೆದಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯ...

ಶುದ್ದ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಏಪ್ರಿಲ್ 02 ಪ್ರಸಕ್ತ ಬೇಸಿಗೆಯಲ್ಲಿ ಚಿತ್ರದುರ್ಗ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ನಿವಾಸಿಗಳಿಗೆ...

ಬರಗಾಲ ನಿರ್ವಾಹಣಾ ಸಭೆಗೆ ಅಧಿಕಾರಿಗಳು ಹಾಜರಿಯಾಗುವಂತೆ ತಹಶೀಲ್ದಾರ್ ರೇಹಾನ್ ಪಾಷ.

ಚಳ್ಳಕೆರೆ ಏ.2. ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗಿದ್ದು ತಾಲೂಕು ಬರಗಾಲ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಏ 3 ಬುಧವಾರ 10 ಗಂಟೆ‌ಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page