ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಹಟ್ಟಿ ತಿಪ್ಪೇಶನ ದರ್ಶನ‌ಪಡೆದು ಪ್ರಸಾದ ಸ್ವೀಕರಿಸಿದರು.

by | 23/01/24 | ಸುದ್ದಿ


ನಾಯಕನಹಟ್ಟಿ ಜ.23 ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಮಂಗಳವಾರದಂದು ಅಧಿಕಾರ ವಹಿಸಿಕೊಂಡರು. ನಂತರ ಶ್ರೀಗುರು ತಿಪ್ಪೇರುಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ನೂತನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. 2015 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಅವರು ಟಿ. ವೆಂಕಟೇಶ್ ಅವರು, ಈ ಮೊದಲು ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ, ಹರಪನಹಳ್ಳಿ ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ ಅಪರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ, ರಾಜ್ಯ ಪುರಾತತ್ವ ಇಲಾಖೆ ಆಯುಕ್ತರು, ಸಾರಿಗೆ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು, ಅಲ್ಲದೆ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಅರ್ಹ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.


ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಪ್ರಭಾರ ಉಪವಿಭಾಗಾಧಿಕಾರಿ ವಿವೇಕ್, ಜಿ.ಪಂ. ಉಪಕಾರ್ಯದರ್ಶಿ ಬಿ. ಆನಂದ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರುನೂತನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಇದಕ್ಕೂ ಮುನ್ನ ಚಳ್ಳಕೆರೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ನಾಯಕನಹಟ್ಟಿಯ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ತಿಪ್ಪೇರುದ್ರಸ್ವಾಮಿ ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ .ದೇವಸ್ಥಾನದ ಆಡಳಿತ ಮಂಡಳಿ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page