ಪ್ರಖರ ಬಿಸಿಲಿನಿಂದ ರಕ್ಷಣೆ: ಮಾರ್ಗಸೂಚಿ ಬಿಡುಗಡೆ

by | 02/04/24 | ಆರೋಗ್ಯ

ಚಿತ್ರದುರ್ಗ ಏಪ್ರಿಲ್.2:
ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಮಧ್ಯಾಹ್ನ 12 ಗಂಟೆಯಿAದ ಸಂಜೆ 03 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ ಹಿನ್ನಲೆಯಲ್ಲಿ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ, ಮನೆಯಲ್ಲಿಯೇ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ವಿನಂತಿಸಿದ್ದಾರೆ.
ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್ ಹಾಗೂ ಛತ್ರಿ ಮತ್ತು ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು. ಆದಷ್ಟು ನೆರಳಿನಲ್ಲಿ ಇರುವಂತೆ ಗಮನ ಹರಿಸಬೇಕು, ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸಿದ್ದಾರೆ.
ಹೆಚ್ಚು ನೀರು ಕುಡಿಯುವುದು:
ಬಾಯಾರಿಕೆ ಇಲ್ಲದಿದರೂ ಸಹ ಹೆಚ್ಚು ನೀರನ್ನು ಆಗಾಗ ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲಿ ಸಹ ಕುಡಿಯುವ ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಓಆರ್‌ಎಸ್ ಜೀವಜಲವನ್ನು ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆ ಹಣ್ಣಿನÀ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮವಾಗಿದೆ.
ಪ್ರಸ್ತುತ ಋತುಮಾನದ ಹಣ್ಣುಗಳಾದ ಕಲ್ಲಂಗಡಿ, ಕರ್ಬೂಜ, ಕಿತ್ತಳೆ, ದ್ರಾಕ್ಷಿ ಅನಾನಸ್ ಹಾಗೂ ಸೌತೆಕಾಯಿ, ಎಳೆನೀರು ಕಾಯಿ ಹೆಚ್ಚು ಸೇವಿಸಬೇಕು. ತಿಳಿ ಬಿಳಿ ಬಣ್ಣದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ನಡೆಯುವಾಗ ಪಾದರಕ್ಷೆ, ಚಪ್ಪಲಿ ತಪ್ಪದೆ ಧರಿಸಬೇಕು.
ಇವುಗಳನ್ನು ಮಾಡಬಾರದು:
ಬಿಸಿಲಿನಲ್ಲಿ ಆದಷ್ಟು ಹೊರಹೊಗುವುದನ್ನು ತಪ್ಪಿಸಿ. ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗಬಾರದು. ಮಧ್ಯಪಾನ, ಟೀ, ಕಾಫಿ, ಹೆಚ್ಚು ಸಕ್ಕರೆ ಅಂಶವುಳ್ಳ ಪದಾರ್ಥಗಳನ್ನು ಸೇವಿಸಬೇಡಿ ಇವುಗಳ ಅತಿಯಾದ ಸೇವನೆಯಿಂದ ದೇಹ ನಿರ್ಜಲೀಕರಣಗೊಳ್ಳಬಹುದು ಅಥವಾ ಹೊಟ್ಟೆ ನೋವು ಕಂಡುಬರಬಹುದು.
ಗರ್ಭಿಣಿಯರು ಆರೋಗ್ಯ ಸಮಸ್ಯೆಯಿಂದ ಬಳಲುವವರು ಮತ್ತು ನಿಗಧಿತ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವವರು ವೈದ್ಯರ ಸಲಹೆ ಮೇರೆಗೆ ಮನೆಯ ಹೊರಗಡೆ ಕೆಲಸ ಮಾಡಲು ಆದ್ಯತೆ ನೀಡಿ. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ಅಥವಾ ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬೇಡಿ. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತಿರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು.
ಸಾಮಾನ್ಯ ಅಪಾಯದ ಚಿಹ್ನೆಗಳು:
ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖAಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಕಂಡುಬರುತ್ತವೆ.
ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‌ಎಸ್, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಸೂಚನೆ ನೀಡಲಾಗಿದೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್ ಅವರು ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page