ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ಸಿ.ಎಂ.ಸಿದ್ದರಾಮಯ್ಯ.

by | 08/11/23 | ಕರ್ನಾಟಕ

ಮೂಡಿಗೆರೆ ನ.8 ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ಸಭೆ ನಡೆಸಿ, ಮಾತನಾಡಿದರು.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೀನಾ ಎಂಬ ಶ್ರಮಿಕ ಮಹಿಳೆ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿ. ತಕ್ಷಣ ಮೃತ ದುರ್ದೈವಿಯ ಕುಟುಂಬಕ್ಕೆ 15 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಲಾಗಿದೆ. ಅರಣ್ಯ ಸಚಿವರು ಜಿಲ್ಲೆಗೆ ಭೇಟಿನೀಡಿ ಸುದೀರ್ಘ ಸಭೆ ನಡೆಸಿ ರಕ್ಷಣಾ ಕಾರ್ಯಗಳ ಕುರಿತಾಗಿ ಕ್ರಮ ಕೈಗೊಳ್ಳಲಿದ್ದಾರೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಾಫಿ ತೋಟಗಳು ಇರುವುದರಿಂದ ಕಾಡಾನೆಗಳು ಬರುತ್ತಿವೆ. ರೈಲ್ವೇ ಫೆನ್ಸಿಂಗ್ ಹಾಕುವುದೂ ಸೇರಿ ಅಗತ್ಯ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್ ಗೆ ಸ್ಪಷ್ಟ ಸೂಚನೆ ನೀಡಲು ಅರಣ್ಯ ಸಚಿವರ ಜತೆ ಚರ್ಚಿಸಿದ್ದೇನೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *