ಪಠ್ಯಭೋದನೆ ಜತೆಜತೆಯಲ್ಲಿ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಧೈರ್ಯ, ಸಾಹಸ, ನಾಯಕತ್ವ ತರಬೇತಿ ಮತ್ತು ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಎನ್ಎಸ್ಎಸ್ ಘಟಕಗಳು ಪ್ರಮುಖ ಪಾತ್ರ ವಹಿಸುತ್ತವೆ ಶಾಸಕ ಟಿ. ರಘುಮೂರ್ತಿ

by | 09/10/23 | ಶಿಕ್ಷಣ


ಚಳ್ಳಕೆರೆ ಜನಧ್ವನಿವಾರ್ತೆ ಅ.9. ಪಠ್ಯಭೋದನೆ ಜತೆಜತೆಯಲ್ಲಿ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಧೈರ್ಯ, ಸಾಹಸ, ನಾಯಕತ್ವ ತರಬೇತಿ ಮತ್ತು ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಎನ್ಎಸ್ಎಸ್ ಘಟಕಗಳು ಪ್ರಮುಖ ಪಾತ್ರ ವಹಿಸುತ್ತವೆ ಶಾಸಕ ಟಿ. ರಘುಮೂರ್ತಿ ಹೇಳಿದರು.


ನಗರದ ಹೆಚ್.ಪಿ.ಪಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ರಂಗಮಂದಿರಲ್ಲಿ ಆಯೋಜಿಸಿದ್ದ ಐ.ಕ್ಯೂ.ಎ.ಸಿ. ರಾಷ್ಟ್ರೀಯ ಸೇವಾ ಯೋಜನೆ ಘಟಕ -1 ಮತ್ತು 2, ಎನ್.ಸಿ.ಸಿ.ಯೂತ್ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕ ಮತ್ತು ಕ್ರೀಡಾ ವಿಭಾಗಗಳ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಎನ್ಎಸ್ಎಸ್ ಹಾಗೂ ಸ್ಕೌಕ್ ಮತ್ತು ಗೈಡ್ ಘಟಕಗಳಲ್ಲಿ ಸೇರಿಕೊಳ್ಳುವುದರಿಂದ ಸಮಯ ಪಾಲನೆ ಶಿಸ್ತು ಸಂಯಮವನ್ನು ಕಲಿಯಬಹುದು ಕೇವಲ ಪಠ್ಯ ಚಟುವಟಿಕೆಗಳಿಗೆ ತಮ್ಮ ವಿದ್ಯಾರ್ಥಿ ಜೀವನವನ್ನು ಮೀಸಲಿರಿಸದೆ ಇಂತಹ ರಾಷ್ಟ್ರೀಯ ಸೇವಾ ಮನೋಭಾವದ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಮಾಜಕ್ಕಾಗಿ ಉತ್ತಮ ಸೇವೆ ಸಲ್ಲಿಸುವ ಸೌಭಾಗ್ಯ ದೊರೆಯುತ್ತದೆ ಹಾಗೂ ಉತ್ತಮ ಜೀವನದ ಅಂಶಗಳನ್ನು ತಿಳಿಯಲು ಇದು ಸಹಕಾರಿಯಾಗುತ್ತದೆ ಎಂದು ತಿಳಿಸಿದರು
ನಿವೃತ್ತ ಪ್ರಾಚಾರ್ಯ ಹಾಗೂ ಸಾಹಿತಿ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ವಿಶೇಷ ಉಪನ್ಯಾಸ ನೀಡುತ್ತಾ ಸಮಾಜದಲ್ಲಿ ಅಸ್ಪೃಶ್ಯತೆ ಎಂಬುದು ಎಲ್ಲಾ ಜಾತಿಗಳಲ್ಲಿ ಮಿತಿಮೀರಿದ ಕೇವಲ ಗಂಡು-ಹೆಣ್ಣು ಎಂಬ ಜಾತಿಗಳು ಮಾತ್ರ ಸಮಾಜದಲ್ಲಿ ಸೃಷ್ಟಿಯಾಗಿ ಆದರೆ ಸಮಾಜವು ಶೈಕ್ಷಣಿಕವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ಎಷ್ಟೇ ಮುಂದುವರಿದರು ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಲು ಸಾಧ್ಯವಾಗಿಲ್ಲ ವಿದ್ಯಾವಂತರೆ ಇಂತಹ ಆಚರಣೆಗಳನ್ನು ಅನುಸರಿಸುತ್ತಿರುವುದರಿಂದ ಸಮಾಜವನ್ನು ತಿದ್ದುವವರು ಯಾರು ಎಂಬ ಪ್ರಶ್ನೆ ಎದುರಾಗುತ್ತಿದೆ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಾಗಲೇ ಇಂತಹ ಮೂಢನಂಬಿಕೆಗಳಿಂದ ಹೊರಬಂದು ಅನಕ್ಷರಸ್ಥರಿಗೆ ಜಾತಿ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಬೇಕು ಇಂತಹ ಎನ್ ಎಸ್ ಎಸ್ ಘಟಕಗಳಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿಧ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ ,ಪ್ರಾಚಾರ್ಯ ಡಾ.ರಂಗಪ್ಪ, ಪ್ರೊ ಹೆಚ್.ತಿಪ್ಪೇಸ್ವಾಮಿ, ಹನುಮಂತರಾಯ, ಜಗನ್ನಾಥ, ರಘುನಾಥ ವಿಜಯಕುಮಾರ್, .ಕೃಷ್ಣೇಗೌಡ, ಚಿತ್ತಯ್ಯ, ಜಮುನಾರಾಣಿ, ಪಾಪಣ್ಣ, ಮಂಜುನಾಥ್ ಇತರರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *