ಚಳ್ಳಕೆರೆ ಜನಧ್ವನಿ ವಾರ್ತೆ ಜ.30 ಕರ್ನಾಟಕ ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಚಳ್ಳಕೆರೆ ಹಾಗೂ ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆಬ್ರವರಿ 6 ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ಚಳ್ಳಕೆರೆ ನಗರದಲ್ಲಿ ಪ್ರಜಾಧ್ವನಿ ಸಮವೇಶ ನಡೆಯಲಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆಯನ್ನು ನಡೆಸಲಿದೆ.ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಜಿಲ್ಲಾವಾರು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಂಡಿದ್ದು ಪೆಬ್ರವರಿ 6 ರ ಸೋಮವಾರ ಚಳ್ಳಕೆರೆ ನಗರಕ್ಕೆ ಪ್ರವೇಶ ಮಾಡಲಿದ್ದು ಪ್ರಜಾಧ್ವನಿ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಹಾಗೂ ಕ್ಷೇತ್ರದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ತಾಲೂಕು ಅಧ್ಯಕ್ಷ ಪುರುಶೋತ್ತಮನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
0 Comments