ಚಿತ್ರದುರ್ಗ:-
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಪ್ರತಿ ತಿಂಗಳ ಮಂಗಳವಾರದಂದು ಜಿಲ್ಲಾ ವ್ಯಾಪ್ತಿಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲ್ಲೂಕು ಕಚೇರಿಯಲ್ಲಿ ಲಭ್ಯವಿದ್ದು, ಜನ ಸಾಮಾನ್ಯರ ಕುಂದು ಕೊರತೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವರು.
ಡಿಸೆಂಬರ್ 20 ಮತ್ತು ಜನವರಿ 31ರಂದು ಹೊಳಲ್ಕೆರೆ ತಾಲ್ಲೂಕು ಕಚೇರಿಗೆ ಭೇಟಿ, ” ಡಿಸೆಂಬರ್ 27ರಂದು ಹಿರಿಯೂರು ತಾಲ್ಲೂಕು ಕಚೇರಿ, “” ಜನವರಿ 3ರಂದು ಚಳ್ಳಕೆರೆ ತಾಲ್ಲೂಕು ಕಚೇರಿ, ಜನವರಿ 10ರಂದು ಹೊಸದುರ್ಗ ತಾಲ್ಲೂಕು ಕಚೇರಿ, ಜನವರಿ 17 ಮೊಳಕಾಲ್ಮುರು ತಾಲ್ಲೂಕು ಕಚೇರಿ, ಜನವರಿ 24ರಂದು ಚಿತ್ರದುರ್ಗ ತಾಲ್ಲೂಕು ಕಚೇರಿಗೆ ಭೇಟಿ ನೀಡಲಿದ್ದಾರೆ.
ಸಾರ್ವಜನಿಕರು ತೊಂದರೆ, ಸಮಸ್ಯೆಗಳಿಗೆ ಭೇಟಿ ಮಾಡಿ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
0 Comments