ಪ್ರಗತಿಯಹಾದಿಯಲ್ಲಿ ವಾಣಿವಿಲಾಸಪತ್ತಿನ ಸಹಕಾರಸಂಘ ಸಹಕಾರ ಸಂಘದ ಅಧ್ಯಕ್ಷ : ಆಲೂರುಹನುಮಂತರಾಯಪ್ಪ

by | 23/09/23 | ಆರ್ಥಿಕ


ಹಿರಿಯೂರು :
ವಾಣಿವಿಲಾಸ ಪತ್ತಿನ ಸಹಕಾರ ಸಂಘವು ಪ್ರಸ್ತುತ ಸಾಲಿನಲ್ಲಿ 8 ಕೋಟಿ 37ಲಕ್ಷ 96 ಸಾವಿರದ 526 ರೂಗಳ ವಹಿವಾಟು ನಡೆಸಿದ್ದು, ಸಂಘದ ದುಡಿಯುವ ಬಂಡವಾಳ 2 ಕೋಟಿ 25 ಲಕ್ಷದ 21 ಸಾವಿರದ 315 ರೂಗಳಿದ್ದು, ಈ ಸಾಲಿನಲ್ಲಿ 5 ಲಕ್ಷ 64 ಸಾವಿರದ 336 ರೂ.ಗಳ ನಿವ್ವಳ ಲಾಭಗಳಿಸಿ ಪ್ರಗತಿಯ ಹಾದಿಯಲ್ಲಿ ಸಾಗಿದೆ ಎಂಬುದಾಗಿ ವಾಣಿವಿಲಾಸ ಪತ್ತಿನ ಸಹಾಕಾರ ಸಂಘದ ಅಧ್ಯಕ್ಷರಾದ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿನ ವಾಣಿವಿಲಾಸ ವಿದ್ಯಾಸಂಸ್ಥೆಯ “ವಾಣಿವಿಲಾಸ ಸಭಾಂಗಣ”ದಲ್ಲಿ ಏರ್ಪಡಿಸಲಾಗಿದ್ದ, ವಾಣಿವಿಲಾಸ ಪತ್ತಿನ ಸಹಕಾರಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ವಾಣಿವಿಲಾಸ ಪತ್ತಿನ ಸಹಕಾರ ಸಂಘವು ತಮ್ಮೆಲ್ಲರ ಸಹಕಾರದೊಂದಿಗೆ ಉತ್ತಮ ವಹಿವಾಟು ನಡೆಸಿ, 23 ವರ್ಷಗಳನ್ನು ಪೂರೈಸಿ 24 ನೇ ವರ್ಷಕ್ಕೆ ಕಾಲಿಟ್ಟಿದೆ. ನಮ್ಮ ಸಂಘವು ಷೇರುದಾರ ಸದಸ್ಯರ ಹಾಗೂ ಗ್ರಾಹಕರ ಸಹಕಾರದಿಂದ ಯಶಸ್ಸಿನತ್ತ ಸಾಗುತ್ತಿದೆ ಎಂಬುದಾಗಿ ಅವರು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಾಣಿವಿಲಾಸ ಪತ್ತಿನ ಸಹಕಾರಸಂಘದ ಸಲಹಾ ಸಮಿತಿ ಸದಸ್ಯರು ಹಾಗೂ ಜಿ.ಪಂ.ಮಾಜಿ ಅಧ್ಯಕ್ಷರಾದ ಬಿ.ಎಸ್.ರಘುನಾಥ್ ಮಾತನಾಡಿ, ಯಾವುದೇ ಸಹಕಾರ ಸಂಘ ಯಶಸ್ಸಿನ ಹಾದಿಯಲ್ಲಿ ಸಾಗಬೇಕಾದರೆ ಉತ್ತಮ ಆಡಳಿತ ಮಂಡಳಿ, ಉತ್ತಮ ಸಿಬ್ಬಂದಿ ಹಾಗೂ ಸಕಾಲಕ್ಕೆ ಸಾಲ ಮರುಪಾವತಿ ಮಾಡುವ ಗ್ರಾಮಹಕರನ್ನು ಹೊಂದಿರಬೇಕು ಎಂಬುದಾಗಿ ಹೇಳಿದರು.
ವಾರ್ಷಿಕ ಮಹಾಸಭೆಯ ನೋಟಿಸನ್ನು ಸಂಘದ ಉಪಾಧ್ಯಕ್ಷ ಪಿ.ಆರ್.ಸತೀಶ್ ಬಾಬು ಸಭೆಯಲ್ಲಿ ಓದಿದರು. ಸಂಘದ ಆಡಳಿತಮಂಡಳಿ ವರದಿಯನ್ನು ವ್ಯವಸ್ಥಾಪಕಿ ಶ್ರೀಮತಿ ನಂದಿನಿ, 2022-23ನೇ ಸಾಲಿನ ಜಮಾ ಖರ್ಚು ಹಾಗೂ ಲಾಭ ನಷ್ಟದ ತಃಖ್ತೆಯನ್ನು ಸಂಘದ ನಿರ್ದೇಶಕರರಾದ ಟಿ.ಮಲ್ಲೇಶಪ್ಪ ಹಾಗೂ 2023-24ನೇ ಸಾಲಿನ ಅಂದಾಜು ಆಯವ್ಯಯವನ್ನ ಲೇಖಪಾಲಕ ಶಿವರಾಜ್ ಹಾಗೂ ಕುಮಾರಿ ಚೈತ್ರ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು.
ಇದೇ ಸಂದರ್ಭದಲ್ಲ್ಲಿ ಸಂಘದಲ್ಲಿ ಅತಿಹೆಚ್ಚಿನ ವ್ಯವಹಾರ ಮಾಡಿದಂತಹ ಗ್ರಾಹಕರುಗಳನ್ನು ಹಾಗೂ ಸಂಘದಲ್ಲಿ ಠೇವಣಿ ಮಾಡಿದಂತಹ ಹೂಡಿಕೆದಾರ ಸದಸ್ಯರುಗಳನ್ನು ಮತ್ತು ಸಂಘದಲ್ಲಿ ಸಾಲಸೌಲಭ್ಯ ಪಡೆದು, ಪ್ರಾಮಾಣಿಕವಾಗಿ ಸಂಘಕ್ಕೆ ಸಾಲ ಮರುಪಾವತಿ ಮಾಡಿರುವ ಸಂಘದ ಸದಸ್ಯರುಗಳನ್ನು ಪುಷ್ಪಮಾಲೆ ಹಾಕಿ, ಸನ್ಮಾನಿಸಿ, ಅಭಿನಂದಿಸಲಾಯಿತು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದ ಚಿನ್ನದ ಹುಡುಗಿ ಕುಮಾರಿ ಅಮೃತಲಕ್ಷ್ಮೀರವರಿಗೆ ಶಾಲುಹೊದಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಈ ವೇದಿಕೆಯಲ್ಲಿ ವಾಣಿವಿಲಾಸ ಪತ್ತಿನಸಹಕಾರಸಂಘದ ಉಪಾಧ್ಯಕ್ಷರಾದ ಪಿ.ಆರ್.ಸತೀಶ್ ಬಾಬು, ಹಾಗೂ ನಿರ್ದೇಶಕರುಗಳಾದ ಟಿ.ಮಲ್ಲೇಶಪ್ಪ, ಜಯರಾಮಪ್ಪ, ಹೆಚ್.ಡೀಶಪ್ಪ, ಎಸ್.ಮೂರುಕಣ್ಣಪ್ಪ, ಶ್ರೀಮತಿ ಸ್ವರೂಪರಾಣಿ, ಶ್ರೀಮತಿ ಟಿ.ಪ್ರೇಮಲತ, ಇವರುಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವಾಣಿವಿಲಾಸಪತ್ತಿನ ಸಹಕಾರಸಂಘದ ವ್ಯವಸ್ಥಾಪಕರಾದ ಶ್ರೀಮತಿ ಎಸ್.ನಂದಿನಿ, ಲೇಖಪಾಲಕರಾದ ಈ.ಶಿವರಾಜ್, ನಗದುಗುಮಾಸ್ತರಾದ ಆರ್.ಎನ್.ಪ್ರಭಾಕರ್, ಸಿಬ್ಬಂದಿ ಕುಮಾರಿ ಚೈತ್ರ, ಪಿಗ್ಮಿ ಸಂಗ್ರಹಗಾರರಾದ ಪಿ.ಎನ್.ಪರಮೇಶ್ವರಪ್ಪ, ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಶಿಕ್ಷಕರಾದ ಉಮೇಶ್ ಯಾದವ್ ಹಾಗೂ ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿ ವರ್ಗದವರು, ಷೇರುಸದಸ್ಯರು ಹಾಗೂ ಗ್ರಾಹಕರು ಪಾಲ್ಗೊಂಡಿದ್ದರು.

Latest News >>

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಹಾಯವಾಣಿ ಆರಂಭ

ಚಿತ್ರದುರ್ಗ ಮೇ.30: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ...

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ ಸೋಮಶೇಖರ್

ಮೊಳಕಾಲ್ಮೂರು ಮೇ.30: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ...

ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ...

ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್.

ಚಳ್ಳಕೆರೆ ಜನಧ್ವನಿಮೆ30 ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು...

ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್.

ಚಳ್ಳಕೆರೆ ಮೇ.30 ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್...

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಎಂ.ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆ.

ನಾಯಕನಹಟ್ಟಿ::ಮೇ28. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜಿನಾಮೆಯಿಂದ ತೆರವಾಗಿದ್ದ ಉಪಧ್ಯಾಕ್ಷ ಸ್ಥಾನಕ್ಕೆ ಮಂಗಳವಾರ ನಡೆದ...

ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ...

ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

ಹಿರಿಯೂರು : ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ...

ವಿದ್ಯುತ್ ತಂತಿ ಹರಿದು ಬಿದ್ದು ಎಮ್ಮೆ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮೇ28 ಹಳ್ಳದಲ್ಲಿ ಮೇಯುತ್ತಿದ್ದ ಎಮ್ನೆ ಮೇಲೆ ವಿದ್ಯುತ್ ತಂತಿ ಹರಿದ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು...

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page