ಪಾಳುಬಿದ್ದ ಮನೆಯಲ್ಲಿ ನಿಗೂಢ ಐದು ಅಸ್ಥಿಪಂಜರ ಪತ್ತೆ ಬಡಾವಣೆ ಠಾಣೆಯಲ್ಲಿ ದೂರು ದಾಖಲು.

by | 29/12/23 | ಕ್ರೈಂ

ಸಾಂದರ್ಭಿಕ ಚಿತ್ರ
ಚಿತ್ರದುರ್ಗ, ಡಿ​ 29: ನಗರದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ ಆಗಿವೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಮನೆಯಲ್ಲಿ ಪವನ್ ಕುಮಾರ್ ಸಂಬಂಧಿ ಜಗನ್ನಾಥರೆಡ್ಡಿ ಮತ್ತು ಕುಟುಂಬ ವಾಸವಾಗಿದ್ದರು. ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ವಾಸವಾಗಿದ್ದರು.

ಸ್ಥಳೀಯರೊಬ್ಬರು ನೀಡಿದ ಮಾಹಿತಿ ಅಧರಿಸಿ ಪೊಲೀಸರು ಪಾಳುಬಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಈ ಅಸ್ಥಿಪಂಜರಗಳು ಸಿಕ್ಕಿವೆ. ಸ್ಥಳಕ್ಕೆ ಡಿವೈಎಸ್‌ಪಿ ಪಿ.ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಇಲ್ಲವೇ ಕೊಲೆಯಾಗಿದ್ದಾರೆಯೇ? ಎಂಬುವುದರ ಕುರಿತು ಇನ್ನಷ್ಟೇ ತಿಳಿಯಬೇಕಿದೆ. ಸದ್ಯ ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳಿಸಲು ತೀರ್ಮಾನಿಸಲಾಗಿದೆ. ಪೊಲೀಸರ ಸೂಕ್ತ ತನಿಖೆ ಬಳಿಕವಷ್ಟೇ ಐದು ಅಸ್ಥಿಪಂಜರಗಳ ಹಿನ್ನೆಲೆ ಗೊತ್ತಾಗಲಿದೆ.

ಈ ಬಗ್ಗೆ ಜಗನ್ನಾಥರೆಡ್ಡಿ ಸಂಬಂಧಿ ಪವನ್ ಕುಮಾರ್ ಮಾತನಾಡಿ “ಜಗನ್ನಾಥರೆಡ್ಡಿ (80) ನಿವೃತ್ತ ಇಂಜಿನಿಯರ್ ಆಗಿದ್ದರು. ಸುಮಾರು ವರ್ಷಗಳಿಂದ ಜಗನ್ನಾಥರೆಡ್ಡಿ ಕುಟುಂಬ ನಮ್ಮ ಸಂಪರ್ಕದಲ್ಲಿರಲಿಲ್ಲ. ನಮ್ಮ ಮನೆಗೆ ಅವರು ಬರುತ್ತಿರಲಿಲ್ಲ, ಅವರ ಮನೆಗೆ ನಾವು ಹೋಗುತ್ತಿರಲಿಲ್ಲ. ಕೆಲ ವರ್ಷಗಳಿಂದ ಜಗನ್ನಾಥರೆಡ್ಡಿ ಮತ್ತು ಕುಟುಂಬದವರು ಕಂಡಿಲ್ಲ. ಜಗನ್ನಾಥರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವ ಅಸ್ಥಿಪಂಜರ ಅವರದ್ದೇ ಆಗಿರಬಹುದು. ಮೂರು ವರ್ಷದ ಹಿಂದೆಯೇ ಅವರು ಮನೆಯಲ್ಲೇ ಮೃತಪಟ್ಟಿರಬಹುದು” ಎಂದು ಶಂಕಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page