*ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣಪಿ.ಆರ್.ಟಿ. ಪ್ರತಿಷ್ಠಾನಕ್ಕೆ ರೂ.10 ಲಕ್ಷ ಗೌರವ ಧನ- ಸಚಿವ ಡಿ.ಸುಧಾಕರ್.

by | 10/03/24 | ಸುದ್ದಿ

ಹರ್ತಿಕೋಟೆ.ಮಾರ್ಚ್.10: ‌ಪಿ.ಆರ್.ಟಿ ಎಂದೇ ಜನಮಾನಸದಲ್ಲಿ ಹೆಸರಾಗಿರುವ ಹಿರಿಯೂರು ತಾಲ್ಲೂಕು ಹರ್ತಿಕೋಟೆ ಗ್ರಾಮದ ಪಿ.ಆರ್.ತಿಪ್ಪೇಸ್ವಾಮಿ ನಿಸ್ವಾರ್ಥದಿಂದ ಸಮಾಜಮುಖಿ ಜೀವನ ನಡೆಸಿದವರು. ಅವರ ಕೊಡುಗೆಗಳನ್ನು ನೆನಪಿಸುವ ಕೆಲಸವನ್ನು ಪಿ.ಆರ್.ಟಿ ಪ್ರತಿಷ್ಠಾನ ಮಾಡಬೇಕು. ಈ ಕಾರ್ಯಕ್ಕೆ ಒಂದು ವಾರದಲ್ಲಿಯೇ ರೂ.10ಲಕ್ಷ ಗೌರವ ಧನ ನೀಡುವುದಾಗಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ಭರವಸೆ ನೀಡಿದರು.

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ, ಹಿರಿಯೂರು ತಾಲ್ಲೂಕು ಹರ್ತಿಕೋಟೆಯಲ್ಲಿ,ಭಾನುವಾರ ಆಯೋಜಿಸಿದ್ದ ಪಿ.ಆರ್. ತಿಪ್ಪೇಸ್ವಾಮಿಯವರ ನವೀಕೃತ ಸ್ಮಾರಕ ಲೋಕಾರ್ಪಣೆ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ‌ ಭಾಗವಹಿಸಿ ಅವರು ಮಾತನಾಡಿದರು.

ನವೀಕೃತ ಸ್ಮಾರಕ ನಿರ್ಮಾಣ ಕಾರ್ಯ ನಾಡಿಗೆ ಮಾದರಿಯಾಗಿದೆ‌. ಮೈಸೂರು ವಿಶ್ವ ವಿದ್ಯಾಲಯದಲ್ಲಿ ಪಿ.ಆರ್.ತಿಪ್ಪೇಸ್ವಾಮಿ ಕೆಲಸ ಮಾಡುತ್ತಿದ್ದಾಗ, ಜಿಲ್ಲೆಯ ಹಿಂದುಳಿದ ಭಾಗಗಳಿಂದ ವಿದ್ಯಾಭ್ಯಾಸ ಹರಿಸಿ ಮೈಸೂರಿಗೆ ಬರುವ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದರು. ಅವರ ನಿಸ್ವಾರ್ಥವಾದ ಪ್ರೇಮ ಹಾಗೂ ಕಾಳಜಿಯಿಂದ ಬಹಳಷ್ಟು ಜನ ಉನ್ನತ ವಿದ್ಯಾಭ್ಯಾಸ ಗಳಿಸಿ ಜೀವನಮಟ್ಟ ಸುಧಾರಿಸಿಕೊಂಡಿದ್ದಾರೆ. ಕ್ರೀಯಾಶೀಲ ವ್ಯಕ್ತಿತ್ವದ ಪಿ.ಆರ್.ಟಿ ಬದುಕಿನ ಉದ್ದಕ್ಕೂ ಸಮಾಜ ಕಟ್ಟವ ಕೆಲಸ ಮಾಡಿದರು ಎಂದು ಸಚಿವ.ಡಿ.ಸುಧಾಕರ್ ಸ್ಮರಿಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಾತನಾಡಿ, ದೇಶದ ನೂರಾರು ವಿದ್ಯಾರ್ಥಿಗಳು ಹಾಗೂ ಕಲಾವಿದರ ಬದುಕಿಗೆ ಪಿ.ಆರ್.ಟಿ ದಾರಿ ದೀಪವಾಗಿದ್ದಾರೆ. ಪಿ.ಆರ್.ಟಿ ಅವರ ಸಾಹಿತ್ಯ ಕೃಷಿ ವಿಭಿನ್ನವಾದದು. ಎಂದಿಗೂ ಅವರು ತಮ್ಮ ‌ಸಾಹಿತ್ಯವನ್ನು ವ್ಯಾಪಾರೀಕರಣ ಮಾಡಲಿಲ್ಲ. ತಾವು ಬರೆದ ಕೃತಿಗಳನ್ನು ಇತರರಿಗೆ ಮಾರಾಟ ಮಾಡದೆ ಸ್ನೇಹಿತರಿಗೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಆಸೆ ಆಮಿಷಕ್ಕೆ ಬಲಿಯಾಗದೆ, ಸ್ವಾರ್ಥ ರಹಿತ ಬದುಕು ಜೀವಿಸಿದ ಪಿ.ಆರ್.ಟಿ ನಮಗೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಬೆಂಗಳೂರು ಮಹಾನಗರದಲ್ಲಿನ ಒಂದು ವೃತ್ತಕ್ಕೆ ಹಾಗೂ ಮೈಸೂರಿನ ವಿಶ್ವವಿದ್ಯಾಲಯದ ವಸ್ತು ಸಂಗ್ರಹಾಲಯಕ್ಕೆ ಇವರ ಹೆಸರನ್ನು ನಾಮಕರಣ ಮಾಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ. ಈ ವಿಚಾರದಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳುವ ಭರವಸೆಯನ್ನು ಕೆ.ವಿ.ಪ್ರಭಾಕರ್ ವ್ಯಕ್ತಪಡಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮೀಜಿ, ಸಾಮಾನ್ಯ ವ್ಯಕ್ತಿಯ ಹುಟ್ಟು ಹಾಗೂ ಜೀವನ ಚಾರಿತ್ರಿಕವಾಗಬೇಕಾದರೆ ಅವರ ಜೀವನ ಸಾಧನೆ ಜಗತ್ತಿಗೆ ಮಾದರಿಯಾಗಿರಬೇಕು. ಅಂತಹ ಚಾರಿತ್ರಿಕ ವ್ಯಕ್ತಿತ್ವ ಪಿ.ಆರ್.ತಿಪ್ಪೇಸ್ವಾಮಿ ಅವರದ್ದಾಗಿದೆ. ವೈಯಕ್ತಿಕ ಜೀವನ ಬದಿಗೊತ್ತಿ, ಮದುವೆಯೂ ಅಗದೇ, ಪಿ.ಆರ್.ಟಿ ಅವರು ಸಮಾಜವೇ ತನ್ನ ಕುಟುಂಬ ಎಂದು ಭಾವಿಸಿ ಬದುಕಿದವರು. ಅವರ ಸಾಧನೆ ಅಪಾರವಾದದು. ಪಿ.ಆರ್.ಟಿ.ಚಿತ್ರಕಲೆಯೇ ಜೀವನದ ಉಸಿರನ್ನಾಗಿಸಿ ಸ್ವೀಕರಿಸಿದವರು. ಎಲ್ಲ ವರ್ಗದ ಮಕ್ಕಳಿಗೆ ವಿದ್ಯಾಧಾನ, ಅನ್ನದಾನಮಾಡಿ ಅವರ ಬದುಕಿಗೆ ಆಸರೆಯಾದರು. ಅವರಿಂದ ಸಹಾಯ ಪಡೆದ ಎಲ್ಲರ ಮನಸ್ಸಲ್ಲಿ ಪಿ.ಆರ್.ಟಿ ಸ್ಥಿರವಾಗಿ ಉಳಿದಿದ್ದಾರೆ. ಪಿ ಆರ್ ಟಿ ಪ್ರತಿ ಪ್ರತಿಷ್ಠಾನದ ಸಹಕಾರದಿಂದ ಅವರ ಸ್ಮಾರಕ ನಿರ್ಮಾಣದ ಕೆಲಸ ಆಗಿದೆ. ಇದೇ ಮಾದರಿಯಲ್ಲಿ ಹರ್ತಿಕೋಟೆ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ ಸಹಕರಿಬೇಕು ಎಂದು ನಿರಂಜನಾನಂದ ಪುರಿ ಮಹಾಸ್ವಾಮೀಜಿ ಕೋರಿದರು.

ಪಿ.ಆರ್.ಟಿ ಪ್ರತಿಷ್ಠಾನದ ಸಂಚಾಲಕ ಅರ್ತಿಕೋಟೆ ರುದ್ರಣ್ಣ ಮಾತನಾಡಿ,
ಪಿ.ಆರ್.ಟಿ ಅವರ ಪರಿಶ್ರಮದ ಫಲವಾಗಿ ಮೈಸೂರಿನ ವಸ್ತು ಸಂಗ್ರಹಾಲಯ ಏಷ್ಯಾದಲ್ಲಿ ಪ್ರಸಿದ್ಧಿ ಪಡೆದಿದೆ.‌ ಇದರೊಂದಿಗೆ ಧರ್ಮಸ್ಥಳ ಸುತ್ತೂರಿನಲ್ಲಿ ವಸ್ತು ಸಂಗ್ರಹಾಲಯ ನಿರ್ಮಿಸಿದ ದಾಖಲೆ ಇವರದು. ಕವಿ ದ.ರಾ.ಬೇಂದ್ರೆ ಪಿ.ಆರ್‌.ಟಿ ಅವರನ್ನು ಜಾನಪದ ಜಂಗಮ ಹಾಡಿ ಹೊಗಳಿದ್ದಾರೆ ಎಂದು ಅವರ ಸಾಧನೆಯನ್ನು ಸ್ಮರಿಸಿದರು.


ಈ ಸಮಾರಂಭದಲ್ಲಿ ಪಿಆರ್‌ಟಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ್ ಕದಂಬ, ಗೌರವ ಕಾರ್ಯದರ್ಶಿ ಮಹದೇವ ಶೆಟ್ಟಿ, ಪ್ರಜಾಪ್ರಗತಿ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಗ್ರಾ.ಪಂ.ಅಧ್ಯಕ್ಷ ಪ್ರತಾಪ ಸಿಂಹ, ಉಪಾಧ್ಯಕ್ಷೆ ಮಹೇಶ್ವರಿ ಗೋಡೆ ತಿಪ್ಪೇಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್, ಸ್ಮಾರಕ ಶಿಲ್ಪಿ ನರಸಿಂಹರಾಜು‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನದೊಂದಿಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page