ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಸಾಲ ಸೌಲಭ್ಯಗಳು, ತರಬೇತಿಗಳು, ಆರ್ಥಿಕವಾಗಿ ಹಿಂದುಳಿದ ಬಡಜನರು ಈ ಯೋಜನೆಯನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೆನಾರಾ ಬ್ಯಾಂಕ್ ವ್ಯವಸ್ಥಾಪಕ ಜಿ, ರಾಮ್ ಮೋಹನ್.

by | 20/12/23 | ಆರ್ಥಿಕ

ನಾಯಕನಹಟ್ಟಿ 20
ನಾಯಕನಹಟ್ಟಿ ಪಟ್ಟಣದ ಕಾರ್ಯಲಯದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಪಟ್ಟಣ ಪಂಚಾಯಿತಿ ನಾಯಕನಹಟ್ಟಿ ಇವರ ಸಹಯೋಗದೊಂದಿಗೆ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ನಗರ ಬಡಜನರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಅರಿವು ಮೂಡಿಸಲು ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ನಾಯಕನಹಟ್ಟಿ ಪಟ್ಟಣದ ಬೀದಿ ಬದಿಯಲ್ಲಿ ಉದ್ಯಮೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಶ್ರಮಯೋಗಿ ಮನ್ ಧನ್ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ, ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಒ ಸಿ ಡಬ್ಲೂ ಅಡಿಯಲ್ಲಿ ನೋಂದಣ , ಪ್ರಧಾನ ಮಂತ್ರಿ ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಇವುಗಳ ಜೊತೆಗೆ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಿಂದ ದೇಶದ ಆರ್ಥಿಕವಾಗಿ ಹಿಂದುಳಿದ ಬಡಜನರಿಗೆ ಕೇಂದ್ರ ಸರ್ಕಾರದಿಂದ ಹಣ್ಣು, ತರಕಾರಿ, ಎಲೆ-ಅಡಿಕೆ, ತೆಂಗಿನಕಾಯಿ, ಬಳೆ, ಬಟ್ಟೆ ಮಾರುವವರು, ಚರ್ಮಕಾರರು, ಕ್ಷೌರಿಕರು, ಹೂವು ಮಾರುವರು, ಟೀ ಅಂಗಡಿದವರು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಜೀವನವನ್ನು ರೊಪಿಸಿಕೊಳ್ಳಲು ಸೂಕ್ತವಾದ ಯೋಜನೆಯಾಗಿದೆ ಎಂದು ಪಟ್ಟಣ ಪಂಚಾಯ್ತಿ ಸಮುದಾಯ ಸಂಘಟಕರಾದ ಶ್ರೀಮತಿ ನಾಗರತ್ನಮ್ಮ ಹೇಳಿದರು.


ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಿಂದ ಬೀದಿ ಬದಿ ವ್ಯಾಪರಸ್ಥರು ದಿನನಿತ್ಯದ ಸಂಭಾವನೆಯಿಂದ ಕುಟುಂಬವನ್ನು ನಡೆಸಿಕೊಂಡು ಹೋಗುವ ಬಗ್ಗೆ, ಸಣ್ಣ ಉದ್ಯೂಗ ಇಲ್ಲಂದರೆ ಕುಟುಂಬ ನಿರ್ವಹಣೆ ಪ್ರತಿದಿನ ಮನೆಗಳಲ್ಲಿ ಅನುನೂಕಲಗಳ ಬಗ್ಗೆ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಜನರಿಗೆ ಸಿಗುವಂತಹ ಸೌಲಭ್ಯಗಳ ಬಗ್ಗೆ ಎಸ್ ಓ ಕೆಂಚಪ್ಪ ಲೆಕ್ಕ ಪರಿಶೋದನೆ ಅಧಿಕಾರಿಗಳು ಹೇಳಿದರು.

ಪಟ್ಟಣದ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪರಸ್ಥರು ಪಟ್ಟಣ ಪಂಚಾಯ್ತಿ ಕಾರ್ಯಾಲಯ ಬೇಟಿ ನೀಡಿ ಈ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಸಾಲ ಸೌಲಭ್ಯಗಳು, ತರಬೇತಿಗಳು, ಆರ್ಥಿಕವಾಗಿ ಹಿಂದುಳಿದ ಬಡಜನರು ಈ ಯೋಜನೆಯನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೆನಾರಾ ಬ್ಯಾಂಕ್ ವ್ಯವಸ್ಥಾಪಕ ಜಿ, ರಾಮ್ ಮೋಹನ್ ಹೇಳಿದರು.


ಈ ಸಂದರ್ಭದಲ್ಲಿ ಪಟ್ಟಟ ಪಂಚಾಯ್ತಿ ಪ್ರಭಾರ ಮುಖ್ಯಾಧಿಕಾರಿ ಶಿವಕುಮಾರ್, ಸಮುದಾಯ ಸಂಘಟಕರಾದ ಶ್ರೀಮತಿ ನಾಗರತ್ನಮ್ಮ, ಕೆನಾರಾ ಬ್ಯಾಂಕ್ ವ್ಯವಸ್ಥಾಪಕ ಜಿ, ರಾಮ್ ಮೋಹನ್, ಎಸ್ ಓ ಕೆಂಚಪ್ಪ ಲೆಕ್ಕ ಪರಿಶೋದನೆ ಅಧಿಕಾರಿಗಳು, ಸುನೀತ ಲೆಕ್ಕ ಪರಿಶೋದನೆ ಅಧಿಕಾರಿಗಳು, ತಿಪ್ಪೇಸ್ವಾಮಿ, ಸುರೇಶ, ಸಂದೀಪ್, ದಯಾನಂದ, ಅಭಿ, ರೇಣುಕಮ್ಮ, ಬೀದಿ ಬದಿಯ ವ್ಯಾಪರಸ್ಥರು ಹಾಗೂ ಇತತರು ಇದ್ದರು.

