ಹಿರಿಯೂರು ನ.8
ರಾಜ್ಯದ ಪತ್ರಿಕಾಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡು ರಾಜ್ಯಾದ್ಯಂತ ಸಂಚರಿಸುವ ಮೂಲಕ ಪತ್ರಕರ್ತರ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ನಿಟ್ಟಿನಲ್ಲಿ ಜನರ ಧ್ವನಿಯಾಗಿ, ಸಾಮಾಜಿಕ ಕಳಕಳಿಯಿಂದ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ರವರು ನಮ್ಮ ವಿದ್ಯಾಸಂಸ್ಥೆಗೆ ಆಗಮಿಸಿರುವುದು ಅತ್ಯಂತ ಸಂತಸದ ವಿಚಾರವಾಗಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹಾಗೂ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಇತ್ತೀಚೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್ ರವರನ್ನು ಶಾಲು ಹೊದಿಸಿ, ನೆನಪಿನಕಾಣಿಕೆ ಕೊಟ್ಟು ಗೌರವಿಸಿ, ಅವರು ಮಾತನಾಡಿದರು.
ಶ್ರೀಯುತ ಬಂಗ್ಲೆಮಲ್ಲಿಕಾರ್ಜುನ್ ರವರು ರಾಜ್ಯದ ಪತ್ರಿಕಾರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದು, ನೇರ ಹಾಗೂ ನಿಷ್ಠೂರ, ನ್ಯಾಯಪರವಾಗಿ ಜನರ ಧ್ವನನಿಯಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಜನಮೆಚ್ಚುಗೆ ಪಡೆದು, ಪತ್ರಿಕಾರಂಗದಲ್ಲಿ ಉತ್ತಮ ಹೆಸರು ಮಾಡಿದ್ದಾರೆ, ಇವರ ಆದರ್ಶಗಳು ಯುವಪತ್ರಕರ್ತರು ಮಾದರಿಯಾಗಿ ಸ್ವೀಕರಿಸಬೇಕು ಎಂಬುದಾಗಿ ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್ ರವರು, ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಆಲೂರು ಹನುಮಂತರಾಯಪ್ಪನವರು ಸಮಾಜದಲ್ಲಿ ಹಿರಿಯ ಪತ್ರಕರ್ತರಾಗಿ ಮಾತ್ರ ಗುರುತಿಸಿಕೊಂಡಿಲ್ಲ, ವಿದ್ಯಾಸಂಸ್ಥೆ ಹಾಗೂ ಸಹಕಾರಿ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ, ನೂರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಧಸ ನೀಡುವುದರ ಜೊತೆಗೆ ಅನೇಕ ಜನರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ. ಇವರ ಬಹುಮುಖ ವ್ಯಕ್ತಿತ್ವ ಇಂದಿನ ಯುವಕರಿಗೆ ಮಾದರಿಯಾಗಬಲ್ಲದು ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಹೆಚ್.ಎಸ್.ಮಾರುತೇಶ್, ಸಂಘಟನೆಯ ಗೌ.ಅಧ್ಯಕ್ಷರಾದ ಐನಹಳ್ಳಿ ಇಬ್ರಾಹಿಂ, ಕಾರ್ಯಾಧ್ಯಕ್ಷರಾದ ಅರ್ಜುನ್ ಬ್ಯಾಡರಹಳ್ಳಿ, ಪ್ರಧಾನ ಕಾರ್ಯದರ್ಶಿ ಜಿ.ಕೆ.ಮಾರುತಿ ಗೂಳ್ಯ, ದ್ಯಾಮರಾಜ್ ಚಳ್ಳಕೆರೆ, ಚಿತ್ರಹಳ್ಳಿ ಶ್ರೀಧರ್, ಎಂ.ರಾಜಪ್ಪ ಜಗಳೂರು, ಸ್ವಾಮಿಲಿಂಗಪ್ಪ ಶಿರಾ, ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಇರ್ಫಾನ್ ವುಲ್ಲಾ, ಶಿವರಾಜ್, ಪರಮೇಶ್ವರಪ್ಪ, ಕವಯಿತ್ರಿ ಸರಸ್ವತಿ, ಸೇರಿದಂತೆ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ಶಿಕ್ಷಕ ಉಮೇಶ್ ಯಾದವ್, ಶಿಕ್ಷಕಿಯರಾದ ಶ್ರೀಮತಿ ವಸಂತಾ, ಶ್ರೀಮತಿ ನಂದಿನಿ, ಸೇರಿದಂತೆ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪತ್ರಕರ್ತರ ರಾಜ್ಯ ಅಧ್ಯಕ್ಷ ಬಂಗ್ಲೆಮಲ್ಲಿಕಾರ್ಜುನ್ ರವರಿಗೆ ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments