ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿಕೆ ಪರೀಕ್ಷೆ ಪಾವಿತ್ರ್ಯತೆ ಹಾಗೂ ನೈತಿಕತೆ ಕಾಪಾಡಿ

by | 15/03/24 | ಸುದ್ದಿ


ಚಿತ್ರದುರ್ಗ ಫೆ.15 :
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾಗಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಮೌಲ್ಯಮಾಪನದ ಜೊತೆಗೆ, ಶಿಕ್ಷಕರ ಬೋಧನಾ ಸಾಮಾಥ್ರ್ಯ ಹಾಗೂ ಶೈಕ್ಷಣಿಕ ವ್ಯವಸ್ಥೆಯ ಮೌಲ್ಯಮಾಪನದ ಮಾನದಂಡವು ಆಗಿದೆ. ಹೀಗಾಗಿ ಪರೀಕ್ಷೆ ಪಾವಿತ್ರ್ಯತೆ ಹಾಗೂ ನೈತಿಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕಾರ್ಯಗಳನ್ನು ಮುತುವರ್ಜಿಯಿಂದ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಹೇಳಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕುರಿತು ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಪರೀಕ್ಷಾ ಕಾರ್ಯಗಳಲ್ಲಿ ಎಲ್ಲೂ ಲೋಪವಾಗದಂತೆ ನೋಡಿಕೊಳ್ಳಿ. ಎಲ್ಲಾ ತಾಲ್ಲೂಕು ಉಪಖಜಾನೆಗಳಿಂದ ನಿಗದಿ ವೇಳೆಗೆ ತಹಶೀಲ್ದಾರ್, ಬಿಇಓ ಹಾಗೂ ಖಜಾನಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಪತ್ರಿಕೆ ಹಾಗೂ ಖಾಲಿ ಉತ್ತರ ಪತ್ರಿಕೆಗಳನ್ನು ಹೊರತೆಗದು ಮಾರ್ಗಾಧಿಕಾರಿಗಳಿಗೆ ನೀಡಬೇಕು. ಪರೀಕ್ಷಾ ನಂತರ ಉತ್ತರ ಪತ್ರಿಕೆಗಳನ್ನು ಮಾರ್ಗಾಧಿಕಾರಿಗಳೇ ಸ್ಟ್ರಾಂಗ್ ರೂಮ್‍ಗೆ ತಲುಪಿಸಬೇಕು. ಈ ಸಮಯದಲ್ಲಿ ತಪ್ಪದೇ ಪೊಲೀಸ್ ಭದ್ರತೆಯನ್ನು ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಗುರುತಿಸಲಾಗಿರುವ 5 ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನೇಮಿಸಬೇಕು. ಬೇಸಿಗೆ ಕಾಲವಾದ್ದರಿಂದ ಎಲ್ಲಾ ಪರೀಕ್ಷೆ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿಯೂ ಪ್ರಥಮ ಚಿಕಿತ್ಸಾ ಪರಿಕರದೊಂದಿಗೆ ಆರೋಗ್ಯ ಸಿಬ್ಬಂದಿಯನ್ನು ನೇಮಿಸಬೇಕು. ಸಾರಿಗೆ ಅಧಿಕಾರಿಗಳು ಮಾರ್ಗಾಧಿಕಾರಿಗಳಿಗೆ ಅಗತ್ಯ ಇರುವ ವಾಹನಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚನೆ ನೀಡಿದರು.
ಮಾರ್ಚ್ 25 ರಿಂದ ಏಪ್ರಿಲ್ 06 ವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ 78 ಕೇಂದ್ರದಲ್ಲಿ 24,228 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 5 ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಸಾಗಾಟಕ್ಕೆ ಒಟ್ಟು 34 ಮಾರ್ಗಗಳನ್ನು ಗುರುತಿಸಲಾಗಿದೆ ಎಂದು ಚಿತ್ರದುರ್ಗ ಬಿಇಓ ನಾಗಭೂಷಣ್ ಸಭೆಯಲ್ಲಿ ಮಾಹಿತಿ ನೀಡಿದರು.
ಒಟ್ಟು 24228 ವಿದ್ಯಾರ್ಥಿಗಳು : ಮಾ. 25 ರಿಂದ ಜಿಲ್ಲೆಯ 78 ಪರೀಕ್ಷಾ ಕೇಂದ್ರಗಳಲ್ಲಿ ಜರುಗುವ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯ 24228 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಚಳ್ಳಕೆರೆ ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಲ್ಲಿ 5387 ವಿದ್ಯಾರ್ಥಿಗಳು, ಚಿತ್ರದುರ್ಗ ತಾಲ್ಲೂಕಿನ 21 ಪರೀಕ್ಷಾ ಕೇಂದ್ರಗಳಲ್ಲಿ 6662 ವಿದ್ಯಾರ್ಥಿಗಳು, ಹಿರಿಯೂರು ತಾಲ್ಲೂಕಿನ 13 ಪರೀಕ್ಷಾ ಕೇಂದ್ರಗಳಲ್ಲಿ 3716 ವಿದ್ಯಾರ್ಥಿಗಳು, ಹೊಳಲ್ಕೆರೆ ತಾಲ್ಲೂಕಿನ 08 ಪರೀಕ್ಷಾ ಕೇಂದ್ರಗಳಲ್ಲಿ 2739 ವಿದ್ಯಾರ್ಥಿಗಳು, ಹೊಸದುರ್ಗ ತಾಲ್ಲೂಕಿನ 10 ಪರೀಕ್ಷಾ ಕೇಂದ್ರಗಳಲ್ಲಿ 3333 ವಿದ್ಯಾರ್ಥಿಗಳು, ಮೊಳಕಾಲ್ಮೂರು ತಾಲ್ಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ 2391 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ವಿ. ಲಕ್ಷ್ಮೀನಾರಾಯಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಭಿವೃದ್ಧಿ ವಿಭಾಗದ ಡಿ.ಡಿ.ಪಿ.ಐ ನಾಸೀರುದ್ದಿನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್.ಎಂ.ಕಾಳೆಸಿಂಘೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಮಾರ್ಗಾಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page