ಸದರಿ ಯೋಜನೆಯಡಿಯಲ್ಲಿ ಈ ಕೆಳಕಂಡಂತೆ ವ್ಯಾಪರಸ್ಥರಿಗೆ ಸಾಲ ನೀಡಲಾಗುತ್ತದೆ

ಮೊದಲನೇ ಹಂತದಲ್ಲಿ ಪಟ್ಟಣ ಪಂಚಾಯಿತಿಯಿಂದ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ಪಡೆದಿರುವ ಮತ್ತು ಸಾಮಾನ್ಯ ಜನರಿಗೆ ಸೇವೆಯನ್ನು ಒದಗಿಸುತ್ತಿರುವ ವಿವಿಧ ಕ್ಷೇತ್ರಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಬ್ಯಾಂಕ್ ಮೂಲಕ 10 ಸಾವಿರ ರೂ ಸಾಲ ನೀಡಲಾಗುವುದು.

ಎರಡನೇಯ ಹಂತದಲ್ಲಿ 20 ಸಾವಿರ ರೂ- ಸಾಲ ನೀಡಲಾಗುತ್ತದೆ.
ಮೊದಲನೇ ಹಂತದಲ್ಲಿ ರೂ, 10 ಸಾವಿರ ರೂ- ಸಾಲ ಪಡೆದು ಬ್ಯಾಂಕಿಗೆ ನಿಗಿದಿತ ಸಮಯದಲ್ಲಿ ಪ್ರತಿ ತಿಂಗಳು ಸಾಲವನ್ನು ಮರುಪಾತಿ ಮಾಡಿದ ವ್ಯಾಪರಸ್ಥರಿಗೆ ಎನ್.ಒ.ಸಿ ಪ್ರತಿಯನ್ನು ಮೂಲಕ 20 ಸಾವಿರ ರೂ ಸಾಲವನ್ನು ಬ್ಯಾಂಕಿನಿಂದ ಸಾಲ ನೀಡಲಾಗುತ್ತದೆ.

ಮೂರನೇ ಹಂತದಲ್ಲಿ 50 ಸಾವಿರ ರೂ- ಸಾಲ ನೀಡಲಾಗುತ್ತದೆ.
ಎರಡನೇ ಹಂತದಲ್ಲಿ .20 ಸಾವಿರ ರೂ ಸಾಲವನ್ನು ಪಡೆದು ಬ್ಯಾಂಕಿಗೆ ನಿಗಧಿತ ಸಮಯದಲ್ಲಿ ಪ್ರತಿ ತಿಂಗಳು ಸಾಲವನ್ನು ಮರುಪಾವತಿ ಮಾಡಿ ಎನ್.ಒ.ಸಿ ಪ್ರತಿಯನ್ನು ಬ್ಯಾಂಕಿನಿಂದ ಪಡೆದು ಪಟ್ಟಣ ಪಂಚಾಯಿತಿಯ ಡೇ ನಲ್ಮ್ ವಿಭಾಗಕ್ಕೆ ಸಲ್ಲಿಸಿದರೆ ಅಂತಹ ಅರ್ಹ ಫಲಾನುಭವಿಗೆ ರೂ. ೫೦.೦೦೦/- ಸಾಲವನ್ನು ಬ್ಯಾಂಕಿನಿAದ ನೀಡಲಾಗುತ್ತಿದೆ.

ಈ ಯೋಜನೆಯಡಿ ಅರ್ಜಿಸಲ್ಲಿಸಲು ಬೇಕಾದ ದಾಖಲೆಗಳು :
ಆಧಾರ್ ಕಾರ್ಡ್, ಬಿ.ಪಿ.ಎಲ್. ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಉಳಿತಾಯ ಖಾತೆ ಪುಸ್ತಕ, ವ್ಯಾಪಾರದ ಪೋಟೋ, ಅರ್ಜಿದಾರರ ಭಾವ ಚಿತ್ರ 2 (ಪಾಸ್ ಪೋಟೋ), ಬೀದಿ ಬದಿ ವ್ಯಾಪರಸ್ಥರ ಗುರುತಿನ ಚೀಟಿ ಈ ಎಲ್ಲಾ ದಾಖಲಾತಿಗಳನ್ನು ತಗೆದುಕೊಂಡು ನಾಯಕನಹಟ್ಟಿ ಪಟ್ಟಣ ಪಂಚಾಯ್ತಿ ಕಾರ್ಯಾಲಯ ಡೇ-ನಲ್ಮ್ ವಿಭಾಗದ ಸಿಬ್ಬಂದಿಯನ್ನು ಹೆಚ್ಚಿನ ಮಾಹಿತಿಗಾಗಿ ಸಂರ್ಪಕಿಸಬಹುದು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page