ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ: ಶಾಸಕ ಟಿ ರಘುಮೂರ್ತಿ.

by | 19/01/24 | ಸುದ್ದಿ

ಚಳ್ಳಕೆರೆ ಜ.19 ತಾಲೂಕಿನಲ್ಲಿ ನೂರು ಸರ್ಕಾರಿ ಶಾಲೆಗಳನ್ನು 2023 24ನೇ ಸಾಲಿನ ಅನುದಾನದ ಒಂದು ಕೋಟಿ ಮೊತ್ತದಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನಾಗಿ ನಿರ್ಮಿಸಿ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಲು ಶ್ರಮಿಸಲಾಗುವುದು ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.

ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರಗತಿಪರ ಶಿಕ್ಷಕರ ವೇದಿಕೆರವರ ಸಂಯುಕ್ತಾಶ್ರಯದಲ್ಲಿ ಸಾವಿತ್ರಿಬಾಯಿ ಪುಲೆ ರವರ ಜನ್ಮ ದಿನಾಚರಣೆ ಪ್ರತಿಭಾ ಪುರಸ್ಕಾರ ಮತ್ತು ಅಕ್ಷರ ಸಿರಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಸಾವಿತ್ರಿಬಾಯಿಪುಲೆರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದಿದ್ದು ಚುನಾವಣಾ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದು ಶಿಕ್ಷಕರ ಸಮಸ್ಯೆಗಳನ್ನು ಸಹ ಪ್ರಾಮಾಣಿಕವಾಗಿ ಬಗೆಹರಿಸಲು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬದ್ಧರಾಗಿದ್ದಾರೆ.

ಶಿಕ್ಷಕ ವೃತ್ತಿ ಎಂಬುದು ಪವಿತ್ರವಾದ ವೃತ್ತಿಯಾಗಿದೆ ಶಾಲೆಗಳಲ್ಲಿ ವಿದ್ಯಾಭ್ಯಾಸದ ಕಡೆಗೆ ಗಮನಕೊಡದ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪರಿಣಾಮಕಾರಿ ಬೋಧನೆ ಮೂಲಕ ಶಿಕ್ಷಣದ ಕಡೆ ಗಮನಹರಿಸುವಂತೆ ಪ್ರಯತ್ನಿಸಬೇಕು ಶಿಕ್ಷಕರ ಬೇಡಿಕೆಗಳು ನ್ಯಾಯ ಸಮತವಾಗಿದ್ದು ಸರ್ಕಾರ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡಲು ತಯಾರಿ ನಡೆಸಿದೆ 2013ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಆರನೇ ವೇತನ ಜಾರಿಗೆ ತಂದಿತ್ತು ತಾಲೂಕಿನಲ್ಲಿಯೂ ಸಹ ಶಿಕ್ಷಣ ವ್ಯವಸ್ಥೆಗೆ ಶಾಸಕರ ಅನುದಾನದ ಅಡಿಯಲ್ಲಿ ಹಣ ನಿಗದಿಪಡಿಸಿದ್ದು ಶಾಲಾ ಕೊಠಡಿಗಳ ದುರಸ್ತಿ ಕುಡಿಯುವ ನೀರು ಶೌಚಾಲಯ ನಿರ್ಮಾಣ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದೇನೆ ಕೆಲ ಕಾರಣಾಂತರಗಳಿಂದ ಕೆಲ ಶಾಲೆಗಳ ಕಟ್ಟಡಗಳ ನಿರ್ಮಾಣದಲ್ಲಿ ವ್ಯತ್ಯಯ ಉಂಟಾಗಿದೆ ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಶಿಕ್ಷಕರ ಸಮಸ್ಯೆಗಳನ್ನು ಸದನದಲ್ಲಿ ಚರ್ಚಿಸಲು ಸಿದ್ಧನಿದ್ದು ಶಿಕ್ಷಕರ ಪರವಾದ ಧ್ವನಿಯಾಗಿ ನಿಲ್ಲುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ ನಾಗೇಶ್ ಮಾತನಾಡಿ ಪ್ರಾಥಮಿಕ ಶಾಲಾ ಶಿಕ್ಷಕರು ಅನೇಕ ವರ್ಷಗಳಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದರು ಸಹ ವಿದ್ಯಾರ್ಥಿಗಳಿಗೆ ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದೇ ಮೋಸ ಅಥವಾ ತಾರತಮ್ಯವನ್ನು ಮಾಡದೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತ ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಬಳಸಿ ಎಲ್ಲ ವಿದ್ಯಾರ್ಥಿಗಳು ತಮ್ಮ ಸ್ವಂತ ಮಕ್ಕಳಂತೆ ಭಾವಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿ ಉತ್ತಮ ಪ್ರಜೆಯನ್ನಾಗಿ ರೂಪಿಸುತ್ತಿದ್ದು ಆದರೆ ದೀಪದ ಕೆಳಗೆ ಕತ್ತಲೆ ಎಂಬಂತೆ ಶಿಕ್ಷಕರ ಜೀವನ ಮಟ್ಟ ಮಾತ್ರ ಸುಧಾರಿಸದೆ ಇರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಹಿಂದಿನ ಎಲ್ಲಾ ಸರ್ಕಾರಗಳು ಶಿಕ್ಷಕರನ್ನು ಸರ್ಕಾರದ ಯೋಜನೆಗಳನ್ನು ಜಾರಿಗೊಳಿಸಲು ಹಾಗೂ ಇತರೆ ಕೆಲಸಗಳಿಗಾಗಿ ಬಳಸಿಕೊಂಡು ನಿಕೃಷ್ಟವಾಗಿ ಕಾಣುತ್ತಿವೆ ಆದರೆ ಅವರ ಬೇಡಿಕೆಗಳು ಮಾತ್ರ ಹಾಗೆ ಉಳಿದಿದ್ದು ಶಿಕ್ಷಕರು ಸಂಕಷ್ಟದ ಪರಿಸ್ಥಿತಿ ಎದುರಿಸುವಂಥಾಗಿದ್ದು ತಮ್ಮ ಮಕ್ಕಳ ಭವಿಷ್ಯ ರೂಪಿಸಲು ಸಹ ಸಾಧ್ಯವಾಗದೆ ಹೋಗಿದೆ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸುಮಾರು 80,000 ಶಿಕ್ಷಕರಿಗೆ ಪದವೀಧರ ಶಿಕ್ಷಕರೆಂದು ಪರಿಗಣಿಸಿ ಮುಂಬಡ್ತಿ ನೀಡಬೇಕು 7ನೇ ವೇತನ ಆಯೋಗದ ವೇತನವನ್ನು ಜಾರಿಗೊಳಿಸಬೇಕು 2006ರಿಂದ ನೇಮಕವಾದ ಸರ್ಕಾರಿ ನೌಕರರಿಗೆ ಎನ್‌ಪಿಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಗೊಳಿಸಬೇಕು ಶಾಲೆಗಳಲ್ಲಿನ ಶೌಚಾಲಯ ಸ್ವಚ್ಛತೆಗೆ ಪ್ರತ್ಯೇಕ ಸಿಬ್ಬಂದಿಯನ್ನು ನೇಮಿಸಿ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು ರಾಜ್ಯದ 224 ಶಾಸಕರು ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಶಿಕ್ಷಕರು ಬೆಂಬಲ ನೀಡಿರುವುದರಿಂದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಯಂತೆ ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸುವ ಭರವಸೆ ಹೊಂದಿದ್ದೇವೆ ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶಿಕ್ಷಕರು ಪ್ರಮುಖ ಪಾತ್ರವಹಿಸಲಿದ್ದು ತಮ್ಮ ಶಕ್ತಿಯನ್ನು ಪ್ರದರ್ಶಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು‌.

ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಉತ್ತಮ ಶಾಲಾ ಪ್ರಶಸ್ತಿ ನೂತನ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು


ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ತಿಪ್ಪೇಸ್ವಾಮಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಾರುತೇಶ್ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page