ಪತ್ರಕರ್ತರು ಸಾಮಾಜಿಕ ಬದ್ಧತೆಯನ್ನು ಅರಿತು ಕಾರ್ಯನಿರ್ವಹಿಸಬೇಕು. ಪತ್ರಕರ್ತರಿಗೆ ಸಮಾಜದಲ್ಲಿ ವಿಶೇಷ ಬದ್ಧತೆ ಇದ್ದು ಅದನ್ನು ಅರಿತು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ.

by | 10/09/23 | ಕಾನೂನು

ಚಳ್ಳಕೆರೆ ಸೆ.10 ಪತ್ರಕರ್ತರು ಸಾಮಾಜಿಕ ಬದ್ಧತೆಯನ್ನು ಅರಿತು ಕಾರ್ಯನಿರ್ವಹಿಸಬೇಕು. ಪತ್ರಕರ್ತರಿಗೆ ಸಮಾಜದಲ್ಲಿ ವಿಶೇಷ ಬದ್ಧತೆ ಇದ್ದು ಅದನ್ನು ಅರಿತು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು. ನಗರದ ರೋಟರಿ ಬಾಲ ಭವನದಲ್ಲಿ ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟ ಬೆಂಗಳೂರು ದಾವಣಗೆರೆ ಚಿತ್ರದುರ್ಗ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಪತ್ರಕರ್ತರು ಕಾರ್ಯ ನಿರ್ವಹಿಸಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದು ಧ್ವನಿ ಇಲ್ಲದವರ ಧ್ವನಿಯಾಗಿ ಕೆಲಸ ಮಾಡಬೇಕು. ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸುವ ಗುರುತರ ಜವಾಬ್ದಾರಿ ಪತ್ರಕರ್ತರ ಮೇಲಿದೆ ಸಂವಿಧಾನದಲ್ಲಿನ ಶಾಸಕಾಂಗ ಕಾರ್ಯಾಂಗ ನ್ಯಾಯಾಂಗ ಹಾಗೂ ಮಾಧ್ಯಮ ರಂಗ ಎಲ್ಲರೂ ಒಂದುಗೂಡಿ ಕಾರ್ಯ ನಿರ್ವಹಿಸಿದಾಗ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಸದೃಢ ಸಮಾಜ ನಿರ್ಮಿಸಲು ಕಾರ್ಯಪ್ರವೃತ್ತರಾಗಬೇಕು ಪತ್ರಕರ್ತರ ಅವಶ್ಯಕತೆಗಳನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ತಾಲೂಕಿನ ಪತ್ರಕರ್ತರ ಕುಟುಂಬಗಳಿಗೆ ಆರೋಗ್ಯ ವಿಮೆ ಬಸ್ ಪಾಸ್ ನಿವೇಶನ ಸೇರಿದಂತೆ ಎಲ್ಲ ಬೇಡಿಕೆಗಳನ್ನು ನನ್ನ ಅಧಿಕಾರ ಅವಧಿಯಲ್ಲಿ ಹಂತ ಹಂತವಾಗಿ ಈಡೇರಿಸಲು ಶ್ರಮಿಸುವುದಾಗಿ ತಿಳಿಸಿದರು.
ಲೋಕಾಯುಕ್ತ ಎಸ್ ಪಿ ಆರ್ ಎನ್ ವಾಸದೇವ್ ವಿವೇಷ ಉಪನ್ಯಾಸ ನೀಡುತ್ತಾ ಬಂದಿರುವಸರ್ಕಾರ 1985ರಲ್ಲಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಲೋಕಾಯುಕ್ತ ಕಾಯ್ದೆಯ ಅನ್ನು ರಚಿಸಿತು ಭ್ರಷ್ಟಾಚಾರವೆಂದರೆ ಕೇವಲ ಹಣ ನೀಡುವುದಲ್ಲ ಯಾವುದೇ ಒಬ್ಬ ಅಧಿಕಾರಿ ಹಣದ ಪರ್ಯಾಯವಾಗಿ ಯಾವುದೇ ವಸ್ತುವನ್ನು ಪಡೆದರು ಅದು ಭ್ರಷ್ಟಾಚಾರ ಎನಿಸುತ್ತದೆ ಭ್ರಷ್ಟಾಚಾರ ನಿರ್ಮೂಲನವಾಗಬೇಕಾದರೆ ಸಾರ್ವಜನಿಕರು ಲೋಕಾಯುಕ್ತ ಸಿಬ್ಬಂದಿಗಳಿಗೆ ಸಹಕಾರ ನೀಡಿದಾಗ ಮಾತ್ರ ಸಾಧ್ಯವಾಗುತ್ತದೆ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿದರೆ ಮಾತ್ರ ನಮ್ಮ ಕೆಲಸವಾಗುತ್ತದೆ ಎಂಬ ಮನೋಭಾವವನ್ನು ಸಾರ್ವಜನಿಕರು ಬೆಳೆಸಿಕೊಂಡಿರುವುದರಿಂದ ಇಂದು ಬ್ರಷ್ಟಾಚಾರ ಹೆಚ್ಚಾಗಲು ಕಾರಣವಾಗಿದೆ ದಿನದ 24 ಗಂಟೆಯೂ ಲೋಕಾಯುಕ್ತ ಇಲಾಖೆ ಸಾರ್ವಜನಿಕರ ಸೇವೆಗೆ ಸಿದ್ಧವಿದ್ದು ಯಾವುದೇ ಸಂದರ್ಭದಲ್ಲಿಯೂ ನಮ್ಮನ್ನು ಸಂಪರ್ಕಿಸಿದರೆ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.


ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಇಂಡಿಯಾ ಅಧ್ಯಕ್ಷ ಬಿ.ವಿ ವಾಸದೇವ ಮಾತನಾಡಿ ಇಂದಿನ ಗಡಿನಾಡ ಪತ್ರಕರ್ತರು ಸೇರಿದಂತೆ ಎಲ್ಲಾ ಪತ್ರಕರ್ತರು ತಮ್ಮ ಜೀವನವನ್ನು ನಡೆಸಲು ಕಷ್ಟಪಡುತ್ತಿದ್ದು ಪತ್ರಕರ್ತರ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ಕೊಡಿಸಲು ಸಾಧ್ಯವಾಗದ ಪರಿಸ್ಥಿತಿಗೆ ಬಂದು ನಿಂತಿದ್ದಾರೆ ಕಾಯ್ದೆಯ ಅನ್ನು ಸರ್ಕಾರ ಪತ್ರಕರ್ತರಿಗಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸೂರು  ಕಲ್ಪಿಸುವುದು ಪ್ರತಿ ತಾಲೂಕು ಮಟ್ಟದಲ್ಲಿ ಪತ್ರಕರ್ತರ ಭವನ ನಿರ್ಮಿಸುವುದು ಎಲ್ಲ ಪತ್ರಕರ್ತರಿಗೂ ಬಸ್ ಪಾಸ್ ವ್ಯವಸ್ಥೆ ಪತ್ರಕರ್ತರಿಗೆ ಪೊಲೀಸ್ ಇಲಾಖೆ ವತಿಯಿಂದ ಗುರುತಿನ ಚೀಟಿ ನಿವೃತ್ತಿ ಹೊಂದಿದ ಪತ್ರಕರ್ತರಿಗೆ ಮಾಸಾಶನ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕಾಗಿದ್ದು ವಿಧಾನಸಭೆಯಲ್ಲಿ ಎಲ್ಲ ಶಾಸಕರು ಪತ್ರಕರ್ತರ ಪರವಾದ ಧ್ವನಿಯನ್ನು ಎತ್ತಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಪ್ರಸ್ತಾವಿಕವಾಗಿ ಒಕ್ಕೂಟದ ಕಾರ್ಯದರ್ಶಿ ಈಶ್ವರಪ್ಪ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕೆ ಶಿವಕುಮಾರ್ ಚಿತ್ರದುರ್ಗ ಜಿಲ್ಲಾಧ್ಯಕ್ಷ ಅನಂತಮೂರ್ತಿ .ನಿವೃತ್ತ ಪ್ರಾಂಶುಪಾಲ ಎಚ್ ಜಯಪ್ಪ. ನಗರಸಭಾ ಸದಸ್ಯೆ ಸುಮಕ್ಕ .ನಾಗರಾಜ್ ಕಟ್ಟೆ .ದಾದಾಪೀರ್ ಹಿರಿಯ ಪತ್ರಕರ್ತ ವೆಂಕಟಸುಬ್ಬು. ಏಕಾಂತಪ್ಪ. ವೀಣಾ .ಗೌರಣ್ಣ .ರಮೇಶ್ .ಮುತುವಲ್ಲಿ ನಾಯಕ್ .ಚಿತ್ರನಟಿ ಸವಿತಾ .ಮಲ್ಲೇಶ್ ನಾಯಕ್ .ಸಂಜೀವಿನಿ ಲ್ಯಾಬ್ ಎಂ.ಎನ್ ಮೃತ್ಯುಂಜಯ. ನೃತ್ಯನಿಕೇತನ ವಿಷ್ಣುಮೂರ್ತಿ ರಾವ್ .ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News >>

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ದೇವರ ಎತ್ತುಗಳ ನಿರ್ವಹಣೆಗೆ ಟ್ರಸ್ಟ್ ರಚನೆಗೆ ಪ್ರೇರೇಪಿಸಿ

ಚಿತ್ರದುರ್ಗ ಜೂನ್.14: ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ದೇವರ ಎತ್ತುಗಳು ಹೆಚ್ಚಾಗಿವೆ. ಈ ಜಾನುವಾರುಗಳ ನಿರ್ವಹಣೆಗೆ ಟ್ರಸ್ಟ್...

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಯೋಗೋತ್ಸವ ಕಾರ್ಯಕ್ರಮ

ಚಿತ್ರದುರ್ಗ ಜೂನ್.14: ಚಿತ್ರದುರ್ಗ ನಗರದ ಮಠದ ಕುರುಬರಹಟ್ಟಿ ಸಮೀಪದ ಎಸ್‍ಜೆಎಂ ವಸತಿ ಶಾಲೆಯಲ್ಲಿ ಶುಕ್ರವಾರ ಜಿಲ್ಲಾ ಆಯುಷ್ ಇಲಾಖೆ,...

ಕುಡಿಯುವ ನೀರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆ ಅವಘಡ ಸಂಭವಿಸಿದಂತೆ ಎಚ್ಚರಿಕೆಯಿಂದ ಕ್ರಮ ವಹಿಸಿ

ಚಿತ್ರದುರ್ಗ ಜೂನ್14: ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಂತಹ ಯಾವುದೇ ಅಹಿತಕರ ಅವಘಡ ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ಅಗತ್ಯ...

ಮೃತ ರೇಣುಕಾಸ್ವಾಮಿ ಮನೆಗೆ ಮಾಜಿಉಪಮುಖ್ಯಮಂತ್ರಿ ಗೋವಿಂದಕಾರಜೋಳ,ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಚಿತ್ರದುರ್ಗ: ನಗರದ ವಿ.ಆರ್.ಎಸ್ ಬಡಾವಣೆಯಲ್ಲಿರುವ ರೇಣುಕಾ ಸ್ವಾಮಿಯ ಕೊಲೆಯಾದ ಸಂಗತಿ ತಿಳಿದು ಮನಸ್ಸಿಗೆ ಅಘಾತವಾಗಿದ್ದು ಇಂದು ಅವರ ಮನೆಗೆ...

ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿರುವ ಆದಿವಾಲ ಗ್ರಾಮಕ್ಕೆಒಂದು ರುದ್ರಭೂಮಿಯೇ ಇಲ್ಲದಂತಾಗಿದೆ.

ಹಿರಿಯೂರು: ಆದಿವಾಲ ಗ್ರಾಮದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿದ್ದಾರೆ. ಆದರೆ ಆ ಗ್ರಾಮದ ಜನರಿಗೆ ಒಂದು ರುದ್ರ ಭೂಮಿಯೇ...

*ಸಫಾಯಿ ಕರ್ಮಚಾರಿಗಳಿಗೆ ಕಾನೂನಾತ್ಮಕವಾಗಿ ಎಲ್ಲ ಸೌಲಭ್ಯಗಳು ಸೀಗಬೇಕು; ವಿಳಂಬ, ತೀರಸ್ಕಾರ ಮಾಡಿದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ: ರಾಷ್ಟ್ರೀಯ ಸಫಾಯಿ ಕಾರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್

ಧಾರವಾಡ ಜೂನ್.13: ಸಫಾಯಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ರಾಷ್ಟ್ರೀಯ ಮತ್ತು ರಾಜ್ಯ ಸರಕಾರಗಳಿಂದ ಕಾನೂನಾತ್ಮಕವಾಗಿ...

ಅದ್ದೂರಿ ಭಗೀರಥ ಜಯಂತೋತ್ಸವ ಕಾರ್ಯಕ್ರಮ ಉಪ್ಪಾರ ಸಮಾಜದ ಯುವಗೌರವಾಧ್ಯಕ್ಷ ಕನಕದಾಸ್

ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಜೂನ್ 14ರಂದು ಹಿರಿಯೂರು: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ದಿನಾಂಕ 14-ಜೂನ್-2024 ನೇ ಶುಕ್ರವಾರದಂದು ಶ್ರೀ...

ನೂತನ ಸಂಸದ ಗೋವಿಂದ ವಿವಿಧ ಕ್ಷೇತ್ರಗಳಲ್ಲಿ ಕೃತಜ್ಞತಾ ಸಮಾವೇಶ.

ಚಿತ್ರದುರ್ಗ ಜೂ. 12 ಚಿತ್ರದುರ್ಗದ ನೂತನ ಸಂಸದರಾದ ಗೋವಿಂದ ಕಾರಜೋಳರವರು ತಮ್ಮ ಗೆಲುವಿಗೆ ಶ್ರಮಿಸಿದ ಮತದಾರರು ಮತ್ತು ಬಿಜೆಪಿ ಹಾಗೂ ಜೆಡಿಎಸ್...

ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದುತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹ :ಎಸ್.ವಿ.ರಂಗನಾಥ್

ಹಿರಿಯೂರು: ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page