ನ.17 ರಂದು ಪೊಲೀಸ್ ವಸತಿ ಸಮುಚ್ಚಯ ಮತ್ತು ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟನೆ

by | 16/11/23 | ಸುದ್ದಿ


ಚಿತ್ರದುರ್ಗ ನ.16:
ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇದೇ ನ.17 ರಂದು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಹೊಸಪೇಟೆ ರಸ್ತೆ, ಬಸವೇಶ್ವರ ನಗರದಲ್ಲಿ ಪೊಲೀಸ್ ವಸತಿ ಸಮುಚ್ಚಯದ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಲಿದೆ.
ಗೃಹ ಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ನೂತನ ಕಟ್ಟಡ ಉದ್ಘಾಟನೆ ನೇರವೇರಿಸುವರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, ಯೋಜನಾ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಘನ ಉಪಸ್ಥಿತಿ ವಹಿಸುವವರು. ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವವರು. ಗೌರವಾನ್ವಿತ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ಬಿ.ಜಿ. ಗೋವಿಂದಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ವೈ.ಎ ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಡಿ.ಜಿ.ಪಿ ಅಲೋಕ್ ಮೋಹನ್, ಬೆಂಗಳೂರು ಕೆ.ಎಸ್.ಪಿ.ಹೆಚ್ ಮತ್ತು ಐ.ಡಿ.ಸಿ.ಎಲ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೆ.ರಾಮಚಂದ್ರರಾವ್, ಕಾನೂನು ಮತ್ತು ಸುವ್ಯವಸ್ಥೆಯ ಎ.ಡಿ.ಜಿ.ಪಿ. ಆರ್. ಹಿತೇಂದ್ರ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ದಾವಣಗೆರೆ ಪೂರ್ವ ವಲಯದ ಉಪ ಪೊಲೀಸ್ ಮಹಾ ನಿರೀಕ್ಷಕ ಡಾ.ಕೆ.ತ್ಯಾಗರಾಜ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಬೆಂಗಳೂರು ಕೆ.ಎಸ್.ಪಿ.ಹೆಚ್ ಮತ್ತು ಐ.ಡಿ.ಸಿ.ಎಲ್ ಅಭಿಯಂತರ ಬಿ.ಹೆಚ್. ಮಂಜುನಾಥ ಮುಂತಾದವರು ಭಾಗವಹಿಸುವರು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page