ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರೌಡಿಗಳ ಹಾವಳಿಗೆ ಕಡಿವಾಣ, ಸೈಬರ್ ಅಪರಾಧ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಡಾ. ಜಿ. ಪರಮೇಶ್ವರ್

by | 17/11/23 | ಕರ್ನಾಟಕ

ಚಿತ್ರದುರ್ಗ ನ. 17
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಗಳ ಹಾವಳಿಗೆ ಕಡಿವಾಣ ಹಾಕಬೇಕು, ಸೈಬರ್ ಕ್ರೈಂ ಬಗ್ಗೆ ಜನಜಾಗೃತಿ ಮೂಡಿಸಿ ಅಪರಾಧ ತಡೆಗಟ್ಟಬೇಕು ಹಾಗೂ ಡ್ರಗ್ಸ್ ಪ್ರಕರಣಗಳಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ಸರ್ಕಾರದ ಗುರಿಯಾಗಿದೆ. ರಾಜ್ಯದಲ್ಲಿ ಡ್ರಗ್ಸ್ ಸಂಪೂರ್ಣವಾಗಿ ಮಟ್ಟ ಹಾಕಬೇಕು. ಈ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯು ರಾಜ್ಯದಲ್ಲಿ ಮಾದರಿಯಾಗಿ ಹೊರ ಹೊಮ್ಮಬೇಕು. ಪೆಡ್ಲರ್‍ಗಳು ಹೊರ ರಾಜ್ಯಗಳಿಂದ ವಿವಿಧ ಬಗೆಯ ಡ್ರಗ್ಸ್ ಸರಬರಾಜು ಮಾಡುತ್ತಿರುತ್ತಾರೆ. ಈ ಕುರಿತಂತೆ ಚಲನವಲನಗಳ ಮೇಲೆ ಸೂಕ್ಷ್ಮವಾಗಿ ನಿಗಾವಹಿಸಬೇಕು. ಹೊರ ರಾಜ್ಯದ ಗಡಿಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಬೇಕು. ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ಚಟಗಳಿಗೆ ಮಾರು ಹೋಗುತ್ತಿದ್ದು, ಅವರ ಚಟುವಟಿಕೆಗಳ ಮೇಲೆ ನಿಗಾವಹಿಸುವುದು ಅಗತ್ಯ. ಡ್ರಗ್ಸ್ ಸೇವಿಸುವವರು ಅಥವಾ ಪೂರೈಕೆ ಮಾಡುವವರು ಸಿಕ್ಕಿಬಿದ್ದರೆ, ಮೂಲ ಆರೋಪಿಯನ್ನು ಪತ್ತೆ ಹಚ್ಚುವವರೆಗೂ ತನಿಖೆ ಕೈಗೊಳ್ಳಬೇಕು. ಡ್ರಗ್ಸ್ ಸೇವನೆ ತಪ್ಪು, ಅದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಮನೆ ಕಳ್ಳತನ, ಸುಲಿಗೆ, ದರೋಡೆ ಪ್ರಕರಣಗಳನ್ನು ಮಟ್ಟ ಹಾಕಲು, ಆರೋಪಿಗಳ ಚಲವಲನದ ಮೇಲೆ ನಿಗಾವಹಿಸಲು ಪೆÇಲೀಸರ ಗಸ್ತು ತಿರುಗುವುದು ಹೆಚ್ಚಾಗಬೇಕು. ಠಾಣೆಗಳಲ್ಲಿ ಹೆಲ್ಪಿಂಗ್ ಡೆಸ್ಕ್, ಸಿ.ಸಿ ಕ್ಯಾಮರಾ ಇರಬೇಕು. ದೂರು ನೀಡಲು ಠಾಣೆಗೆ ಬರುವ ಜನರ ಸಮಸ್ಯೆಗಳನ್ನು ಪೊಲೀಸ್ ಅಧಿಕಾರಿಗಳು ತಾಳ್ಮೆವಹಿಸಿ ಆಲಿಸಬೇಕು. ಠಾಣೆಗಳಲ್ಲಿ ಜನರ ದೂರುಗಳಿಗೆ, ಸ್ಪಂದಿಸುವ ಕಾರ್ಯವಾಗಬೇಕು, ಒಟ್ಟಾರೆ ಪೊಲೀಸ್ ಠಾಣೆಗಳಲ್ಲಿ ‘ಜನಸ್ನೇಹಿ ಪೆÇಲೀಸ್’ ವಾತಾವರಣ ನಿರ್ಮಾಣ ಮಾಡಬೇಕು ಎಂದರು.
