ಪತ್ರಕರ್ತರುಗಳಿಗೆ ಅಗತ್ಯ ಭದ್ರತೆ ಹಾಗೂ ಸೂಕ್ತ ರಕ್ಷಣೆ ನೀಡುವಂತಹ ಕೆಲಸವನ್ನು ಸರ್ಕಾರಗಳು ಮಾಡಬೇಕಿದೆ ಸುಪ್ರೀಂಕೋರ್ಟ್ ನಿವೃತ್ತನ್ಯಾಯಾಧೀಶಗೋಪಾಲಗೌಡ

by | 28/02/23 | ಸುದ್ದಿ


ಹಿರಿಯೂರು :
ಕರ್ನಾಟಕ ರಾಜ್ಯದಲ್ಲಿ ಸುಮಾರು 16 ಸಾವಿರಕ್ಕೂ ಹೆಚ್ಚು ಜನ ಪತ್ರಕರ್ತರು ಈ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಪತ್ರಕರ್ತರ ಕೆಲಸ ಅಂದರೆ ಅದು ಅಷ್ಟು ಸುಲಭದ ಕೆಲಸವಲ್ಲ, ಈ ಎಲ್ಲಾ ಪತ್ರಕರ್ತರುಗಳು ಪ್ರತಿದಿನ ಅತ್ಯಂತ ಭಯದಿಂದಲೇ ಕೆಲಸ ಮಾಡುತ್ತಿದ್ದಾರೆ, ಇಂತಹ ಪತ್ರಕರ್ತರುಗಳಿಗೆ ಅಗತ್ಯ ಭದ್ರತೆ ಹಾಗೂ ಸೂಕ್ತ ರಕ್ಷಣೆ ನೀಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂಬುದಾಗಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಗೋಪಾಲಗೌಡ ಹೇಳಿದರು.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಇವರ ನೇತೃತ್ವದಲ್ಲಿ ಮೊದಲವರ್ಷದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರ್ಯವಾದ ನ್ಯಾಯಾಂಗದ ಕಾರ್ಯವನ್ನು ಇಡೀ ಜಗತ್ತು ವೀಕ್ಷಣೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯ ಪತ್ರಿಕಾ ರಂಗಕ್ಕೆ ಎಷ್ಟು ಗಣನೀಯ ಸ್ಥಾನಮಾನ ನೀಡಿದೆ ಎಂದರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಡವಿದಾಗ ಈ ಸರ್ಕಾರಗಳನ್ನು ಎಚ್ಚರಿಸುವ ಹಾಗೂ ರಚನಾತ್ಮಕ ಟೀಕೆ ಟಿಪ್ಪಣಿಗಳ ಮೂಲಕ ಸರಿದಾರಿಗೆ ತರುವ ಅವಿಭಾಜ್ಯ ಹಕ್ಕು ಪತ್ರಕರ್ತರಿಗೆ ಇದೆ ಎಂಬುದನ್ನು ಸರ್ವೋಚ್ಛ ನ್ಯಾಯಾಲಯ ಸಮರ್ಥಿಸುತ್ತದೆ ಎಂಬುದಾಗಿ ಹೇಳಿದರು.
ಈ ದೇಶಕ್ಕೆ ಸ್ವಾತಂತ್ರ್ಯ ಬಂದು ಸುಮಾರು 75 ವರ್ಷಗಳ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಕರ್ತರ ಸಂಕಷ್ಟಗಳನ್ನು ಯಾವ ಸರ್ಕಾರಗಳು ಪತ್ರಕರ್ತರರನ್ನು ಕರೆದು ಚರ್ಚಿಸಿಲ್ಲ, ಅಲ್ಲದೆ ನಿಮ್ಮಿಂದ ಪತ್ರಿಕೆಗಳಲ್ಲಿ ಬರೆಸಿಕೊಳ್ಳುವ ಯಾವ ಶಾಸಕರು, ಮಂತ್ರಿಗಳು ನಿಮ್ಮ ಸಮಸ್ಯೆಗಳ ಬಗ್ಗೆ ಶಾಸನಸಭೆಗಳಲ್ಲಿ ಸಹ ಧ್ವನಿ ಎತ್ತಿಲ್ಲಾ, ಅಷ್ಟೇಅಲ್ಲಾ, ಇತ್ತೀಚೆಗೆ ಕರ್ನಾಟಕ ಸರ್ಕಾರದ ಬಜೆಟ್ ಮಂಡನೆಯಲ್ಲಿ ಕರ್ನಾಟಕ ಸರ್ಕಾರ ಪತ್ರಕರ್ತರಿಗಾಗಿ ಯಾವುದೇ ರೀತಿಯ ಹಣ ಮೀಸಲಿರಿಸಿಲ್ಲ, ಇದು ನಿಜಕ್ಕೂ ವಿಷಾದನೀಯ ಎಂದರು.
