ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆ ನಿಷೇಧ ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬ ಆಚರಿಸಿ -ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

by | 31/08/23 | ಪರಿಸರ


ಚಿತ್ರದುರ್ಗ ಆ.31:
ಸರ್ಕಾರ ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇವುಗಳ ವಿಸರ್ಜನೆಯಿಂದ ಜಲಮೂಲಗಳು ಮಲಿನವಾಗುತ್ತವೆ, ಹೀಗಾಗಿ ಸಾರ್ವಜನಿಕರು ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸುವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಷೇಧಿತ ಗಣಪತಿ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ಮಾಡುವುದನ್ನು ಪರಿಸರ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ತಡೆಗಟ್ಟಬೇಕು. ನಿಷೇಧಿತ ಗಣೇಶ ಮೂರ್ತಿಗಳ ಮಾರಾಟದ ಬಗ್ಗೆ ಪರಿಸರ ಅಧಿಕಾರಿಗಳು ನಿಗಾ ವಹಿಸಬೇಕು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಿವಿಧ ಊರು ಹಾಗೂ ರಾಜ್ಯಗಳಿಂದ ಜಿಲ್ಲೆಗೆ ವಾಹನಗಳ ಮೂಲಕ ಪಿಓಪಿ ಗಣಪತಿ ವಿಗ್ರಹಗಳ ಸಾಗಾಣಿಕೆ ತಡೆಯಲು ಚೆಕ್ ಪೋಸ್ಟ್‍ಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಬೇಕು. ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಪಿಓಪಿ ಗಣಪತಿ ಮಾರಾಟ ಮಾಡುವ ಅಂಗಡಿಗಳಿಗೆ ಲೈಸೆನ್ಸ್ ನೀಡಬಾರದು. ಅಕ್ರಮವಾಗಿ ನಿಷೇಧಿತ ಗಣಪತಿ ವಿಗ್ರಹಗಳ ಮಾರಾಟ ಕಂಡುಬಂದರೆ ತಕ್ಷಣವೇ ಅಂತಹ ಅಂಗಡಿಗಳ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ವಶಪಡಿಸಿಕೊಂಡು ಕೇಸು ದಾಖಲಿಸಬೇಕು, ಅಲ್ಲದೆ ಸುಪರ್ದಿಗೆ ಪಡೆದ ನಿಷೇಧಿತ ವಿಗ್ರಹಗಳನ್ನು ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದರು.
ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ
***************
ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಪ್ರತಿಯೊಬ್ಬರು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಅನುಮತಿ ನೀಡುವ ಸಂದರ್ಭದಲ್ಲಿ ನಿಷೇದಿತ ಪಿಒಪಿ ಹಾಗೂ ಆಯಿಲ್ ಪೇಂಟಿಗ್ ಗಣೇಶ ಮೂರ್ತಿಗಳು, ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ನಿರ್ಬಂಧ ಹೇರಬೇಕು. ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯ ವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧಿಸಬೇಕು. ಯಾವುದೇ ಕಾರಣಕ್ಕೂ ಕೋಮು ಸೌಹಾರ್ಧತೆಗೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಹಂತದಲ್ಲೂ ಶಾಂತಿ ಸಭೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನಿಗಧಿತ ಸ್ಥಳದಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ
***************
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಗಣೇಶ ಮೂರ್ತಿ ವಿಜಸರ್ಜನೆಗೆ ಸ್ಥಳ ಗುರುತಿಸಬೇಕು. ಕೆರೆ, ಕಲ್ಯಾಣಿಗಳಲ್ಲಿ ನೇರವಾಗಿ ಮೂರ್ತಿಗಳನ್ನು ವಿಸರ್ಜಿಸಲು ಅವಕಾಶ ನೀಡಬೇಡಿ. ತಾತ್ಕಾಲಿಕವಾಗಿ ವಿಸರ್ಜನೆಗೆ ಪ್ರತ್ಯೇಕವಾಗಿ ಕೃತಕ ಟ್ಯಾಂಕ್‍ಗಳನ್ನು ನಿರ್ಮಿಸಬೇಕು. ಸ್ಥಳದಲ್ಲಿ ಹೂವು, ಹಣ್ಣು, ಬಾಳೆಕಂಬ ಮಾವಿನ ತೋರಣ ಸೇರಿದಂತೆ ಇತರೆ ಹಸಿ ತ್ಯಾಜ್ಯಗಳನ್ನು ಸಂಗ್ರಹಿಸಲು ವ್ಯವಸ್ಥೆ ಕಲ್ಪಿಸಬೇಕು, ನೀರಿನಲ್ಲಿ ಮೂರ್ತಿಗಳೊಂದಿಗೆ ಇವುಗಳನ್ನು ವಿಸರ್ಜಿಸುವುದನ್ನು ತಡೆಗಟ್ಟಬೇಕು, ಗಣೇಶ ಹಬ್ಬದ ನಂತರ ಮೂರ್ತಿ ವಿಸರ್ಜಿಸುವ ದಿನಗಳಂದು ಸಂಚಾರಿ ಟ್ಯಾಂಕರ್ ಮೂಲಕ ನಗರದ ಓಣಿಗಳಿಗೆ ತೆರಳಿ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಬೇಕು, ಈ ಬಗ್ಗೆ ನಗರ, ಸ್ಥಳೀಯ ಸಂಸ್ಥೆಗಳು ಸಾಕಷ್ಟು ಮೊದಲೇ ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.
ಸಭೆಯಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಟಿ.ಆರ್.ನಯಿಂ ಅಹಮದ್ ಸೇರಿದಂತೆ ಎಲ್ಲಾ ನಗರಸಭೆಯ ಪರಿಸರ ಅಭಿಯಂತರ ಜಾಫರ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ

ಚಳ್ಳಕೆರೆ ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ...

ಜೂ.21 ರ ಶುಕ್ರವಾರ ಬೆಳಗ್ಗೆ 10- 30 ಕ್ಕೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ತಾಪಂ ಇಒ ಶಶಿಧರ್

ಚಳ್ಳಕೆರೆ ಜೂ.19ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜೂ21 ರ ಶುಕ್ರವಾರ ಬೆಳಗ್ಗೆ 10-30 ಕ್ಕೆ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ...

ಗೋವಿಂದಕಾರಜೋಳರನ್ನು ಕೇಂದ್ರಸಚಿವರಾಗಿ ಮಾಡಬೇಕೆಂದು ಹೆಗ್ಗೆರೆ ಮಂಜುನಾಥ್ ಒತ್ತಾಯ

ಹಿರಿಯೂರು: ರಾಜ್ಯದಲ್ಲಿ ಅತಿ ಹೆಚ್ಚು ಎಡಗೈ ಸಮುದಾಯದವರಿದ್ದು, ಈ ಬಾರಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಾಗೆಯೇ ಚಿತ್ರದುರ್ಗ ಲೋಕಸಭಾ...

ಮಹನೀಯರ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ- ಬಿ.ಟಿ. ಕುಮಾರಸ್ವಾಮಿ

ಚಿತ್ರದುರ್ಗ ಜೂನ್19: ಇದೇ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಜುಲೈ 02 ರಂದು ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ...

ಯೋಗ ನಡಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ

ಚಿತ್ರದುರ್ಗ ಜೂನ್18: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page