ಪೂರ್ವಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆಡಿ.16 ಮತ್ತು 17ರಂದು ಗ್ರೂಪ್-ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಿ.

by | 14/12/23 | ಸುದ್ದಿ

Member Login

ಚಿತ್ರದುರ್ಗ ಡಿ.14:
ಇದೇ ಡಿಸೆಂಬರ್ 16 ಮತ್ತು 17ರಂದು ಗ್ರೂಪ್-ಸಿ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‍ಸಿ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕೆಪಿಎಸ್‍ಸಿ ಗ್ರೂಪ್-ಸಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೊಬೈಲ್, ಬ್ಲೂಟೂತ್ ಮತ್ತು ಆಧುನಿಕ ಸಂವಹನದ ಉಪಕರಣ ಬಳಸಿ ಪರೀಕ್ಷಾ ಅಕ್ರಮ ಮಾಡುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಹಾಗೂ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಸಲಾಗುವುದು. ಪರೀಕ್ಷಾ ಸಂಬಂಧ ಕೆಪಿಎಸ್‍ಸಿ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲನೆ ಮಾಡಬೇಕು ಎಂದು ತಾಕೀತು ಮಾಡಿದರು.
ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ಡಿಸೆಂಬರ್ 16ರಂದು ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಕನ್ನಡ ಭಾಷಾ ಪರೀಕ್ಷೆಯು ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, 8 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಡಿಸೆಂಬರ್ 17ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಜ್ಞಾನದ ಪರೀಕ್ಷೆಯು ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, 744 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದೇ ದಿನ ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆಯು ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, 481 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಗ್ರೂಪ್-ಸಿ ಹುದ್ದೆಗಳಿಗೆ ಒಟ್ಟು 1225 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೂರಕವಾಗಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುಂಚೆ ಸೂಕ್ತವಾಗಿ ತಪಾಸಣೆ ನಡೆಸಬೇಕು. ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕು ಪ್ರಶ್ನೆಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.
ಪರೀಕ್ಷಾ ಕಾರ್ಯ ಮುಗಿದ ನಂತರ ಬೆಳಗಿನ ಅವಧಿ ಉತ್ತರ ಪತ್ರಿಕೆಗಳನ್ನು ಮತ್ತು ಮಧ್ಯಾಹ್ನ ಅವಧಿಯ ಉತ್ತರ ಪತ್ರಿಕೆಗಳ ಬಂಡಲ್‍ಗಳನ್ನು ಅಧಿವೇಶನವಾರು ಆಯಾ ಅಧೀವೇಶನದ ಪರೀಕ್ಷೆ ಮುಗಿದ ನಂತರ ಅಂಚೆ ಕಚೇರಿಯ ಮೂಲಕ ಆಯೋಗಕ್ಕೆ ಸುರಕ್ಷಿತವಾಗಿ ತಲುಪಿಸಬೇಕು ಎಂದು ಅಂಚೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಪರೀಕ್ಷಾ ಕೇಂದ್ರದಲ್ಲಿ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ಸ್ಥಾಪಿಸಿ, ಆರೋಗ್ಯ ತಪಾಸಣೆಗಾಗಿ ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಜಾಮರ್, ಸಿ.ಸಿ.ಟಿ.ವಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಪರೀಕ್ಷಾ ನೋಡಲ್ ಅಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ, ಪೊಲೀಸ್ ಇಲಾಖೆಯ ಗುಡ್ಡಪ್ಪ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ವೆಂಕಟೇಶ್, ನಾಗಭೂಷಣ್ ಸೇರಿದಂತೆ ಜಿಲ್ಲಾ ಖಜನಾಧಿಕಾರಿಗಳು, ಅಂಚೆ ಇಲಾಖೆ ಅಧಿಕಾರಿಗಳು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page