ಪ್ರಾಥಮಿಕ ಹಂತದ ವಿದ್ಯಾರ್ಥಿಗಳ ಕಲಿಕೆಯನ್ನು ಆಧರಿಸಿಮಕ್ಕಳನ್ನು ವಿವಿಧ ಗುಂಪುಗಳನ್ನಾಗಿ ವಿಂಗಡಿಸಿಕೊಂಡುಕನಿಷ್ಟ ಕಲಿಕಾ ಸಾಮರ್ಥ್ಯಗಳನ್ನು ಶಿಕ್ಷಕರು‌ಮಾರ್ಗದರ್ಶಿಸಬೇಕು ಎಂದು ಚಿತ್ರದುರ್ಗ ತಾಲೂಕುಕ್ಷೇತ್ರಶಿಕ್ಷಣಾಧಿಕಾರಿ ಎಸ್ ನಾಗಭೂಷಣ

by | 26/05/24 | ಶಿಕ್ಷಣ


ಚಿತ್ರದುರ್ಗ
ಪ್ರಾಥಮಿಕ ಹಂತದ ವಿದ್ಯಾರ್ಥಿಗಳ ಕಲಿಕೆಯನ್ನು ಆಧರಿಸಿಮಕ್ಕಳನ್ನು ವಿವಿಧ ಗುಂಪುಗಳನ್ನಾಗಿ ವಿಂಗಡಿಸಿಕೊಂಡುಕನಿಷ್ಟ ಕಲಿಕಾ ಸಾಮರ್ಥ್ಯಗಳನ್ನು ಶಿಕ್ಷಕರು‌ಮಾರ್ಗದರ್ಶಿಸಬೇಕು ಎಂದು ಚಿತ್ರದುರ್ಗ ತಾಲೂಕುಕ್ಷೇತ್ರಶಿಕ್ಷಣಾಧಿಕಾರಿ ಎಸ್ ನಾಗಭೂಷಣ ಹೇಳಿದರು
ಚಿತ್ರದುರ್ಗ ನಗರದ ಸಂತ ಜೋಸೆಫ್ ಶಾಲೆಯಲ್ಲಿ ಶನಿವಾರ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿಗಳ ಕಚೇರಿ, ಹಾಗೂ
ಪದನಿಮಿತ್ತ ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ,ಚಿತ್ರದುರ್ಗ ತಾಪಂನ ಮಧ್ಯಾಹ್ನದ ಬಿಸಿಯೂಟ ಯೋಜನೆ, ವತಿಯಿಂದ ಚಿತ್ರದುರ್ಗ ತಾಲೂಕು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ
ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ 2024
25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಬೋತ್ಸವದ ಹಿನ್ನೆಲೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಚಿತ್ರದುರ್ಗ ತಾಲೂಕಿನ ಎಲ್ಲಾ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಕನ್ನಡ ಇಂಗ್ಲೀಷ್ ಮತ್ತು ಹಿಂದಿಹಾಗೂ ಐಚ್ಚಿಕ ವಿಷಯಗಳ ಕನಿಷ್ಟ ಕಲಿಕಾ ಸಾಮರ್ಥ್ಯಗಳನ್ನುಕಲಿಸಿಕೊಂಡೇ ನಿಗಧಿತ ಪಠ್ಯ ಸಹಪಠ್ಯ ಮಾರ್ಗದರ್ಶನ ನೀಡಬೇಕುಎಂದರು ಶಾಲಾ ಮುಖ್ಯಸ್ಥರು ಸರ್ಕಾರದ ನಿರ್ದೇಶನದಂತೆ ಶಾಲೆಗಳಲ್ಲಿಪ್ರೋತ್ಸಾಹಕ ಕಾರ್ಯಕ್ರಮಗಳನ್ನು ಚಾಚೂ ತಪ್ಪದೇಅನುಷ್ಟಾನಗೊಳಿಸಬೇಕು ಎಂದು ಸೂಚಿಸಿದರು
ಚಿತ್ರದುರ್ಗ ತಾಲೂಕು ಕ್ಷೇತ್ರಸಮ್ವಯಾಧಿಕಾರಿ ಈ ಸಂಪತ್‌ಕುಮಾರ ಪ್ರಾಸ್ತಾವಿಕ
ಮಾತನಾಡಿ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳ ಕಲಿಕೆ ಸರಿಯಾದ ಕ್ರಮದಲ್ಲಿ ಆಗದೇ
ಹೋದರೆ ಅವರು ಪ್ರೌಢ ಮತ್ತು ಉನ್ನತ ಹಂತದಲ್ಲಿ ವಿಫಲತೆ ಕಾಣುತ್ತಾರೆ ಈ ಹಿನ್ನೆಲೆ
ಪ್ರಾಥಮಿಕ ಹಂತದ ಶಿಕ್ಷಣ ಮಕ್ಕಳಿಗೆ ಭದ್ರಬುನಾದಿ ಎಂದರು
ಚಿತ್ರದುರ್ಗ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆಂಚಪ್ಪ
ಮಾತನಾಡಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸರ್ಕಾರ ಹತ್ತು ಹಲವು ಪ್ರೋತ್ಸಾಹಕ
ಯೋಜನೆಗಳನ್ನು ಜಾರಿಗೆ ತಂದಿದೆ ಇಂದಿನ ಅಧುನಿಕ ಕಾಲಘಟ್ಟಕ್ಕೆ ಅನುಗುಣವಾಗಿ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಕಟಿಬಧ್ದರಾಗಬೇಕು ಎಂದರು
ಚಿತ್ರದುರ್ಗ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಚಿದಾನಂದಸ್ವಾಮಿ ಮಾತನಾಡಿ ಸರ್ಕಾರದ
ನಿದೇಶನದಂತೆ ಮುಖ್ಯಶಿಕ್ಷಕರು ಶಾಲಾ ವಿದ್ಯಾರ್ಥಿಗಳ ಕ್ರೀಡಾನಿಧಿ ಮತ್ತು ಕ್ರೀಡಾಶುಲ್ಕ
ಪಾವತಿಸಿ ದಾಖಲಾಗಿರುವ ಎಲ್ಲಾ ಮಕ್ಕಳಿಗೂ ಶಾಲೆಗಳಲ್ಲಿ ನಿಯಮಿತವಾಗಿ ದೈಹಿಕ ಶಿಕ್ಷಣ
ಚಟುವಟಿಕೆಗಳನ್ನು ಕೈಗೊಂಡು ದೈಹಿಕ ಶಿಕ್ಷಣ ಪಠ್ಯಪುಸ್ತಕಗಳನ್ನು
ಮಾರ್ಗದರ್ಶನ ನೀಡಬೇಕು ಎಂದರು
ಇದೇ ವೇಳೆ ಶಾಲೆಗಳಲ್ಲಿ ದಿನಕ್ಕೊಂದು ಪ್ರಯೋಗ ಕೈಪಿಡಿಯನ್ನು ಬಿಇಒ ಎಸ್
ನಾಗಭೂಷಣ ಲೋಕಾರ್ಪಣೆಗೊಳಿಸಿದರು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ
ಶಾಲೆಗಳಲ್ಲಿ ನಿಯಮಿತವಾಗಿ ಕೈಗೊಳ್ಳಬಹುದಾದ ಚಟುವಟಿಕೆಗಳ ಮಾಹಿತಿಯನ್ನು
ಮುಖ್ಯಶಿಕ್ಷಕರಿಗೆ ತಿಳಿಸಿದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page