ಚಳ್ಳಕೆರೆ ಅ.13.ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಹೆಚ್ಚಿನ ಪ್ರಚಾರ ಮಾಡುವಂತೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಪಂ ಇ ಒ ಹೊನ್ನಯ ಸೂಚನೆ ನೀಡಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎಲ್ಲಾ ಗ್ರಾಪಂ ಪಿಡಿಒ ಗಳಿಗೆ ಪಿಎಂ ವಿಶ್ವಕರ್ಮ ಯೋಜನೆಯ ಅನುಷ್ಠಾನ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನಗೆ ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಹಾಗೂ ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ನೊಂದಾಯಿಕೊಳ್ಳುವಂತೆ ತಿಳಿಸಿದರು.
ಪಿಎಂ ವಿಶ್ವಕರ್ಮ
ಯೋಜನೆಯ ಬಗ್ಗೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಟೋ ಹಾಗೂ ಡಂಗೂರ ಹೊಡಿಸುವ , ಕಸವನ್ನು ಸಂಗ್ರಹಣೆ ಮಾಡುವ ವಾಹನಗಳ ಮೂಲಕ ಜನರಲ್ಲಿ ಹೆಚ್ಚಿನ ಯೋಜನೆಯ ಬಗ್ಗೆ ಅರಿವು ಮೂಡಿಸಬೇಕು. ಸಿ.ಎಸ್.ಆರ್ ಸೆಂಟರ್‌ಗಳನ್ನು ತೆರೆದು ಅರ್ಹ ಫಲಾನುಭವಿಗಳು ಹೆಚ್ಚು ನೋಂದಣಿಯಾಗುವಂತೆ ಮಾಡಬೇಕು.
ಸಂಬಂಧಪಟ್ಟ ಸಂಘ – ಸಂಸ್ಥೆಗಳಿಗೆ ಹಾಗೂ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಈ ಯೋಜನೆಯ ನೊಂದಣಿಯಾಗುವಂತೆ ತಿಳಿಹೇಳಬೇಕು ಎಂದು ಹೇಳಿದರು. ಈ ಯೋಜನೆಯ ಫಲಾನುಭವಿಗಳ ನೋಂದಣಿ ಮಾಡುವುದಕ್ಕಾಗಿ ಒಂದು ತಂಡವನ್ನು ಮಾಡಿ , ಒಂದು ವಾರದೊಳಗೆ ಪೂರ್ಣಗೊಳಿಸಬೇಕು.
ಕೇಂದ್ರ ಸರ್ಕಾರದ ವಿಶ್ವಕರ್ಮ ಜನಾಂಗದವರಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯನ್ನು ತಮ್ಮ ಕೈ ಮತ್ತು ಉಪಕರಣಗಳೊಂದಿಗೆ ಕೆಲಸ ಮಾಡುವ ಕರಕುಶಲಿಗರು ಮತ್ತು ಕುಶಲಕರ್ಮಿಗಳಿಗೆ ಸಂಪೂರ್ಣ ಬೆಂಬಲವನ್ನು ಒದಗಿಸಲು ಪ್ರಧಾನ ಮಂತ್ರಿಯವರು 17 ನೇ ಸೆಪ್ಟೆಂಬರ್ , 2023 ರಂದು ಪ್ರಾರಂಭಿಸಿದ್ದಾರೆ.
ಈ ಯೋಜನೆಯ 18 ರೀತಿಯ ವ್ಯಾಪಾರಗಳಲ್ಲಿ ತೊಡಗಿರುವ ಕರಕುಶಲಿಗರು ಮತ್ತು ಕುಶಲಕರ್ಮಿಗಳನ್ನು ಒಳಗೊಳ್ಳುತ್ತದೆ. ಅಂದರೆ ಬಡಗಿ , ದೋಣಿ ತಯಾರಕರು , ಕೃಷಿ ಸಲಕರಣೆಗಳು ತಯಾರಿಸುವವರು , ಕಮ್ಮಾರರು , ಸುತ್ತಿಗೆ ಮತ್ತು ಟೂಲ್ ಕಿಟ್ ಮಾಡುವವರು . ಬೀಗ ತಯಾರಿಸುವವರು , ಅಕ್ಕಸಾಲಿಗರು , ಕುಂಬಾರರು , ಶಿಲ್ಪಿಗಳು , ಕಲ್ಲು ಒಡೆಯುವವರು , ಚಮ್ಮಾರರು , ಮೇಸ್ತ್ರಿ , ಬುಟ್ಟಿ / ಚಾಪೆ / ಪೊರಕೆ / ಸೆಣಬು ನೇಯುವವರು , ಸಾಂಪ್ರದಾಯಿಕ ಗೊಂಬೆ ಮತ್ತು ಆಟಿಕೆ ತಯಾರಕರು , ಕ್ಷೌರಿಕರು , ಹೂಮಾಲೆ ತಯಾರಕರು , ಮಡಿವಾಳರು , ಟೈಲರ್ ಮತ್ತು ಮೀನಿನ ಬಲೆಯ ತಯಾರಕರು ಈ ಯೋಜನೆಯ ಸದುಪಯೋಗ ಪಡಿಸಿಕೊಂಡು ಉದ್ದಿಮೆ ಅಭಿವೃದ್ದಿ ಮಾಡಿಕೊಂಡು ಆರ್ಥಿಕವಾಗೆ ಮುಂದೆ ಬರಲು ಸಹಕಾರಿಯಾಗಲಿದೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಹರು ಯಾರೂ ಈ ಯೋಜನೆಯಿಂದ ವಂಚಿತರಾಗದಂತೆ ನೊಂದಾಯಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ತಾಪಂ ನರೇಗಾ ಸಹಾಯಕ ನಿರ್ದೇಶಕ ಸಂತೋಷ್. ಯೋಜನಾಧಿಕಾರಿ ದಿವಾಕರ್ ಪಿ ಎಂ ವಿಶ್ವಕರ್ಮ ಅಧಿಕಾರಿ ಶ್ರೀನಿವಾಸ್ ಹಾಗೂ ಗ್ರಾಪಂ ಪಿಡಿಒಗಳು ಉಪಸ್ಥಿತರಿದ್ದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನಗೆ ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಹಾಗೂ ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ತಾಪಂ ಇಒ ಹೊನ್ನಯ್ಯ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments