ಮಡಿಕೇರಿ ನ.03:-ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ ಹಾಗೂ ಸಮಗ್ರ ಬೇಸಾಯ ಪದ್ಧತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಪೆÇನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ ರಾಜ್ಯ ಮಟ್ಟದ ‘ಕೃಷಿಯಂತ್ರ ಮೇಳ’ವನ್ನು ಶುಕ್ರವಾರ ಉದ್ಘಾಟಿಸಿ ಸಚಿವರು ಮಾತನಾಡಿದರು.
ಜನಸಾಮಾನ್ಯರು, ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆದ್ಯತೆ ಆಗಿದೆ. ರಾಜ್ಯ ಸರ್ಕಾರ ಕೃಷಿಕರ ಅನುಕೂಲಕ್ಕಾಗಿ 600 ಕ್ಕೂ ಹೆಚ್ಚು ಯಂತ್ರಧಾರೆ ಕೇಂದ್ರ ಗಳನ್ನು ತೆರದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಯಂತ್ರೀಕರಣ ಪೆÇ್ರೀತ್ಸಾಹ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಹೈಟೆಕ್ ಕಟಾವು ಹಬ್ ಸ್ಥಾಪನೆಗೆ 50 ಕೋಟಿ ಮೀಸಲಿರಿಸಲಾಗಿದ್ದು 70:30 ರ ಸಹಾಯಧನ- ಬಂಡವಾಳ ಹೂಡಿಕೆ ಅನುಪಾತದಲ್ಲಿ ರೈತರೇ ಇದನ್ನು ಸ್ಥಾಪಿಸಿ ನಡೆಸ ಬಹುದಾಗಿದೆ ಎಂದು ಸಚಿವರು ಹೇಳಿದರು.
ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆ ವತಿಯಿಂದ ಖಾಸಗಿಯಾಗಿ ವಿದ್ಯಾರ್ಥಿಗಳಿಗೆ ಕೃಷಿಯಲ್ಲಿ ತಾಂತ್ರಿಕ ಶಿಕ್ಷಣ ನೀಡುತ್ತಿರುವುದು ಹಾಗೂ ಕೃಷಿಗೆ ಪೂರಕವಾದ ಯಂತ್ರ ಮೇಳವನ್ನು ಆಯೋಜಿಸಿರುವುದು ಅಭಿನಂದನಾರ್ಹ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾವೇರಿ, ನಮ್ಮ ನಾಡಿನ ಜೀವನದಿ, ಕೊಡಗಿನಲ್ಲಿ ಹುಟ್ಟಿ ರಾಜ್ಯದ ಕೋಟ್ಯಾಂತರ ಜನರ ಜೀವನಾಧಾರವಾಗಿ ಹರಿಯುತ್ತಿದೆ. ಈ ಬಾರಿ ಬರ ಪರಿಸ್ಥಿತಿ ತಲೆದೋರಿದ್ದು, ನೀರಿನ ಹಂಚಿಕೆ ಸಮಸ್ಯೆಯೂ ಉದ್ಭವವಾಗಿದೆ. ಕೇಂದ್ರಕ್ಕೆ ಬೆಳೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೇವೆ. ರಾಜ್ಯ ಸರ್ಕಾರ ರೈತರ ಹಿತ ಕಾಯಲು ಬದ್ದವಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.
ಕೊಡಗು ವಿಭಿನ್ನ ಸಂಸ್ಕøತಿ, ಸುಂದರ ಪ್ರಕೃತಿ ಹೊಂದಿರುವ ವೀರರ ನಾಡು. ಇಲ್ಲಿಗೆ ಭೇಟಿ ನೀಡುವುದೇ ಒಂದು ಸಂತೋಷ ಎಂದು ಅವರು ಅಭಿಮಾನದ ನುಡಿಗಳನ್ನಾಡಿದರು.
ರಾಜ್ಯದಲ್ಲಿ ನೂತನ ಸರ್ಕಾರ ಬಂದು ನಾಲ್ಕು ತಿಂಗಳಲ್ಲಿ ನಾವು ನೀಡಿದ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದು, ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ರೈತರಿಗೆ 5 ಲಕ್ಷ ರೂಗಳ ವರಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ಸ್ತ್ರೀ ಶಕ್ತಿ, ಸ್ವಸಹಾಯ ಸಂಘಗಳಿಗೂ ಆರ್ಥಿಕ ನೆರವು ಒದಗಿಸುತ್ತಿದೆ ಎಂದು ಅವರು ವಿವರಿಸಿದರು.
ಗೃಹಲಕ್ಷಿ ಯೋಜನೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಬೇಕಿದೆ. ಹಾಗಾಗಿ ಪ್ರತಿ ಮನೆಯ ಸಮೀಕ್ಷೆ ನಡೆಸಿ ಬಿಟ್ಟು ಹೋದವರನ್ನು ಗುರುತಿಸಿ ಸೌಲಭ್ಯ ಒದಗಿಸಲು ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರಾದ ಚಲುವರಾಯಸ್ವಾಮಿ ತಿಳಿಸಿದರು.
ಇದೇ ವೇಳೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರಾದ ಎ.ಎಸ್ ಪೆÇನಣ್ಣ ಅವರ ವ್ಯಕ್ತಿತ್ವ, ಜನಪರ ಕಾಳಜಿ ಬಗ್ಗೆ ಕೃಷಿ ಸಚಿವರು ಶ್ಲಾಘಿಸಿದರು.
ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್. ಪೆÇನ್ನಣ್ಣ ಅವರು ಕೃಷಿಯ ಪ್ರಾಮುಖ್ಯತೆ, ತಂತ್ರಜ್ಞಾನ ಅಳವಡಿಕೆಯ ಲಾಭ, ರಾಜ್ಯ ಸರ್ಕಾರದ ಜನಪರ ಕಾಳಜಿ ಬಗ್ಗೆ ವಿವರಿಸಿ ಮಾತನಾಡಿ, ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಹೆಚ್ಚಿನ ಆಹಾರ ಬೆಳೆಗಳನ್ನು ಉತ್ಪಾದಿಸುವಂತಾಗಬೇಕು ಎಂದು ಸಲಹೆ ನೀಡಿದರು.
ರಾಷ್ಟ್ರದಲ್ಲಿ ಕೃಷಿ ಕ್ಷೇತ್ರದಲ್ಲಿ 60 ಕ್ಕಿಂತ ಹೆಚ್ಚು ಜನರು ತೊಡಗಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಆಧುನಿಕ ಕೃಷಿ ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಜೊತೆಗೆ ಆರ್ಥಿಕವಾಗಿ ಕೃಷಿಕರು ಸಬಲರಾಗಬೇಕು ಎಂದರು.
ಕೃಷಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಕೃಷಿಕರ ನಿರೀಕ್ಷೆಗಳನ್ನು ಮನದಟ್ಟು ಮಾಡಿಕೊಂಡು ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯದ ರೈತರ, ಬಡವರ ಒಳಿತಿಗಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪೊನ್ನಣ್ಣ ಅವರು ಹೇಳಿದರು.
ಪೊನ್ನಂಪೇಟೆ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ.ಎಂ.ಸಿ.ಕಾರ್ಯಪ್ಪ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಲೀಲಾವತಿ, ಪೊನ್ನಂಪೇಟೆ ಕೊಡವ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷರಾದ ಕೆ.ಎ.ಚಿನ್ನಪ್ಪ, ಕೋಶಾಧಿಕಾರಿ ಕೆ.ಎನ್.ಉತ್ತಪ್ಪ, ಪ್ರಾಂಶುಪಾಲರಾದ ಡಾ.ಎಂ.ಬಸವರಾಜ್, ಬೆಳ್ಳಿ ಹಬ್ಬದ ಸಂಚಾಲಕರಾದ ಡಾ.ರೋಹಿಣಿ ತಿಮ್ಮಯ್ಯ, ಕೃಷಿ ಯಂತ್ರ ಮೇಳದ ಸಂಚಾಲಕರಾದ ಡಾ.ಬಿ.ಬಿ.ರಾಮಕೃಷ್ಣ, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಇದ್ದರು.
ಕೊಡಗು ರೈತ ಸಂಘದ ಅಧ್ಯಕ್ಷರಾದ ಮನುಸೋಮಯ್ಯ, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕøತರಾದ ಡಾ.ವಿಜಯ್ ಅಂಗಡಿ, ಕೃಷಿಕರಾದ ಬಾರಿಯಂಡ ಸಂಜನ್ ಪೊನ್ನಪ್ಪ, ವಾಟೇರಿರ ಪೊನ್ನಪ್ಪ, ಕೆ.ಎಸ್.ಮಂಜುನಾಥ್, ಚಟ್ಟನೆರವನ ಪಿ.ಚಂದ್ರಶೇಖರ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪೆÇನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ‘ಕೃಷಿ ಯಂತ್ರ ಮೇಳ’ಕ್ಕೆ ಚಾಲನೆ ವೈಜ್ಞಾನಿಕ ಕೃಷಿಯಿಂದ ರೈತರ ಆರ್ಥಿಕತೆ ವೃದ್ಧಿ: ಎನ್. ಚಲುವರಾಯಸ್ವಾಮಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments