ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಸಮಿತಿ ವತಿಯಿಂದ ಆಗಸ್ಟ್ 06ರಂದು ಪಿ.ಎಸ್.ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿ.ಐ.ಡಿಗೆ ಬದಲಾಗಿ ಸಿ.ಬಿ.ಐ ತನಿಖೆಗೆ ಒಪ್ಪಿಸಬೇಕು, ಹಾಗೂ ಈ ಸಾವಿಗೆ ಕಾರಣರಾದ ಶಾಸಕ ಚೆನ್ನಾರೆಡ್ಡಿ ಹಾಗೂ ಮಗ ಸನ್ನಿಗೌಡ ಇಬ್ಬರನ್ನು ಕೂಡಲೇ ಬಂಧಿಸಬೇಕು ಎಂಬುದಾಗಿ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ರೇವಣಸಿದ್ದಪ್ಪಬಿ.ಕಲ್ಕುಂಟೆ ಒತ್ತಾಯಿಸಿದ್ದಾರೆ.
ನಗರದಲ್ಲಿ ಕರ್ನಾಟಕ ಭೀಮ್ ಸೇನೆ ವತಿಯಿಂದ ಪಿ.ಎಸ್.ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿ.ಐ.ಡಿಗೆ ಬದಲಾಗಿ ಸಿ.ಬಿ.ಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.
ಪಿ.ಎಸ್.ಐ ಪರಶುರಾಮ್ ಮಡದಿಗೆ ಅವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ಕೆಲಸ ಕೊಡಬೇಕೆಂದು ಒತ್ತಾಯಿಸಿದರಲ್ಲದೆ, ಚಿತ್ರದುರ್ಗ ತಾಲ್ಲೂಕು ಗಂಜಿಗಟ್ಟೆ ಗ್ರಾಮದ ಏಕೆ ಕಾಲೋನಿಯ ನಿವೇಶನ ಸಮಸ್ಯೆಯನ್ನು ತುರ್ತಾಗಿ ಪರಿಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ರೇವಣಸಿದ್ದಪ್ಪಬಿ.ಕಲ್ಕುಂಟೆ, ರಾಜ್ಯ ಕಾರ್ಯದರ್ಶಿ ವಿ.ಶಿವಕುಮಾರ್, ಜಿಲ್ಲಾ ಕಾರ್ಯದರ್ಶಿ ಹನುಮಂತು, ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ವಿಜಯ್ ಕುಮಾರ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಎನ್.ಎಚ್. ಗೌತಮ್ ಹಿರಿಯೂರು ತಾಲ್ಲೂಕು ಯುವ ಘಟಕ ಅಧ್ಯಕ್ಷ ವೈ. ಮಹೇಶ್, ತಾಲ್ಲೂಕು ಕಾರ್ಯದರ್ಶಿ ಟಿ.ಪ್ರಭಾಕರ್, ಹಿರಿಯೂರು ತಾಲ್ಲೂಕು ಆಟೋ ಚಾಲಕರ ಘಟಕದ ಅಧ್ಯಕ್ಷ ನಾಗಣ್ಣ ಹೊಸದುರ್ಗ ತಾಲ್ಲೂಕು ಅಧ್ಯಕ್ಷ ರವಿಕುಮಾರ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಗಂಗಾಧರ್ ಮೊಳಕಾಲ್ಮೂರು ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಜಿಲ್ಲಾ ಮುಖಂಡ ಪಾಂಡುರಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments