ಪರಿಸರವನ್ನ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೀಜದುಂಡೆ ಬಿತ್ತೋತ್ಸವ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದೆ ಪರಿಸರ ಹೋರಾಟಗಾರಾದ ಡಾ|ಎಚ್.ಕೆ.ಎಸ್.ಸ್ವಾಮಿ

by | 30/04/24 | ಪರಿಸರ


ಚಿತ್ರದುರ್ಗ:
ಪರಿಸರ ರಕ್ಷಣೆ ನಮ್ಮೆಲ್ಲರ ಜವಬ್ದಾರಿ. ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೀಜದ ಉಂಡೆ ಬಿತ್ತೋತ್ಸವ ಕಾರ್ಯಕ್ರಮ ಅತ್ಯಂತ ಮಹತ್ವದ್ದು ಎಂಬುದಾಗಿ ಪರಿಸರ ಹೋರಾಟಗಾರ ಡಾ| ಎಚ್.ಕೆ.ಎಸ್.ಸ್ವಾಮಿ ಹೇಳಿದರು.
ಪ್ರಥಮ ಶಿಕ್ಷಣ ಸಂಸ್ಥೆಯಿಂದ ನಗರದ ಜೋಗಿಮಟ್ಟಿ ಮತ್ತು ಆಡುಮಲ್ಲೇಶ್ವರ ಸಾಮಾಜಿಕ ಅರಣ್ಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀಜದ ಉಂಡೆ ಬಿತ್ತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೇವು, ಹೊಂಗೆ,ಹುಣಸೆ, ಹಲಸು, ತೇಗ ಸೇರಿದಂತೆ ಮತ್ತಿತರ ಮರದ ಬೀಜದ ಉಂಡೆಗಳನ್ನು ಬಿತ್ತನೆ ಮಾಡುವ ಮೂಲಕ ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂಬುದಾಗಿ ಅವರು ತಿಳಿಸಿದರು.
ಶಿಕ್ಷಕ ಡಾ| ಮಹೇಶ್ ಮಾತನಾಡಿ, ಬೀಜದ ಉಂಡೆಗಳು ಮುಂದೆ ಮಳೆಗಾಲ ಬಂದಾಗ ಮೊಳಕೆಯೊಡೆದು ಸಸಿಗಳಾಗಿ ಶುದ್ಧವಾದ ಗಾಳಿ, ಅಹ್ಲಾದಕರವಾದ ಪರಿಸರವನ್ನುಂಟುಮಾಡುತ್ತವೆ. ಬೀಜದ ಉಂಡೆಗಳನ್ನು ಹಾಕಿದ ನಂತರ ಅವುಗಳ ಬಗ್ಗೆ ಕಾಳಜಿ ವಹಿಸುವುದು ಕೂಡ ಅಷ್ಟೇ ಮುಖ್ಯ. ಸಂಸ್ಥೆಯ ಪದಾಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂಬುದಾಗಿ ಅವರು ಸಲಹೆ ನೀಡಿದರು.
ಸಂಸ್ಥೆಯ ಖಜಾಂಚಿ ಸುಮಾ ಮಾತನಾಡಿ, ಗಿಡ-ಮರಗಳು ಪರಿಸರದಲ್ಲಿ ಹೆಚ್ಚಾದಂತೆಲ್ಲಾ ಮಳೆ ಸಮೃದ್ಧವಾಗಿ ಸುರಿಯುತ್ತದೆ.ಉತ್ತಮ ಪರಿಸರಕ್ಕಾಗಿ ನಾವೆಲ್ಲಾ ಒಂದುಗೂಡಬೇಕಾಗಿದೆ. ಇದು ಮೊದಲ ಹಂತದ ಬೀಜದ ಉಂಡೆ ಬಿತ್ತೋತ್ಸವ ಕಾರ್ಯಕ್ರಮವಾಗಿದ್ದು ಮುಂದಿನ ದಿನಗಳಲ್ಲಿ ಚಿತ್ರದುರ್ಗದ ಎಲ್ಲಾ ಪ್ರದೇಶಗಳಲ್ಲಿ ನಮ್ಮ ಸಂಸ್ಥೆಯಿಂದ ಬೀಜದ ಉಂಡೆಗಳ ಬಿತ್ತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂಬುದಾಗಿ ಅವರು ತಿಳಿಸಿದರು.
ಸುಮಾರು 500 ಬೀಜದ ಉಂಡೆಗಳನ್ನು ಅರಣ್ಯ ಪ್ರದೇಶದಲ್ಲಿ ಬಿತ್ತನೆ ಮಾಡಲಾಯಿತು ಎಂಬುದಾಗಿ ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ನ್ಯಾಯಾವಾದಿ ಸುಧೀರ್, ಪರಿಸರ ಪ್ರೇಮಿಗಳಾದ ಶ್ರೀಧರ್, ಸಂತೋಷ್, ಸಂಸ್ಥೆಯ ಪದಾಧಿಕಾರಿಗಳಾದ ತಿಮ್ಮರಾಜು, ಚೈತ್ರಾ, ಚಂದ್ರಕಲಾ, ಅನಿತಾ, ಧನು, ಈಶ್ವರಿ, ವೈಷ್ಣವಿ, ಪ್ರಥಮ್, ಪ್ರೀತಂ, ಗಣೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page