ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ ಜಿಲ್ಲೆಯಲ್ಲಿ 14,01,830 ಮತದಾರರು, 1661 ಮತಗಟ್ಟೆಗಳು : 46906 ಯುವ ಮತದಾರರ ಸೇರ್ಪಡೆ

by | 27/10/23 | ರಾಜಕೀಯ

ಚಿತ್ರದುರ್ಗ ಅ.27:
ಚುನಾವಣೆ ಆಯೋಗದ ನಿರ್ದೇಶನದಂತೆ, ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದ ವಿಧಾನಸಭಾವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 14,01,830 ಮತದಾರರಿದ್ದು, 1661 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅರ್ಹರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಡಿ. 09 ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಹೇಳಿದರು.
ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 6,98,024 ಪುರುಷ ಮತದಾರರು, 7,03,728 ಮಹಿಳಾ ಮತದಾರರು ಹಾಗೂ 78 ಇತರೆ ಮತದಾರರು ಸೇರಿದಂತೆ ಒಟ್ಟು 14,01,830 ಮತದಾರರಿದ್ದಾರೆ. ಮತಗಟ್ಟೆಗಳ ಸಂಖ್ಯೆ 1648 ರಿಂದ 1661ಕ್ಕೆ ಹೆಚ್ಚಿಸಲಾಗಿದೆ. ಯಾವುದೇ ಅರ್ಹ ಮತದಾರರು ಮತಪಟ್ಟಿಯಿಂದ ಹೊರಗೊಳಿಯಬಾರದು. ಈ ಉದ್ದೇಶದಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಅರ್ಹ ಯುವಕ ಯುವತಿಯರು, ಸಾಮಾಜಿಕವಾಗಿ ಹಿಂದುಳಿದವರು, ಪರಿಶಿಷ್ಟ ಪಂಗಡ, ಅಲೆಮಾರಿಗಳು, ಲಿಂಗ ಪರಿವರ್ತಿತರು, ತೃತೀಯ ಲಿಂಗಿಗಳು, ದಮನಿತ ಮಹಿಳೆಯರು, ವಿಶೇಷ ಚೇತನರು, ಸಮಾಜದ ಮುಖ್ಯವಾಹಿನಿಯಿಂದ ಹೊರಗಿರುವವರನ್ನು ಪಟ್ಟಿಯಲ್ಲಿ ಸೇರಿಸಲು ವಿಶೇಷ ಆದ್ಯತೆ ನೀಡಲಾಗುವುದು. ಈ ಕುರಿತು ಜಾಗೃತಿ ಮೂಡಿಸಲು ಪಾಠಶಾಲೆ/ಚುನಾವಣೆ ಜಾಗೃತಿ ಸಂಘ, ಮತದಾರರ ಸಾಕ್ಷರತಾ ಸಂಘ, ಸ್ವಯಂ ಸೇವಕರು, ಸದಸ್ಯರ ಮೂಲಕ ವ್ಯಾಪಕ ಪ್ರಚಾರ ಮಾಡಲಾಗುವುದು. ಇದರೊಂದಿಗೆ ಯುವ ಮತದಾರರನ್ನು ಸೆಳೆಯಲು ಫಲಕಗಳ ಪ್ರದರ್ಶನ, ಜಾಥಾ, ಸೈಕಲ್ ಹಾಗೂ ಬೈಕ್ ರ್ಯಾಲಿಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ತಿಳಿಸಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಅ. 27 ರಿಂದ ಆರಂಭಗೊಂಡಿದ್ದು, ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿ. 09 ಕೊನೆಯ ದಿನವಾಗಿದೆ. ಸಲ್ಲಿಕೆಯಾಗುವ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಡಿ. 26 ರೊಳಗೆ ತೀರ್ಮಾನಿಸಲಾಗುವುದು. 2024 ರ ಜನವರಿ 05 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಣೆಗೊಳ್ಳಲಿದೆ ಎಂದರು. ಹೆಸರು ನೊಂದಣಿಗಾಗಿ ನವೆಂಬರ್ 18 ಹಾಗೂ 19, ಡಿಸೆಂಬರ್ 2 ಹಾಗೂ 3ನೇ ತಾರೀಖಿನಂದು ವಿಶೇಷ ಕಾರ್ಯಾಚರಣೆ ನಡೆಸಲಾಗುವುದು. ಈಗಾಗಲೇ ಜಿಲ್ಲೆಯಾದ್ಯಂತ ಜುಲೈ 21 ರಿಂದ ಆಗಸ್ಟ್ 21 ರವರೆಗೆ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 14ಕ್ಕೆ ತಿದ್ದುಪಡಿ ತರಲಾಗಿದೆ. 18 ವರ್ಷ ತುಂಬುವ ಯುವ ಮತದಾರರು ವರ್ಷದ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಹಾಗೂ 1ನೇ ಅಕ್ಟೋಬರ್‍ಗೆ 18 ವರ್ಷ ಪೂರ್ಣಗೊಳ್ಳುವವರು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸದಾಗಿ ಹೆಸರು ಸೇರಿಸಲು ನಮೂನೆ-6, ಹೆಸರುಗಳನ್ನು ಕೈಬಿಡಲು ಅಥವಾ ಆಕ್ಷೇಪಣೆ ಸಲ್ಲಿಸಲು ನಮೂನೆ-7, ಮತದಾರ ಪಟ್ಟಿಯಲ್ಲಿ ತಿದ್ದುಪಡಿ, ವರ್ಗಾವಣೆ, ಎಪಿಕ್ ಕಾರ್ಡು ಬದಲಾವಣೆ ಹಾಗೂ ವಿಕಲಚೇತನ ಮತದಾರರನ್ನು ಗುರುತು ಮಾಡಲು ನಮೂನೆ-8 ಹಾಗೂ ಆಧಾರ್ ಜೋಡಣೆ ಮಾಡಲು ನಮೂನೆ-6ಬಿ ಗಳನ್ನು ತುಂಬಿ ಮತದಾನ ಕೇಂದ್ರ ಅಥವಾ ತಾಲ್ಲೂಕು ಕಚೇರಿ ಅಥವಾ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿಯೂ ಸಲ್ಲಿಸಬಹುದು. ಮತದಾರರು ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಿಸಬೇಕು, ಜಿಲ್ಲೆಯಲ್ಲಿ ಈಗಾಗಲೆ ಶೇ. 89 ರಷ್ಟು ಮತದಾರರು ಆಧಾರ್ ಜೋಡಣೆ ಮಾಡಿಸಿದ್ದಾರೆ. ಅರ್ಜಿಗಳನ್ನು ಗಿಊಂ (ಗಿoಣeಡಿ heಟಠಿ ಟiಟಿe) ನಲ್ಲಿ ಆನ್‍ಲೈನ್ ಮೂಲಕವು ಸಲ್ಲಿಸಬಹುದು ಎಂದರು.
ಕರಡು ಮತದಾರರ ಪಟ್ಟಿಯನ್ನು ಮತಗಟ್ಟೆ ಕೇಂದ್ರ, ಗ್ರಾಮ ಪಂಚಾಯತಿ ಕಚೇರಿ, ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯತಿ, ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರಿಗೆ ಪ್ರಚುರ ಪಡಿಸಲು ಪ್ರಕಟಿಸಲಾಗಿದೆ. ವೆಬ್ ಸೈಟ್ www.ceokarnataka.kar.nic.in ಮತ್ತು https://chitradurga.nic.in ನಲ್ಲಿಯೂ ಸಹ ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ.
46,906 ಯುವ ಮತದಾರರು ನೊಂದಣಿ :

ಕಳೆದ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಜಿಲೆಯಾದ್ಯಂತ 46,906 ಯುವ ಮತದಾರರ ನೊಂದಣಿ ಮಾಡಲಾಗಿದೆ. ಇದರಲ್ಲಿ 25,152 ಪುರುಷ, 21,751 ಮಹಿಳಾ ಹಾಗೂ 03- ಇತರೆ ಯುವ ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ಈ ಬಾರಿ ಯುವ ಮತದಾರರನ್ನು ನೊಂದಣಿ ಮಾಡುವ ಸಲುವಾಗಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ಸಹಾಯಕ ಮತಪಟ್ಟಿ ನೊಂದಣಿ ಅಧಿಕಾರಿಯನ್ನಾಗಿ (ಎಇಆರ್‍ಓ) ಆಗಿ ನೇಮಿಸಲಾಗಿದೆ. ಮುಖ್ಯವಾಗಿ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವ ಮತದಾರರ ನೊಂದಣಿಗೆ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ 80 ವರ್ಷ ದಾಟಿದ 30,000 ಮತದಾರರು ಇದ್ದಾರೆ. ಇದರಲ್ಲಿ 100 ವರ್ಷ ದಾಟಿದ 86 ಮತದಾರರು ಇದ್ದು ಇವರನ್ನು ಸ್ವಾತಂತ್ರ್ಯದಿನಾಚರಣೆ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಮಾಹಿತಿ ನೀಡಿದರು.
ಮತಪಟ್ಟಿಯಲ್ಲಿ ಹೆಸರು ನೊಂದಾಯಿಸಲು ವಯಸ್ಸಿನ ಧೃಡೀಕರಣಕ್ಕಾಗಿ ಜನನ ಪ್ರಮಾಣ ಪತ್ರ, ಆಧಾರ್, ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಅಂಕಪಟ್ಟಿ, ಪಾಸ್ ಪೋರ್ಟ್ ದಾಖಲೆಗಳನ್ನು ನೀಡಬಹುದು. ವಿಳಾಸದ ಧೃಡೀಕರಣಕ್ಕಾಗಿ ನೀರು, ವಿದ್ಯುತ್, ಗ್ಯಾಸ್ ಸಂಪರ್ಕ ಒಂದು ವರ್ಷದ ಬಿಲ್‍ಗಳು, ಆಧಾರ್ ಕಾರ್ಡು, ಬ್ಯಾಂಕ್ ಪಾಸ್ ಬುಕ್, ಪಾಸ್‍ಪೋರ್ಟ್, ಕಂದಾಯ ಇಲಾಖೆಯ ಭೂ ಮಾಲೀಕತ್ವದ ದಾಖಲೆ, ನೊಂದಾಯಿತ ಬಾಡಿಗೆ ಭೋಗ್ಯ ಹಾಗೂ ಕ್ರಯಪತ್ರದ ದಾಖಲೆಗಳನ್ನು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಪರ್ಕ ಕೇಂದ್ರದ ಸಹಾಯವಾಣಿ ಸಂಖ್ಯೆ -08194-222176 ಅಥವಾ ಟೋಲ್ ಫ್ರೀ ಸಂಖ್ಯೆ 1950ಕ್ಕೆ ಕರೆ ಮಾಡಬಹುದು. ಹೊರ ರಾಜ್ಯದ ಮತದಾರರು ಇಲ್ಲಿನ ಮತಪಟ್ಟಿಗೆ ಸೇರ್ಪಡೆಗೊಳ್ಳಲು, ಮೂಲ ಮತದಾರರ ನೊಂದಣಿ ಇರುವೆಡೆ ನಮೂನೆ-8 ರಲ್ಲಿ ವರ್ಗಾವಣೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವೇಳೆ ಜಿಲ್ಲೆಯ ಮತಪಟ್ಟಿಯಲ್ಲಿ ಸೇರ್ಪಡೆ ಮಾಡಲು ಅರ್ಜಿ ಆಂತರಿಕವಾಗಿ ಸೃಜನೆಗೊಳ್ಳುವುದು. ಇದರ ಆಧಾರದಲ್ಲಿ ಅಧಿಕಾರಿಗಳು ವಿಳಾಸಕ್ಕೆ ಭೇಟಿ ನೀಡಿ ಪರಿಶೀಲಿಸಿ ಇಲ್ಲಿನ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವರು. ನಂತರದಲ್ಲಿ ಮೂಲ ಮತಪಟ್ಟಿಯಲ್ಲಿ ಹೆಸರು ನಿಷ್ಕ್ರಮಣೆಗೊಳ್ಳುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದರು.

