ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದಕಾರಜೋಳ ರನ್ನು ಗೆಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ.

by | 13/04/24 | ಲೋಕಸಭಾ ಚುನಾವಣೆ-2024

ಚಳ್ಳಕೆರೆ ಏ.13 ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದಕಾರಜೋಳ ರನ್ನು ಗೆಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದ ಶ್ರೀಗುರುರಾಘವೇಂದ್ರಕಲ್ಯಾಣಮಂಟಪದಲ್ಲಿ ಮಾಜಿ ಸಚಿವ ದಿ.ತಿಪ್ಪೇಸ್ವಾಮಿ ಪುತ್ರ ಕೆ.ಟಿ.ಕುಮಾರಸ್ವಾಮಿ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಲೋಕಸಭಾ ಕ್ಷೇತ್ರದ ಪರ ಮತಯಾಚನೆ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಪರ ಗಾಳಿ ದಿನ ದಿನಕ್ಕೂ ಬಿರುಗಾಳಿಯಾಗಿ ಬೀಸುತ್ತಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ. ಕಾಂಗ್ರೆಸ್ ಮುಳುಗುವ ಹಡಗಾಗಿದ್ದು ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆಯಾಗಿ ಕುಟುಂಬದಂತೆ ಕೆಲಸ ಮಾಡುತ್ತಿದ್ದು . ವಿಶ್ವದಲ್ಲೇ ಮೋದಿನ್ನು ಕೊಂಡಾಡುತ್ತಿರುವುದರಿಂದ ಯಾರಿಂದಲೂ ಮೋದಿಯವರನ್ನು ಸೋಲಿಸಲು ಸಾಧ್ಯವಿಲ್ಲ ಗೋವಿಂದ ಕಾರಜೋಳ್ ಗೆ ಮತ ನೀಡುವ ಮೂಲಕ ಅವರ ಕೈ ಬಲಪಡಿಸ ಬೇಕು ನಾನು ಸಿ ಎಂ ಆಗಿದ್ದಾಗ ಭಾಗ್ಯಲಕ್ಷ್ಮಿ.ಕಿಸಾನ್ ಯೋಜನೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಉತ್ತಮ ಆಡಳೀತ ನೀಡಿದ್ದೇನೆ.ಈಗ ಬಲಾವಣೆ ಗಾಳಿ ಬೀಸುತ್ತಿದೆ. ಕೆ.ಟಿ.ಕುಮಾರಸ್ವಾಮಿ ಬಿಜೆಗೆ ಸೇರಿರುವುದು ಆನೆ ಭಲ ಸಿಕ್ಕಾಂತಾಗಿದೆ ಮೋದೀಜಿಗೆ ಶಕ್ತಿ ತುಂಬಲು ಲೋಕಸಭಾ ಚುನಾವಣೆಯಲ್ಲಿ ಗೋವಿಂದಕಾರಜೋಳ ಇವರಿಗೆ ಮತನೀಡುವಂತೆ ಮನವಿ ಮಾಡಿದರು.

ಮಾಜಿ ಸಚಿವ ಹಾಲಿ ಶಾಸಕ ಜನಾರ್ದನ ರೆಡ್ಡಿ ಮಾತನಾಡಿ ದೇಶದ ಪ್ರಧಾನಿಯಾಗಲು ಬೇರೆಯವರಿಗೆ ಯಾರಿಗೂ ತಾಕತ್ತಿಲ್ಲ ಅದು ಮೋದಿಯವರಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರೆ ಅದು ಕಸದ ಡಬ್ಬಿಗೆ ಸಮಾನ ಆದ್ದರಿಂದ ದೇಶದ ರಕ್ಷಣೆಗಾಗಿ ಸೈನಿಕರ ಜತೆ ದೀಪಾವಳಿ ಆಚರಣೆ ಮಾಡುವ ಮೂಲಕ ದೇಶಕ್ಕೆ ಹೆಚ್ಚಿನ ಭದ್ರತೆ ನೀಡಿದ ಮೋದೀಜಿಯವರು ಮತ್ತೊಮ್ಮೆ ಪ್ರಧಾನಿ ಯಾಗಲು ಗೋವಿಂದಕಾರಜೋಳಗೆ ಮತ ನೀಡಿ ಯಡಿಯೂರಪ್ಪ ಮುಖ್ಯಮಂತ್ರಿ ಅವದಿಯಲ್ಲಿ ಉತ್ತಮ ಮಳೆ ಬೆಳೆಯಾಗುತ್ತಿತ್ತು ಈಗ ಜಿಲ್ಲೆ ಮಾಜಿ ಮುಖ್ಯಮಂತ್ರಿಯಡೀಯೂರಪ್ಪ ಕಾಲಿಡುವ ಮುನ್ನವೇ ಅವರ ಕಾಲ್ಗುಣದಿಂದ ಮೋಡ ಮುಸುಕಿತ ತಂಪಾದ ಗಾಳಿ ಹಾಗೂ ಮಳೆಯಾಗಿರುವಯದು ಮತ್ತೆ ಬಿಜೆಪಿ ಹಲೆ ಇದೆ ಎಂಬುದಕ್ಕೆ ಶುಭ ಸೂಚನೆಯಾಗಿದೆ ಸುಳ್ಳಿನ ಭರವಸೆಯ ಗ್ಯಾರೆಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಮಗ್ರೆಸ್ ಸರಕಾರ ದಿವಾಳಿಯ ಅಂಚಿನಲ್ಲಿದೆ ಗ್ಯಾರೆಂಟಿಗಳನ್ನು ನಂಬಿ ಕಾಂಗ್ರೆಸ್ ಗೆ ಮತ ನೀಡದೆ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು. ಮಾಜಿ ಸಚಿವ ದಿ.ತಿಪ್ಪೇಸ್ವಾಮಿಯ ಪುತ್ರ ಕೆ.ಟಿ.ಕುಮಾರಸ್ವಾಮಿ ಬಿಜೆಪಿ ಪಕ್ಷಕ್ಕೆ ಸೇರದಪಡೆಯಾಗಿ ಮಾತನಾಡಿ ನನ್ನ ಪೂಜ್ಯ ತಂದೆಯವರು ಯಡಿಯೂರಪ್ಪನವರ ಕೈಬಲಪಡಿಸಲು ಜೆಡಿಎಸ್ ಪಕ್ಷತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಬಿಜೆಪಿ ಶಾಸಕರಾಗಿದ್ದರು ಅದೇ ಮಾರ್ಗದಲ್ಲಿ ಈಗ ನಾನೂ ಸಹ ಯಡಿಯೂರಪ್ಪನವರ ಹಾಗೂ ಮೋದೀಜಿಯವರ ಕೈಬಲ ಪಡಿಸಲು ಅವರ ಯಡಿಯೂರಪ್ಪನ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿದ್ದೇನೆ ಎಲ್ಲಾ ಕಾರ್ಯಕರ್ಯರು ಬಿಜೆಪಿ ಪಕ್ಷದ ಗೆಲುವಿಗಾಗಿ ಶ್ರಮಿಸ ಬೇಕಿದೆ ಎಂದು ತಿಳಿಸಿದರು. ಮಾಜಿ ಸಚಿವ ಬಸವರಾಯರೆಡ್ಡಿ. ವಿಧಾನ ಪರಿಷತ್ ಸದಸ್ಯ ನವೀನ್. ಮಂಡಲ ಅಧ್ಯಕ್ಷ ಸೂರನಹಳ್ಳಿಶ್ರೀನಿವಾಸ್ ಮಾತನಾಡಿದರು. ಮಾಜಿ ಶಾಸಕರಾದ ತಿಪ್ಪಾರೆಡ್ಡಿ. ಬಸವರಾಜ್ ಮಂಡಿಮಠ್. ರಾಮದಾಸ್. ಜಯಪಾಲಯ್ಯ. ಅನಿಲ್ ಕುಮಾರ್. ಲಿಂಗದೇವರು. ನಗರಸಭೆ ಸದಸ್ಯರಾದ ಜಯಣ್ಣ. ಪಾಲಮ್ಮ .ವೆಂಕಟೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page