ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಕನ್ನಡ ರಾಜ್ಯೋತ್ಸವ: ವಿಜೃಂಭಣೆಯಿಂದ ಆಚರಣೆ

by | 25/10/23 | ಸುದ್ದಿ


ಚಿತ್ರದುರ್ಗ ಅ.25:
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 01 ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಹೀಗಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು ಹೆಚ್ಚು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅದರನ್ವಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ ಪೂರ್ವಭಾವಿ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ನಾಮಕರಣಕ್ಕೆ 50 ವರ್ಷಗಳ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 01 ರಂದು ಜಿಲ್ಲಾ ಕೇಂದ್ರದಲ್ಲಿ ಹೆಚ್ಚು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ರಾಜ್ಯೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 7.30ಕ್ಕೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಯು ನಗರದ ನೀಲಕಂಠೇಶ್ವರ ದೇಗುಲದಿಂದ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ ನಮ್ಮ ನಾಡು, ನುಡಿ, ಸಂಸ್ಕøತಿ ಬಿಂಬಿಸುವ ವಿವಿಧ ವೈವಿಧ್ಯಮಯ ಜಾನಪದ ಕಲಾತಂಡಗಳು ಪಾಲ್ಗೊಳ್ಳಲಿವೆ. ಇದಕ್ಕ ಬೇಕಾದ ತಂಡಗಳನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ್ಯವಸ್ಥೆಗೊಳಿಸಬೇಕು. ಇದರ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಭದ್ರಾ ಮೇಲ್ದಂಡೆ ಯೋಜನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಸ್ತಬ್ಧಚಿತ್ರಗಳು, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರದ ಯೋಜನೆಗಳನ್ನು ಸ್ತಬ್ಧಚಿತ್ರಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೆರವಣಿಗೆಯು ನಗರದ ನೀಲಕಂಠೇಶ್ವರದ ದೇಗುಲದಿಂದ ಹೊರಟು, ಪ್ರಮುಖ ರಸ್ತೆ ಮೂಲಕ ರಾಜ್ಯೋತ್ಸವ ಸಮಾರಂಭ ಜರುಗುವ ಪೊಲೀಸ್ ಕವಾಯತು ಮೈದಾನದವರೆಗೆ ಸಾಗಿ ಬರಲಿದೆ. ಅಂದು ಬೆಳಿಗ್ಗೆ 9ಕ್ಕೆ ಪೊಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ನೆರವೇರಲಿದ್ದು, ಶಿಷ್ಠಾಚಾರದ ಅನ್ವಯ ಎಲ್ಲ ಗಣ್ಯಮಾನ್ಯರನ್ನು ಆಹ್ವಾನಿಸಲಾಗುವುದು. ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಅಂದು ಬೆಳಿಗ್ಗೆ ಪೊಲೀಸ್ ಕವಾಯತು ಮೈದಾನದಲ್ಲಿ ಹಾಗೂ ಸಂಜೆ ತರಾಸು ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಕರ್ನಾಟಕಕ್ಕೆ 50 ರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷವಾಗಿ ಈ ನಾಡಿನ ಹೆಸರಾಂತ 05 ಕವಿಗಳು ರಚಿಸಿರುವ ಗೀತೆಗಳನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಇದರನ್ವಯ ಹುಯಿಲಗೋಳ ನಾರಾಯಣರಾಯರು ರಚಿಸಿರುವ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು”, ಕುವೆಂಪು ರಚಿತ “ಎಲ್ಲಾದರು ಇರು ಎಂತಾದರು ಇರು”, ದ.ರಾ.ಬೇಂದ್ರ ರಚಿಸಿರುವ “ಒಂದೇ ಒಂದೇ ಕರ್ನಾಟಕ ಒಂದೇ”, ಸಿದ್ದಯ್ಯ ಪುರಾಣಿಕರು ರಚಿಸಿರುವ “ಹೊತ್ತಿತೋ ಹೊತ್ತಿತು ಕನ್ನಡದ ದೀಪ”, ಹಾಗೂ ಚನ್ನವೀರ ಕಣವಿ ಅವರು ಬರೆದಿರುವ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ 05 ಗೀತೆಗಳನ್ನು ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡಿಸಬೇಕು, ಇದಕ್ಕಾಗಿ ಉತ್ತಮ ಗೀತ ಗಾಯನ ತಂಡವನ್ನು ಆಯ್ಕೆಮಾಡಿ, ಹಾಡುಗಳನ್ನು ಪ್ರಸ್ತುತಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ರೀತಿ, ಜಿಲ್ಲೆಯ ಎಲ್ಲೆಡೆಯೂ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 05 ಗೀತೆಗಳನ್ನು ಕಡ್ಡಾಯವಾಗಿ ಹಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಚರಿಸಲು ಅನುವಾಗುವಂತೆ ರಚಿಸಲಾಗಿರುವ ಸ್ವಾಗತ ಸಮಿತಿ, ಹಣಕಾಸು ಸಮಿತಿ, ಮೆರವಣಿಗೆ ಸಮಿತಿ ಹಾಗೂ ಜಿಲ್ಲಾಮಟ್ಟದ ಪ್ರಶಸ್ತಿಗೆ ಆಯ್ಕೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ನಗರಸಭೆ ಪೌರಾಯುಕ್ತೆ ರೇಣುಕಾ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಮತ್ತಿತರರು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page