ಪರಿಸರವನ್ನ ನಾವೆಲ್ಲರೂ ಕಾಪಾಡಿದರೆ ಪರಿಸರ ನಮ್ಮನ್ನು ಕಾಪಾಡುತ್ತದೆಯುವ ಪೀಳಿಗೆ ಪರಿಸರ ಅಭಿವೃದ್ಧಿಸಿದರೆ ಮುಂದಿನ ಪೀಳಿಗೆಗೆ ಪರಿಸರವನ್ನ ಕೊಡುಗೆಯಾಗಿ ನೀಡಬಹುದು: ಮುಸ್ತಪ

by | 05/06/24 | ಪರಿಸರ

ಚಿತ್ರದುರ್ಗ: ಪರಿಸರವನ್ನು ನಾವೆಲ್ಲರೂ ಕಾಪಾಡಿದರೆ ಆ ಪರಿಸರ ನಮ್ಮೆಲ್ಲರನ್ನು ಕಾಪಾಡುತ್ತದೆ ಹಾಗೂ ಗಿಡಗಳನ್ನ ಬೆಳೆಸಿ ಅವುಗಳನ್ನು ಪೋಷಿಸಿ ಹೆಮ್ಮರವಾಗಿಸಿದರೆ ನಮಗೆ ಉತ್ತಮವಾದ ಆರೋಗ್ಯ ಲಭಿಸುತ್ತದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಪರಿಸರ ದಿನಾಚರಣೆಯನ್ನು ಜೀವನ ಇದಕ್ಕೆ ಆಚರಿಸದೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾದಲ್ಲಿ ಮುಂದಿನ ಪೀಳಿಗೆಗೆ ಪರಿಸರವನ್ನ ಕೊಡುಗೆಯಾಗಿ ನೀಡಬಹುದು ಎಂದು ಹಿರೇಗುಂಟನೂರಿನ ಶ್ರೀ ಸ್ವಾಮಿ ವಿವೇಕಾನಂದ ಸ್ವಾತಂತ್ರ್ಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಆರ್.ಮುಸ್ತಪ ತಿಳಿಸಿದರು.


ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಸ್ವಾತಂತ್ರ್ಯ ಪದವಿ ಪೂರ್ವ ಕಾಲೇಜು ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿ ಮಾತನಾಡಿದರು,
ಗಿಡಗಳನ್ನು ನೆಟ್ಟು ಪೋಷಿಸಿದರೆ ನಮಗೆ ಉತ್ತಮ ಆರೋಗ್ಯ ದೊರೆಯುತ್ತದೆ ವಿನಹ ಪರಿಸರದಿಂದ ಯಾವುದೇ ರೀತಿ ವಿನಾಶಕಾರಿಯಂತು ಆಗುವುದಿಲ್ಲ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಖಾಲಿ ಜಾಗಗಳಲ್ಲಿ ಹಾಗೂ ಹೊಲಗಳಲ್ಲಿ ಗಿಡಗಳನ್ನು ಬೆಳೆಸುವುದರ ಮೂಲಕ ಪರಿಸರವನ್ನ ಅಭಿವೃದ್ಧಿಸಬೇಕಾಗಿದೆ ಎಂದರು.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮೈತ್ರ ಅವರು ಮಾತನಾಡಿ ಮಾನವ ಪರಿಸರದಿಂದ ಎಷ್ಟೆಲ್ಲ ಲಾಭಗಳನ್ನು ಪಡೆದುಕೊಂಡರು ಸಹ ಪರಿಸರ ಅಭಿವೃದ್ಧಿ ಮಾಡದೆ ಪರಿಸರವನ್ನು ವಿನಾಶದ ಕಡೆಗೆ ತೆಗೆದುಕೊಂಡು ಹೋಗುತ್ತಿದ್ದೇವೆ ಇದೇ ರೀತಿ ಪರಿಸರದ ವಿನಾಶ ಮುಂದುವರೆದರೆ ಮುಂದೊಂದು ದಿನ ಮಾನವನ ಸರ್ವನಾಶ ಖಂಡಿತ ಎಂದರು.

ಪರಿಸರ ದಿನಾಚರಣೆಯನ್ನು ಜೂನ್ 5ಕ್ಕೆ ಸೀಮಿತ ಮಾಡದೆ ಹೊಲಗಳ ಬದಿಯಲ್ಲಿ ಖಾಲಿ ಜಾಗಗಳಲ್ಲಿ ಒಂದೊಂದು ಸಸಿಗಳನ್ನು ಹಾಕಿದರೆ ಮುಂದೊಂದು ದಿನ ಬೃಹತ್ ಮರಗಳಾಗಿ ಬೆಳೆದು ಉತ್ತಮ ಗಾಳಿ ನೀಡುವುದರ ಜೊತೆಗೆ ಪಕ್ಷಿಗಳಿಗೆ ಆಶ್ರಯವನ್ನು ಕೂಡ ನೀಡಲಿವೆ. ಹಾಗಾಗಿ ಪರಿಸರವನ್ನು ನಾವೆಲ್ಲರೂ ಕೂಡ ಸಂರಕ್ಷಿಸೋಣ ರಕ್ಷಿಸೋಣ ಬೆಳೆಸೋಣ ಎನ್ನುವ ದೃಢ ನಿರ್ಧಾರಗಳನ್ನು ನಾವು ಕೈಗೆತ್ತಿಕೊಂಡರೆ ಪರಿಸರವನ್ನ ನಾವೆಲ್ಲರೂ ಸಂರಕ್ಷಣೆ ಮಾಡಿದಂತಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅಕ್ಷರ ತಿಳಿಯದೆ ಇದ್ದಂತಹ ಮಹಾನ್ ತಾಯಿ ಸಾಲುಮರದ ತಿಮ್ಮಕ್ಕನವರ ಸಾಧನೆ ವಿಜ್ಞಾನಕ್ಕೆ ಒಂದು ರೀತಿ ಮಾದರಿಯಾಗಿದೆ ಕಾರಣ ಸಾವಿರಾರು ಮರಗಳನ್ನ ಆ ನೆಟ್ಟು ಅವುಗಳನ್ನು ಪೋಷಿಸಿ ಸಮಾಜಕ್ಕೆ ಉತ್ತಮ ಪರಿಸರ ನೀಡಿದ್ದಾರೆ ಹಾಗಾಗಿ ವಿದ್ಯಾರ್ಥಿಗಳು ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳಬೇಕು ಜೊತೆಗೆ ತಮ್ಮ ಕೈಲಾದಷ್ಟು ಸಸಿಗಳನ್ನು ಬೆಳೆಸಿಕೊಳ್ಳುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.

ಚಿತ್ರದುರ್ಗ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಗೌಡಗೆರೆ ಮಾತನಾಡಿ ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯರೆಲ್ಲರೂ ಪರಿಸರ ವಿನಾಶ ಮಾಡುವಂತಹ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನೇ ಯಥೇಚ್ಛವಾಗಿ ಬಳಸುವುದರಿಂದ ಪರಿಸರದ ವಿನಾಶದ ಕಡೆಗೆ ಮಾನವ ಸಾಗುತ್ತಿದ್ದಾನೆ ಅವುಗಳನ್ನು ನಿಯಂತ್ರಿಸಿ ಪರಿಸರವನ್ನ ಅಭಿವೃದ್ಧಿಕಡೆಗೆ ಸಾಗಬೇಕಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಮಳೆಯ ಕುಂಠಿತದಿಂದಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದಾರೆ ಪರಿಸರದಿಂದ ಮಾನವನಿಗೆ ಎಷ್ಟು ಲಾಭಗಳಿವೆ, ಪರಿಸರ ಹಾನಿಯಿಂದ ಅಷ್ಟೇ ಅಪಾಯಕಾರಿಗಳು ಕೂಡ ಇವೆ, ಮನುಷ್ಯರು ಪರಿಸರ ಸಂರಕ್ಷಣೆ ಮಾಡದೇ ಹೋದಲ್ಲಿ ಮನುಷ್ಯನ ಅವನತಿಯತ್ತ ಸಾಗುವಂತಹ ಪರಿಸ್ಥಿತಿ ನಿರ್ಮಾಣಗೊಳ್ಳುತ್ತದೆ ಎಂದರು ಬೇಸರ ವ್ಯಕ್ತಪಡಿಸಿದರು.

ಪರಿಸರದ ವಿನಾಶಕ್ಕೆ ಮಾನವನೇ ಮೊದಲ ಕಾರಣ ಮನುಷ್ಯನ ಅತಿ ಆಸೆಯಿಂದ ಕಾಡನ ಸರ್ವನಾಶದ ಕಡೆಗೆ ತೆಗೆದುಕೊಂಡು ಹೋಗುತ್ತಿದ್ದಾನೆ. ಇತ್ತೀಚಿನ ದಿನಗಳಲ್ಲಿ ವಾತಾವರಣದಲ್ಲಿ ಕಲುಷಿತ ವಾತಾವರಣ ನಿರ್ಮಾಣಗೊಂಡಿದ್ದರಿಂದ ತಾಪಮಾನದಲ್ಲಿ ವಿಪರೀತ ಬದಲಾವಣೆಯಾಗಿದರಿಂದ ಉತ್ತಮ ಆರೋಗ್ಯ, ಗಾಳಿ, ವಾತಾವರಣ ದೊರೆಯದೆ ಅನೇಕ ರೋಗಗಳಿಗೆ ಮಾನವ ತುತ್ತಾಗುತ್ತಿದ್ದಾನೆ ಹಾಗಾಗಿ ಪ್ರತಿಯೊಬ್ಬ ನಾಗರಿಕನು ಕೂಡ ಉತ್ತಮ ವಾತಾವರಣ ಕಾಪಾಡಿಕೊಳ್ಳಲು ಪರಿಸರ ಸಂರಕ್ಷಣೆ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶಿವಮೂರ್ತಿ, ಶ್ರೀಧರ್, ಪೊಲೀಸ್ ಅಧಿಕಾರಿ ಮಂಜಣ್ಣ ಅವರು ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿಯನ್ನು ಮೂಡಿಸಿದರು.

ಈ ಒಂದು ಸಂದರ್ಭದಲ್ಲಿ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಕುಮಾರಸ್ವಾಮಿ, ಕಾರ್ಯದರ್ಶಿ ಆನಂದ್.ಡಿ ಆಲಘಟ್ಟ, ಪ್ರದೀಪ್ ಮಹಾಂತೇಶ್ ದ್ಯಾಮ ಕುಮಾರ್, ಪ್ರವೀಣ್, ಸಂದೀಪ್, ಅಭಿಷೇಕ್, ನಾಗರಾಜ್, ನಿಸಾರ್ ಅಹಮದ್ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page