ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಸೂಚನೆ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಳಿಸಿ

by | 16/11/23 | ಸುದ್ದಿ


ಚಿತ್ರದುರ್ಗ ನ.16:
ಅಲ್ಪಸಂಖ್ಯಾತರ ಏಳಿಗೆಗಾಗಿ ರೂಪಿಸಲಾಗಿರುವ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಉರ್ದು ಶಾಲೆಗಳಿಗೆ ಭೇಟಿ ನೀಡಿ, ದುರಸ್ಥಿ ಕಾರ್ಯಕೈಗೊಳ್ಳಬೇಕಾದ ವಿವಿಧ ಶಾಲೆಗಳ ಕೊಠಡಿಗಳನ್ನು ಪರಿಶೀಲನೆ ನಡೆಸಿ, ದುರಸ್ತಿಗೆ ಕ್ರಮವಹಿಸಬೇಕು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆಗಳಿಗೆ ನಿವೇಶನ ಗುರುತಿಸಿ, ಶಾಲೆಗಳ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಡಿಎಂಎಫ್ ಹಾಗೂ ಕೆಎಂಇಆರ್‍ಸಿ ಅನುದಾನದಲ್ಲಿ ಶಾಲೆ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಲ ಸೌಲಭ್ಯ ನೀಡಿಕೆಯಲ್ಲಿ ಬ್ಯಾಂಕ್‍ಗಳು ತೀವ್ರ ನಿರ್ಲಕ್ಷ್ಯ ತಾಳುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಆಯೋಗಕ್ಕೆ ಬರುತ್ತಿವೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಎಷ್ಟು ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಲಾಗಿದೆ ಎಂದು ಆಯೋಗದ ಅಧ್ಯಕ್ಷರು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಪ್ರಶ್ನಿಸಿದರು, ಉತ್ತರಿಸಿದ ಲೀಡ್ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್ ಅವರು, ಅರ್ಜಿಗಳು ತಿರಸ್ಕøತಗೊಂಡಿರುವ ಬಗ್ಗೆ ನಿರ್ದಿಷ್ಟ ಪ್ರಕರಣಗಳಿದ್ದಲ್ಲಿ, ಪರಿಶೀಲಿಸಲಾಗುವುದು ಎಂದು ಉತ್ತರಿಸಿದರು, ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಆಯೋಗದ ಅಧ್ಯಕ್ಷರು, ಅಲ್ಪಸಂಖ್ಯಾತರರಿಗೆ ಸಾಲ ಸೌಲಭ್ಯ ಮಂಜೂರಾತಿ ಅಥವಾ ತಿರಸ್ಕøತವಾಗಿರುವ ಬಗ್ಗೆ ಯಾವುದೇ ಮಾಹಿತಿಯನ್ನು ಸಭೆಗೆ ತಂದಿಲ್ಲ, ಬದಲಿಗೆ ಮಾಹಿತಿ ನೀಡುವಂತೆ ನಮಗೇ ಕೇಳುತ್ತೀರಿ ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಜಾರಿಗೊಳಿಸಲಾಗಿರುವ ಅರಿವು ಸಾಲ, ಶ್ರಮಶಕ್ತಿ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದು ಹೇಳಿದರು.
ಬೃಹತ್ ಉದ್ಯೋಗ ಮೇಳ ಆಯೋಜಿಸಿ: ಜಿಲ್ಲೆಯಲ್ಲಿರುವ ಯುವ ಜನತೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಯೋಗಾಧಿಕಾರಿಗೆ ಸೂಚನೆ ನೀಡಿದರು.
ಕೊಳಗೇರಿ ಪ್ರದೇಶದ ಜನರಿಗೆ ಮೂಲಸೌಕರ್ಯ ಕಲ್ಪಿಸಿ: ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್, ನಿವೇಶನ, ಮನೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗೆ ಸೂಚನೆ ನೀಡಿದರು.
ಕೊಳಚೆ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಗೆ 5843 ಮನೆಗಳು ಮಂಜೂರಾಗಿದ್ದು, ಇದರಲ್ಲಿ 3469 ಮನೆಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಸಲ್ಮಾ ಫಿರ್ದೋಸ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಆಯೋಗದ ಉಪನಿರ್ದೇಶಕ ರಘುನಾಥ್, ವಿಶೇಷ ಕರ್ತವ್ಯಾಧಿಕಾರಿ ಮುಜೀಬುಲ್ಲಾ ಜಫಾರಿ, ಜಿ.ಪಂ. ಯೋಜನಾ ನಿರ್ದೇಶಕ ಡಾ. ರಂಗಸ್ವಾಮಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಾಂತರಾಜ್, ಜಿಲ್ಲಾ ವಕ್ಫ್ ಅಧಿಕಾರಿ ನೂರ್ ಬಾಷಾ ನಾಮನಿದೇಶಿತ ಸದಸ್ಯರುಗಳಾದ ಫಾರುಕ್ ಉಲ್ಲಾ, ಎಸ್.ಶ್ರೀನಿಕ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page