ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಜವಾಬ್ದಾರಿ ಮಹತ್ತರ: ಕೆ.ಜಿ.ಬೋಪಯ್ಯ ಕೊಡಗು.

by | 22/11/23 | ಶಿಕ್ಷಣ

ಮಡಿಕೇರಿ ನ.22-ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಸಭಾಂಗಣದಲ್ಲಿ ಬುಧವಾರ ನಡೆಯಿತು.
ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ಉದ್ಘಾಟಿಸಿ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆ ನಿಟ್ಟಿನಲ್ಲಿ ಸಂವಿಧಾನದ ಆಶಯದಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಕಾರ್ಯ ನಿರ್ವಹಿಸಬೇಕು ಎಂದರು.
ಅಧಿವೇಶನದ ಜವಾಬ್ದಾರಿ ಸಭಾಧ್ಯಕ್ಷರ ಮೇಲಿರುತ್ತದೆ. ಅಧಿವೇಶನದಲ್ಲಿ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತವೆ. ಒಟ್ಟಾರೆ ಸಮಾಜಮುಖಿಯಾಗಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಉತ್ತಮ ಸಂಸದೀಯ ಪಟುಗಳಾಗಿ ಯುವ ಪೀಳಿಗೆ ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಎ.ಪಿ.ಧನಂಜಯ್ ಅವರು ಮಾತನಾಡಿ ದೇಶ ಕಟ್ಟುವ ನಿಟ್ಟಿನಲ್ಲಿ ಯುವ ಪೀಳಿಗೆಗಾಗಿ ಇಂತಹ ಪ್ರಯತ್ನ ಶ್ಲಾಘನೀಯ. ಸರ್ಕಾರದ ಪಾತ್ರ, ಕಾನೂನಿನ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಪುಟ್ಟರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸುವುದು ಬಹಳ ಮುಖ್ಯವಾಗಿದೆ ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ, ಉಪನ್ಯಾಸಕ ಚಿದಾನಂದ್ ಮತ್ತಿತರರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page