ಆದರೆ ಕರ್ನಾಟಕ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯ ಕ್ಷರಾದ ಬಂಗ್ಲೇ ಮಲ್ಲಿಕಾರ್ಜುನ್ ರವರು ಈ ಸಂಘಟನೆಯನ್ನು ಸ್ಥಾಪಿಸುವ ಮೂಲಕ ನಿಮ್ಮೆಲ್ಲರನ್ನು ಒಂದೆಡೆ ಕ್ರೋಢೀಕರಿಸಿ, ಪತ್ರಕರ್ತರ ಸಂಕಷ್ಟ ಹಾಗೂ ಸಮಸ್ಯೆಗಳನ್ನು ಚರ್ಚಿಸಲು ಈ ಸಮ್ಮೇಳನ ಹಮ್ಮಿಕೊಂಡಿದ್ದು, ಹದಗೆಟ್ಟು ಹೋಗುತ್ತಿರುವ ಸಾಮಾಜಿಕ ವ್ಯವಸ್ಥೆಯನ್ನು, ಸ್ಪಲ್ಪಮಟ್ಟಿಗೆ ಹತೋಟಿಗೆ ತರುವಂತ ಪ್ರಾಮಾಣಿಕಪ್ರಯತ್ನ ಈ ಸಮ್ಮೇಳನದ್ದಾಗಿದೆ ಎಂಬುದಾಗಿ ಅವರು ಹೇಳಿದರು.
ಪೂಜ್ಯರಾದ ಆನಂದ ಗುರೂಜಿ ಮಾತನಾಡಿ, ಸಮಾಜದ ಜ್ವಲಂತ ಸಮಸ್ಯೆಗಳು, ಜನರ ನೋವು ನಲಿವುಗಳನ್ನು ನಮ್ಮನ್ನಾಳುವ ಸರ್ಕಾರಗಳಿಗೆ, ಜನಪ್ರತಿನಿಧಿಗಳಿಗೆ ಎತ್ತಿ ತೋರಿಸುವ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ, ಅಂತಹ ಪತ್ರಿಕಾಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರನ್ನು ಗುರುತಿಸಿ, ಸನ್ಮಾನಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಹೇಳಿದರು.
ಟಿವಿ-5 ಮುಖ್ಯಸ್ಥರಾದ ರಮಾಕಾಂತ್ ಮಾತನಾಡಿ, ಸಮಾಜದ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಸರ್ಕಾರದ ನಾಲ್ಕನೇ ಅಂಗವಾದ ಪತ್ರಿಕಾರಂಗದಲ್ಲಿ ಪತ್ರಕರ್ತರು ಸಮಾಜದಲ್ಲಿ ದಿನನಿತ್ಯ ನಡೆಯುವ ಹಲವಾರು ಹಗರಣಗಳನ್ನು ಹೊರತರಲು ತಮ್ಮ ಪ್ರಾಣದ ಹಂಗನ್ನು ತೊರೆದು ಮಾಹಿತಿಯನ್ನು ಸಂಗ್ರಹಿಸುವ ಕೆಲಸ ಮಾಡುತ್ತಾರೆ, ಈ ನಿಟ್ಟಿನಲ್ಲಿ ಅನೇಕ ಬಾರಿ ಜನಪ್ರತಿನಿಧಿಗಳು, ಪ್ರಭಾವಿಗಳು, ಅಧಿಕಾರಿಗಳನ್ನು ಎದುರು ಹಾಕಿಕೊಳ್ಳಬೇಕಾಗಿರುತ್ತದೆ, ಇಂತಹ ಪತ್ರಕರ್ತರಿಗೆ ಸರ್ಕಾರ ಸೂಕ್ತ ರಕ್ಷಣೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಪತ್ರಕರ್ತರಿಗೆ ನೆರವು ನೀಡಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷ ಬಂಗ್ಲೇ ಮಲ್ಲಿಕಾರ್ಜುನ್, ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿಯತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page