ಪ್ರತಿಯೊಬ್ಬ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದಾಗ ಮಾತ್ರ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಶಾಸಕ ಟಿ.ರಘುಮೂರ್ತಿ.

by | 07/09/23 | ಶಿಕ್ಷಣ

ಚಳ್ಳಕೆರೆ ಸೆ.7 ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಎಸ್ ಎಸ್ ಎಲ್ ಸಿ ಹಾಗು ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಮೂರು ಬಾರಿ ಪರೀಕ್ಷೆ ನಡೆಸಿ ಉತ್ತೀರ್ಣಗೊಳ್ಳಲು ಅವಕಾಶ ಕಲ್ಪಿಸುವ ಚಿಂತನೆ ನಡೆಸಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ರೋಟರಿ ಬಾಲ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದಾಗ ಮಾತ್ರ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳಿಂದ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ದೊರೆಯುವುದಲ್ಲದೆ ಇನ್ನುಳಿದ ವಿದ್ಯಾರ್ಥಿಗಳು ಸಹ ಪ್ರೇರಣೆ ಪಡೆದು ಸಾಧನೆಯತ್ತ ಮುನ್ನಗ್ಗಲು ಸಹಕಾರಿ ಯಾಗಲಿ ಎಂಬ ಉದ್ದೇಶವಿರುತ್ತದೆ.

ಶಿಕ್ಷಕರು ಶಿಕ್ಷಣದಲ್ಲಿ ಉದಾಸೀನ ಮನಸ್ಥಿತಿ ಕೆಟ್ಟ ಸ್ನೇಹಿತರ ಸಹವಾಸದಿಂದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದೆ ಉಳಿದಿರುತ್ತಾರೆ ಅಂತಹವರನ್ನು ಗುರುತಿಸಿ ಮನ ಪರಿವರ್ತನೆ ಮಾಡಿ ವಿದ್ಯೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಿ ಉತ್ತಮ ಭವಿಷ್ಯ ರೂಪಿಸುವತ್ತ ಕಾಳಜಿ ವಹಿಸಬೇಕು.

ಇಂದಿನ ದಿನಮಾನಗಳಲ್ಲಿ ಎಲ್ಲಾ ರಂಗಗಳಲ್ಲಿ ಸ್ಪರ್ಧಾತ್ಮಕತೆ ಹೆಚ್ಚಿರುವುದರಿಂದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನವಹಿಸಿ ದೊಡ್ಡ ಗುರಿಗಳ ಕನಸನ್ನು ಕಂಡು ಸಾಕಾರಗೊಳಿಸುವತ್ತ ಕನಸು ನನಸಾಗಿಸಿಕೊಳ್ಳುವತ್ತ ಗಮನಹರಿಸಬೇಕು

ಕಳೆದ ಹತ್ತು ವರ್ಷಗಳಿಂದ ತಾಲೂಕು ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದು ಇದಕ್ಕೆ ತಾಲೂಕಿನ ಎಲ್ಲಾ ಶಿಕ್ಷಕರ ಪರಿಶ್ರಮ ಕಾರಣವಾಗಿದೆ ಶಿಕ್ಷಕರ ಓ ಪಿ ಎಸ್ ಜಾರಿ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದ್ದು

ಬಿಇ ಒ ಕೆ ಎಸ್ ಸಂದೇಶಗಳನ್ನು ಮಾತನಾಡಿ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶಾಸಕ ಟಿ ರಘುಮೂರ್ತಿ ಅನನ್ಯ ಕೊಡುಗೆಗಳನ್ನು ನೀಡಿದ್ದಾರೆ ಸರ್ಕಾರಿ ಶಾಲೆಗಳ ಉನ್ನತಿಕರಣ ಸೇರಿದಂತೆ ಇಂಜಿನಿಯರಿಂಗ್ ಕಾಲೇಜು ಜಿ ಟಿ ಟಿ ಸಿ ಕೇಂದ್ರ ಗಳನ್ನು ತೆರೆದು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಉತ್ತಮ ಸಹಕಾರ ನೀಡಿದ್ದಾರೆ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ಸಿನ ಸಾಗಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ ರಾಘವೇಂದ್ರ, ಚಂದ್ರಶೇಖರ್ ವೆಂಕಟೇಶ ರೆಡ್ಡಿ ಶ್ರೀನಿವಾಸ್ .ರವಿ .ಬಿ ರಾಜಕುಮಾರ್. ಪಾಲಯ್ಯ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page