ಪ್ರತಿಯೊಬ್ಬರೂ ತಮ್ಮ ಪ್ರಜಾಪ್ರಭುತ್ವದ ಹಕ್ಕು ಮತದಾನ ಚಲಾಯಿಸುವ ಮೂಲಕ ಹೆಚ್ಚಿನ ಮತದಾನವಾಗುವಂತೆ ಮನಸ್ಸು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಜಿಪಂ ಸಿಇಒ ದೀವಾಕರ್.

by | 18/04/23 | ಚುನಾವಣೆ-2023


ಚಿತ್ರದುರ್ಗ ಏ.17. ನಗರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ, ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ಪ್ರಯುಕ್ತ ಮತದಾನದ ಬಗ್ಗೆಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿಗಾಗಿ ವಿದ್ಯಾರ್ಥಿನಿಯರಿಗೆ ರಂಗೋಲಿ ಸ್ಪರ್ಧೆ ಹಾಗೂ ಚುನಾವಣೆ ಹಬ್ಬ ಆಯೋಜಿಸಲಾಗಿತ್ತು
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪ‌ಂ ಸಿಇಒ ದಿವಾಕರ್ ಮಾತನಾಡಿ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮಾಡಲು ವಿದ್ಯಾರ್ಥಿ . ವಿದ್ಯಾರ್ಥಿನಿಯರು ಯುವ ಮಾತದಾರರು ನಿಮ್ಮ ನೆರೆ ಹೊರೆ ಹಾಗೂ ಪುರುಷರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ವಿಶೇಷಚೇತನರು, ವಾಕ್‌, ಶ್ರವಣ, ದೃಷ್ಟಿ ದೋಷವುಳ್ಳವರು, ಹಿರಿಯ ನಾಗರಿಕರು ಎಲ್ಲರೂ ಕಡ್ಡಾಯವಾಗಿ ಮತಗಟ್ಟೆ ಬಂದು ಮತದಾನ ಮಾಡುವಂತೆ ಮತದಾರರಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು. ಶೇ ನೂರರಷ್ಟು ಮತದಾನದ ಗುರಿಮುಟ್ಟಲು ಯಾರು ಮತದಾನದಲ್ಲಿ ವಂಚಿರಾಗ ಬಾರದು ಎಂಬ ಉದ್ದೇಶದಿಂದ ಚುನಾವಣೆ ಆಯೋಗ ರಂಗೋಲಿ
ಬೈಕ್ ರ್ಯಾಲಿ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮಗಳ ಮೂಲಕ ಮತದಾನದ ಕುರಿತು ಅರಿವು ಮೂಡಸಲಾಗುತ್ತಿದೆ. ಈ ಮೂಲಕ ಶೇ.100 ಮತದಾನದ ಗುರಿ ಹೊಂದಲು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಮ್ಮ ಪ್ರಜಾಪ್ರಭುತ್ವದ ಹಕ್ಕು ಮತದಾನ ಚಲಾಯಿಸುವ ಮೂಲಕ ಹೆಚ್ಚಿನ ಮತದಾನವಾಗುವಂತೆ ಮನಸ್ಸು ಮಾಡಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬ ಮತದಾರರು ಯಾವುದೇ ಆಸೆ, ಆಮಿಷ, ಒತ್ತಡಗಳಿಗೆ ಒಳಗಾಗದೆ ಸ್ವಂತ ವಿವೇಚನೆ ಬಳಸಿ ಯೋಗ್ಯ ಅಭ್ಯರ್ಥಿಗೆ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಬಂಧ /ರಂಗೋಲಿ/ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸ್ವೀಪ್ ಜಿಲ್ಲಾ ಅಧ್ಯಕ್ಷ ಹಾಗೂ ಜಿಪಂ ಸಿಒ ದಿವಾಕರ್ ಬಹುಮಾನ ವಿತರಣೆ ಮಾಡಿದರು.
ನಂತರ ಚುನಾವಣಾ ಪ್ರತಿಜ್ಞಾವಿಧಿಯನ್ನ ಬೋಧಿಸಿದರು
ಈ ಕಾರ್ಯಕ್ರಮದಲ್ಲಿ ಉಪನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ,ಸ್ವೀಪ್ ನೂಡಲ್ ಅಧಿಕಾರಿಗಳು ಹಾಸ್ಟೆಲ್ ನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page