ಕಿಡಿಗೇಡಿಗಳು ಧರ್ಮ, ಜಾತಿ ಹೆಸರಲ್ಲಿ ಅವಹೇಳನಕಾರಿ ಪೆÇೀಸ್ಟ್‍ಗಳನ್ನು ಸೃಷ್ಟಿಸಿ ಗಲಭೆ ಉಂಟು ಮಾಡಲು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿರುತ್ತಾರೆ. ಎಲ್ಲಿಯೋ ನಡೆದ ಘಟನೆಯನ್ನು ತಿರುಚಿ ಶಾಂತಿ ಕದಡುವಂತೆ ಮಾಡುತ್ತಾರೆ. ಅಲ್ಲದೇ, ಡೀಪ್‍ಫೇಕ್ ಎಂಬ ತಂತ್ರಜ್ಞಾನ ಬಳಸಿಕೊಂಡು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ನಡೆಯುತ್ತಿರುವ ವರದಿಯಾಗುತ್ತಿವೆ. ಇಂತಹ ಪ್ರಕರಣಗಳನ್ನು ನಿರ್ಲಕ್ಷಿಸುವುದು ಬೇಡ. ಈ ರೀತಿಯ ದೂರುಗಳು ಬಂದಾಗ ಕೂಡಲೇ ಎಫ್‍ಐಆರ್ ದಾಖಲಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯದ ಪ್ರಮುಖ ನಗರಗಳಲ್ಲಿ ಸೈಬರ್ ಕ್ರೈಂ ಚಟುವಟಿಕೆ ಹೆಚ್ಚಾಗುತ್ತಿವೆ. ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ತಂತ್ರಜ್ಞಾನವನ್ನು ಬಳಸಿಕೊಂಡು ಮಟ್ಟ ಹಾಕಬೇಕು. ತಾಂತ್ರಿಕ ಪದವಿಧರ ಸಿಬ್ಬಂದಿಯನ್ನು ಗುರುತಿಸಿ ಜವಾಬ್ದಾರಿ ನೀಡಬೇಕು. ಸೈಬರ್ ಕ್ರೈಂ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಜನರಿಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.
ಹೆಚ್ಚು ಅಪಘಾತಗಳು ಸಂಭವಿಸುವ (ಬ್ಲಾಕ್ ಸ್ಪಾಟ್) ಸ್ಥಳಗಳನ್ನು ಗುರುತಿಸಿ, ಅಪಘಾತಕ್ಕೆ ಕಾರಣಗಳನ್ನು ಪತ್ತೆಹಚ್ಚಬೇಕು. ರಸ್ತೆಗಳಲ್ಲಿ ಸೂಚನಾಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಅಗತ್ಯ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಮುಂದಾಗಬೇಕು. ಹೈವೆ ಪ್ಯಾಟ್ರೋಲಿಂಗ್ ಅಚ್ಚುಕಟ್ಟಾಗಿ ನಡೆಸಬೇಕು. ಪ್ರತಿ ಜಿಲ್ಲೆಗೆ ಇಬ್ಬರು ಹೆಚ್ಚುವರಿ ಪೆÇಲೀಸ್ ಅಧೀಕ್ಷಕರನ್ನು ನಿಯೋಜಿಸಲಾಗುತ್ತಿದೆ. ಶಾಂತಿ ಸುವಸ್ಥೆ ಕಾಪಾಡಲು ಒಬ್ಬರು, ಅಪರಾಧ ವಿಭಾಗಕ್ಕೆ ಮೊತ್ತಬ್ಬರು ಎಎಸ್‍ಪಿಯನ್ನು ನಿಯೋಜಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.
ಸಭೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಡಿಐಜಿ ತ್ಯಾಗರಾಜನ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಧಮೇರ್ಂದ್ರ ಕುಮಾರ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿವೈಎಸ್‍ಪಿ ಅನಿಲ್‍ಕುಮಾರ್, ಗಣೇಶ್ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು ಇದ್ದರು.

Latest News >>

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page