ಪೋಕ್ಸೋ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಸಜೆ ಮತ್ತು ರೂ.50 ಸಾವಿರ ರೂ- ದಂಡ ವಿಧಿಸಿದೆ.

by | 07/02/24 | ಕ್ರೈಂ


ಚಿತ್ರದುರ್ಗ, ಫೆ.07 : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಆರೋಪಿಗೆ ಚಿತ್ರದುರ್ಗ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ತ್ವರಿತ ವಿಶೇಷ ನ್ಯಾಯಾ ಲಯವು 10 ವರ್ಷ ಕಠಿಣ ಸಜೆ ಮತ್ತು ರೂ.50 ಸಾವಿರ ರೂ- ದಂಡ ವಿಧಿಸಿದೆ
.ಆರೋಪಿ ಮನು @ ಮಲ್ಲಿಕಾರ್ಜುನ ಕಾರ್ತಿಕೇನಹಟ್ಟಿ ಗ್ರಾಮ, ಚಳ್ಳಕೆರೆ ತಾಲ್ಲೂಕು ವಾಸಿ ಶಿಕ್ಷೆಗೆ ಗುರಿಯಾದ ಆರೋಪಿ.

ಚಳ್ಳಕೆರೆ ನಗರದ ಅಜ್ಜಯ್ಯನಗುಡಿ ರಸ್ತೆಯಲ್ಲಿರುವ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ಪುಸಲಾಯಿಸಿ ಹೆಚ್.ಎಂ.ಎಸ್.ಲೇಔಟ್ ಗೆ ಕರೆದುಕೊಂಡು ಹೋಗಿ ಬಲವಂತವಾಗಿ ಆಗಾಗ ಅತ್ಯಾಚಾರ ಮಾಡಿದ್ದು, ಇದರಿಂದ ನೊಂದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದು ಈ ಬಗ್ಗೆ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪೋಲಿಸ್ ಇನ್ಸ್‌ಪೆಕ್ಟರ್‌ ಶ್ರೀ.ಆರ್.ಎಫ್.ದೇಸಾಯಿ ಇವರು ತನಿಖೆಯನ್ನು ಪೂರೈಸಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಂತರ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ.ಕೋಮಲ ಇವರು ಆರೋಪಿ ಮನು- @ ಮಲ್ಲಿಕಾರ್ಜುನನ್ನು ದೋಷಿ ಎಂದು ಪರಿಗಣಿಸಿ 10 ವರ್ಷ ಕಠಿಣ ಸಜೆ ಮತ್ತು ರೂ.50,ಸಾವಿರ ರೂ ದಂಡ ವಿದಿಸಿ ಮತ್ತು ದಂಡ ಪಾವತಿಸಲವಿದಿಸಿದೆ ತಪ್ಪಿದರೆ 6 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿರುತ್ತಾರೆ.

ಪ್ರಕರಣದ ನೊಂದ ಬಾಲಕಿಗೆ ರೂ.4 ಲಕ್ಷರೂ ಪರಿಹಾರ ಮತ್ತು ದಂಡದ ಮೊತ್ತ ರೂ.50 ಸಾವಿರ ರೂ ನೀಡಲು ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ.
ಪ್ರಾಸಿಕ್ಯೂಷನ್‌ ಪರವಾಗಿ ಚಿತ್ರದುರ್ಗ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕರಾಗಿ
ಹೆಚ್.ಆರ್.ಜಗದೀಶ್ ವಾದಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page