ಚಿತ್ರದುರ್ಗ(ಜನಧ್ವನಿ ವಾರ್ತೆ) ಮೇ.17:
2023-24ನೇ ಸಾಲಿಗೆ “ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು” ಸೇರ್ಪಡೆ ಮಾಡುವ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ 5ನೇ ತರಗತಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ.25 ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು ಗ್ರೇಡ್-1&2 ಸಮಾಜ ಕಲ್ಯಾಣ ಇಲಾಖೆಯ ಕಚೇರಿ ವೇಳೆಯಲ್ಲಿ ಮೇ.17 ರಿಂದ 25 ರವರೆಗೆ ಪಡೆಯಬಹುದು. ಭರ್ತಿಮಾಡಿದ ಅರ್ಜಿಯನ್ನು ಮೇ.25ರ ಸಂಜೆ 5.30ರೊಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಾರ್ಯಾಲಯಕ್ಕೆ ಸಲ್ಲಿಸುವುದು. ಕೊನೆಯ ದಿನಾಂಕ ಮುಗಿದ ನಂತರ ಬಂದಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಷರತ್ತುಗಳು: ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದ್ದು, ವಿದ್ಯಾರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷ(ಎರಡು ಲಕ್ಷದ ಐವತ್ತು ಸಾವಿರ) ಮೀರಿರಬಾರದು. ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. 5ನೇ ತರಗತಿಯಲ್ಲಿ ಶೇ. 60 ರಷ್ಟು ಅಂಕ ಪಡೆದಿರಬೇಕು. ನಿಗದಿಪಡಿಸಲಾದ ಗುರಿಯಲ್ಲಿ ಬಾಲಕಿಯರಿಗೆ ಶೇ.50ರಷ್ಟು ಮೀಸಲಾತಿ ಇರುತ್ತದೆ. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ, ಅಂದರೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಒಂದು ವೇಳೆ ಈಗಾಗಲೇ ಪ್ರತಿಷ್ಠಿತ ಶಾಲೆಯಲ್ಲಿ ಬಾಲಕ ಮತ್ತು ಬಾಲಕಿ ಆಯ್ಕೆಯಾಗಿದ್ದಲ್ಲಿ ಪುನಃ ಬಾಲಕ ಮತ್ತು ಬಾಲಕಿ ಅರ್ಜಿ ಸಲ್ಲಿಸು ಅವಕಾಶವಿರುವುದಿಲ್ಲ. 5ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಪೋಷಕರ ನಿಗಧಿತ ಅರ್ಜಿಯೊಂದಿಗೆ ಜೊತೆಗೆ ನಾಲ್ಕು ಪಾಸ್ಪೋರ್ಟ್ ಸೈಜ್ ಭಾವಚಿತ್ರ, 5ನೇ ತರಗತಿಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಗ್ರಾಮೀಣ ಪ್ರದೇಶದವರಾಗಿದ್ದರೆ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಹಾಗೂ ಬಡತನ ರೇಖೆಗಿಂತ ಕೆಳಗಿನ ಅತಿ ಹಿಂದುಳಿದ ವರ್ಗದ ಮೀಸಲಾತಿ ಮತ್ತು ಇತ್ಯಾದಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಇದೇ ಜಿಲ್ಲೆಯಾಗಿರಬೇಕು. ಬೇರೆ ಜಿಲ್ಲೆಯ ವಿದ್ಯಾರ್ಥಿಗಳ ಅರ್ಜಿಗಳನ್ನು ಅಂಗೀಕರಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments