ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ಯಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ದಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಹಾಗೂ ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
0 Comments