ಮೊಳಕಾಲ್ಮುರು:-ಸ್ಥಳೀಯ ಪಟ್ಟಣ ಪಂಚಾಯಿತಿ ಗದ್ದುಗೆ ಗುದ್ದಾಟಕ್ಕೆ ತೆರೆ ಬಿದ್ದಿದೆ. ಮೊದಲನೇ ಬಾರಿ ಪೂರ್ಣ ಬಹುಮತದೊಂದಿಗೆ ಆಡಳಿತ ನಡೆಸಿರುವ ಬಿಜೆಪಿಯು ಇದೀಗ ಎರಡನೇ ಇನ್ನಿಂಗ್ಸ್ ನಲ್ಲಿ ಅಧಿಕಾರ ಪಡೆಯಲು ಯಶಸ್ವಿಯಾಗಿದೆ.
16ಸದಸ್ಯರ ಬಲವುಳ್ಳ ಮೊಳಕಾಲ್ಮುರು ಪಟ್ಟಣ ಪಂಚಾಯಿತಿಯು 2019ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ: 08,ಕಾಂಗ್ರೆಸ್ :06 ಮತ್ತು ಪಕ್ಷೇತರ ಇಬ್ಬರು ಸದಸ್ಯರು ಆಯ್ಕೆಯಾಗಿದ್ದರು,ಇಬ್ಬರು ಪಕ್ಷೇತರ ಸದಸ್ಯರ ಬಲದೊಂದಿಗೆ ಬಿಜೆಪಿ ಮೊಟ್ಟ ಮೊದಲನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.ಮೊದಲನೇ ಅವಧಿ ಮುಗಿದ ನಂತರ ಎರಡನೇ ಅವಧಿಗೆ ಚುನಾವಣೆ ನಡೆಯಿತು. ಸಾಮಾನ್ಯ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು ಕಾಂಗ್ರೆಸ್ ಪಕ್ಷದಿಂದ ವಿಜಯಮ್ಮ ಓಬಣ್ಣಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎಂ ಅಬ್ದುಲ್ಲಾ ಚುನಾವಣೆಗೆ ಸ್ಪರ್ಧಿಸಿದ್ದರು. ಅದೇ ರೀತಿ ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಲೀಲಾವತಿ ಸಿದ್ದಣ್ಣ ಉಪಾಧ್ಯಕ್ಷ ಸ್ಥಾನಕ್ಕೆ ತಿಪ್ಪೇಸ್ವಾಮಿ ಸ್ಪರ್ಧಿಸಿದ್ದರು ಬಿಜೆಪಿ ಪಕ್ಷಕ್ಕೆ ಬಹುಮತ ಇರುವುದರಿಂದ ಅಧ್ಯಕ್ಷರಾಗಿ ಲೀಲಾವತಿ ಉಪಾಧ್ಯಕ್ಷರಾಗಿ ತಿಪ್ಪೇಸ್ವಾಮಿಯನ್ನು ಆಯ್ಕೆ ಮಾಡಿದ್ದೇವೆ ಎಂದು ಚುನಾವಣೆ ಅಧಿಕಾರಿಯಾಗಿರುವ ಜಗದೀಶ್ ತಿಳಿಸಿದರು.
ಒಟ್ಟಿನಲ್ಲಿ ತೀವ್ರ ಕುತೂಹಲ ಸೃಷ್ಟಿಸಿರುವ ಪಟ್ಟಣ ಪಂಚಾಯಿತಿ ಗದ್ದುಗೆಯ ಗುದ್ದಾಟಕ್ಕೆ ತೆರೆ ಬಿದ್ದಂತಾಗಿದೆ.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಸಂಸದರಾದ ಕಾರಜೋಳ ರವರು ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು ಪಟ್ಟಣದಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಪ್ರತಿ ವಾರ್ಡಿಗೂ ಸದಸ್ಯರುಗಳು ಹೋಗಬೇಕು ಎಲ್ಲರನ್ನೂ ಒಗ್ಗೂಡಿಸಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿಕೊಂಡು ಹೋಗಬೇಕು ಎಂದು ಸದಸ್ಯರಿಗೆ ಕಿವಿಮಾತು ಹೇಳಿದರು. ತುಂಗಭದ್ರಾ ಹಿನ್ನಿರು ಆದಷ್ಟು ಬೇಗ ಪಟ್ಟಣಕ್ಕೆ ಬರುವ ಹಾಗೆ ನೋಡಿಕೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಸ್ ತಿಪ್ಪೇಸ್ವಾಮಿ ಶ್ರೀರಾಮುಲು ಆಪ್ತ ಸಹಾಯಕರಾದ ಪಾಪೇಶ್ ನಾಯಕ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಲಕ್ಷ್ಮಣ್ ಉಪಾಧ್ಯಕ್ಷರಾದ ಎಂ ಎನ್ ಮಂಜಣ ಮಂಡಲ ಅಧ್ಯಕ್ಷರಾದ ಡಾ. ಬಿ ಮಂಜುನಾಥ್ ನಗರ ಘಟಕದ ಅಧ್ಯಕ್ಷರಾದ ಕಿರಣ್ ಗಾಯಕ್ವಾಡ್ lಮತ್ತು ಪಟ್ಟಣ ಪಂಚಾಯಿತಿಯ ಸರ್ವ ಸದಸ್ಯರು, ಹಾಗೂ ಜಿಲ್ಲಾಧ್ಯಕ್ಷರಾದ ಎ ಮುರಳಿ ಜೆಡಿಎಸ್ ನ ಪರಾಜಿತ ಅಭ್ಯರ್ಥಿ ವೀರಭದ್ರಪ್ಪ ಮುಖಂಡರಾದ ಚಂದ್ರಶೇಖರ್ ಗೌಡ ನೂರಾರು ಕಾರ್ಯಕರ್ತರು ಇನ್ನು ಹಲವರು ಉಪಸ್ಥಿತರಿದ್ದರು.
0 Comments