Member Login
ಧರ್ಮಪುರ :
ಇಂದಿನ ಪರಿಸ್ಥಿತಿಯಲ್ಲಿ ಸಣ್ಣ ಕಾಯಿಲೆಯೂ ಸಹ ಮಾರಣಾಂತಿಕವಾಗಿದ್ದು, ಸಮಾಜದ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳ ಆರೋಗ್ಯವನ್ನು ನಿರ್ಲಕ್ಷ್ಯ ಮಾಡದೇ ಹೆಚ್ಚಿನ ಕಾಳಜಿ ವಹಿಸುವ ಮೂಲಕ ನಿಮ್ಮ ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ಧರ್ಮಪುರ ಹೋಬಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರದಂದು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರು ಸ್ಪರ್ಶ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಶ ಆಸ್ಪತ್ರೆಯಿಂದ ರೋಗಿಗಳಿಗೆ ಉಚಿತವಾಗಿ ಪ್ಲಾಸ್ಟಿಕ್ ಸರ್ಜರಿ, ಮೂಳೆ ಚಿಕಿತ್ಸೆ, ಹೃದಯ ಶಸ್ತ್ರಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಕಿವಿ ಮೂಗು ಮತ್ತು ಗಂಟಲು ಶಸ್ತ್ರ ಚಿಕಿತ್ಸೆ ಸೌಲಭ್ಯಗಳು ದೊರೆಯಲಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂಬುದಾಗಿ ಹೇಳಿದರು.
ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಟ್ಟು 556 ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್, ಡಾ.ಸಿ.ಹನುಮಂತರಾಯ, ಡಾ.ಕೆ.ಅನಿತಾ, ಡಾ. ಚಂದ್ರಮೌಳಿ, ಡಾ.ಕಿರಣ್, ಡಾ.ಸೀಮಾ, ಡಾ.ಪ್ರಣವ್, ಡಾ.ವರುಣ್, ಡಾ.ನಾಗಶೃತಿ, ಡಾ.ಸೌರಭ್, ಡಾ.ಮ್ರಿದುಲ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿಹನುಮಂತರಾಯ, ಉಪಾಧ್ಯಕ್ಷೆ ಲಕ್ಷ್ಮಿದೇವಿ, ನರಸಿಂಹಮೂರ್ತಿ ಇತರರು ಉಪಸ್ಥಿತರಿದ್ದರು.

0 Comments