Latest News >>

ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದ ಕಾರಣ ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕು ಎಂಬುದು ಗ್ರಾಮಸ್ಥರ ಅಳಲು

ಹಿರಿಯೂರು: ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ...

ವರಣುನ ಆರ್ಭಟಕ್ಕೆ ನೆಲಕ್ಕುರಿಳೆ ಬೆಳೆ- ಮನೆಗಳಿಗೆ ನುಗ್ಗಿದ ನೀರು-ಹಳ್ಳಕೊಳ್ಳಗೆ ನೀರು..

ಚಳ್ಳಕೆರೆ ಮೇ25 ವರುಣನ ಆರ್ಭಟಕ್ಕೆ ತೋಟಗಾರಿಕೆ ಬೆಳೆಗಳು ನೆಲಕ್ಕುರಿಳಿದರೆ ಮನೆಗಳಿಗೆ ನೀರು ನುಗ್ಗಿದ ಘಟನೆ ಜರುಗಿದೆ. ತಾಲೂಕಿನಾದ್ಯಂತ...

ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ. ₹ 71.41.325 ರೂ ಸಂಗ್ರಹ ಸಂತಾನ ಭಾಗ್ಯ ನೌಕರಿ ಆರ್ಥಿಕ ಆರೋಗ್ಯ ಸಂಪತ್ತು ಕರುಣಿಸುವಂತೆ ಹುಂಡಿಯಲ್ಲಿ ಲಿಖಿತ ಪತ್ರಗಳು‌ ಪತ್ತೆ ..!.

ನಾಯಕನಹಟ್ಟಿ:: ಮೇ.24. ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು...

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀವೀರಭದ್ರಸ್ವಾಮಿ ರಥೋತ್ಸವ..

ಚಳ್ಳಕೆರೆ ಜನಧ್ವನಿ ವಾರ್ತೆ ಮೇ 22 ನಗರದ ಜನತೆಯ ಆರಾದ್ಯದೈವ ಶ್ರೀ ವೀರಭದ್ರಸ್ವಾಮಿ ರಥೋತ್ಸವವು ಶ್ರದ್ಧೆ ಭಕ್ತಿ ಸಂಭ್ರಮದಿAದ ಬುಧವಾರ...

ವಾಣಿವಿಲಾಸ ಸಾಗರಕ್ಕೆ ಈ ಮಳೆಯಲ್ಲಿ 3800ಕ್ಯೂಸೆಕ್ ನೀರಿನ ಒಳಹರಿವು ರೈತರ ಮೊಗದಲ್ಲಿ ಸಂತಸ ತಂದಿದೆ

ಹಿರಿಯೂರು: ಈ ಬಾರಿ ಸುರಿದ ಮಳೆಯಿಂದಾಗಿ ಕಡೂರು, ಬೀರೂರು, ಹೊಸದುರ್ಗ ಸೇರಿದಂತೆ ವೇದಾವತಿ ಜಲಾನಯನ ಪ್ರದೇಶದಾದ್ಯಂತ ಸುರಿಯುತ್ತಿರುವ...

ಮಾಡಿದಷ್ಟು ನೀಡು ಬಿಕ್ಷೆ ಕಾಯಕಯೋಗಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಕಟ್ಟಿಸಿದ ಚಿಕ್ಕ ಕೆರೆ- 18 ವರ್ಷಗಳ ನಂತರ ಕೆರೆಗೆ ನೀರು ಈ ಭಾಗರದ ಜನರಲ್ಲಿ ಮಂದಹಾಸ ಮೂಡಿಸಿದ ವರುಣ..

ನಾಯಕನಹಟ್ಟಿ ಮೇ 22 ಸುಮಾರು ವರ್ಷಗಳಿಂದ ನೀರು ಕಾಣದ ಕೆರೆಗೆ ನೀರು ಬರುತ್ತಿರುವ ದೃಶ್ಯ ಕಂಡು ಗ್ರಾಮದ ಜನರಲ್ಲಿ ಮಂದಹಾಸ ಮೂಡುವಂತೆ ಮಾಡಿದೆ....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page