ನ.19ರಂದು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

by | 18/11/23 | ಆರೋಗ್ಯ

ಚಿತ್ರದುರ್ಗ ನ.18:
ಕಾರ್ಮಿಕ ಇಲಾಖೆ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆಯನ್ನು ಇದೇ ನವೆಂಬರ್ 19ರಂದು ಬೆಳಿಗ್ಗೆ 10.30ಕ್ಕೆ ಹಿರಿಯೂರು ಪಟ್ಟಣದ ನೆಹರು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಉದ್ಘಾಟಿಸುವರು.
ಕಾರ್ಮಿಕರ ಆರೋಗ್ಯ ತಪಾಸಣೆಯನ್ನು “ಮುನ್ನಚ್ಚರಿಕಾ ಆರೋಗ್ಯ ತಪಾಸಣೆ” ಯೋಜನೆಯಡಿ ವೈದ್ಯಕೀಯ ಪರೀಕ್ಷೆ, ಸೇವೆಗಳನ್ನು ತುಮಕೂರಿನ ಮೆ.ಅಶ್ವಿನಿ ಹಾಸ್ಪಿಟಲ್ ಸಂಸ್ಥೆಯವರು ಒದಗಿಸುತ್ತಿದ್ದಾರೆ.
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರು ಆರೋಗ್ಯ ತಪಾಸಣೆ ಶಿಬಿರಕ್ಕೆ ನೊಂದಾಯಿತ ಕಾರ್ಡ್ ನೊಂದಿಗೆ ಆಗಮಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಮಿಕ ಮುಖಂಡರುಗಳು, ನೋಂದಾಯಿತ ಕಾರ್ಮಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *