ಪ್ರಿಯಾಂಕಾ ಗಾಂಧಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆ* ಒಂದು ಲಕ್ಷಕ್ಕೂ ಹೆಚ್ಚು ಜನ ಆಗಮನ, ಮಹಿಳೆಯರೇ ಹೆಚ್ಚು ಚಿತ್ರದುರ್ಗದಲ್ಲಿ 23ರಂದು ಪ್ರಚಾರ ಸಭೆ ಆಯೋಜನೆ ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ*

by | 21/04/24 | ಚುನಾವಣೆ-2023

ಚಿತ್ರದುರ್ಗ, ಏ.21
ಪ್ರಥಮ ಬಾರಿಗೆ ಇಂದಿರಾಗಾಂಧಿ ಮೊಮ್ಮಗಳು, ಭಾರತದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಏ.23ರಂದು ಆಗಮಿಸುತ್ತಿದ್ದು, ಅವರನ್ನು ನೋಡಲು, ಅವರ ಭಾಷಣ ಕೇಳುವ ಕುತೂಹಲ ಸಹಜವಾಗಿ ಜನರಲ್ಲಿ ಹೆಚ್ಚು ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.


ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಕಾರ್ಯಕ್ರಮದ ಸಿದ್ಧತಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಅಂದು ಮಧ್ಯಾಹ್ನ 2.30 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಆಯೋಜಿಸಿರುವ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ ಎಂದರು.

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ನಡೆಸಲು ಸಿದ್ಧತೆ ಭರದಿಂದ ಸಾಗುತ್ತಿದೆ. 25 ಸಾವಿರ ಆಸನಗಳನ್ನು ಹಾಕಿಸಲಾಗಿದೆ. ಜೊತೆಗೆ ಜಿಲ್ಲೆಯ ವಿವಿಧ ತಾಲೂಕು, ಹಳ್ಳಿಗಳಿಂದ ಜನರೇ ಸ್ವಯಂ ಪ್ರೇರಿತರಾಗಿ ಬಸ್ ಇತರ ವಾಹನಗಳನ್ನು ಮಾಡಿಕೊಂಡು ಇಂದಿರಾಗಾಂಧಿ ಮೊಮ್ಮಗಳನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡುವ ಜವಾಬ್ದಾರಿ ನಮ್ಮದು. ಆದ್ದರಿಂದ ಅಚ್ಚುಕಟ್ಟು ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ನಾಡಿನ ಜನತೆಗೆ ಇಂದಿರಾಗಾಂಧಿ ಮತ್ತು ಅವರ ಕುಟುಂದ ಜೊತೆಗೆ ಭಾವನಾತ್ಮಕ ಸಂಬಂಧ ಇದೆ. ಉಳುವವನೆ ಒಡೆಯ, ಬ್ಯಾಂಕ್‍ಗಳ ರಾಷ್ಟ್ರೀಕರಣ, ಗರೀಭಿ ಹಠಾವ್ ಹೀಗೆ ಬಡವರ ಪರ ನೂರಾರು ಕಾರ್ಯಕ್ರಮ ಕೊಟ್ಟ ಇಂದಿರಾ ಗಾಂಧಿಯನ್ನು ನಾಡಿನ ಜನರು ತಾಯಿ ಸ್ಥಾನದಲ್ಲಿಟ್ಟಿದ್ದಾರೆ. ದೇಶಕ್ಕೆ ಕಂಪ್ಯೂಟರ್ ಪರಿಚಯಿಸಿದ ರಾಜೀವ್ ಗಾಂಧಿ ಆಧುನೀಕ ಭಾರತದ ನಿರ್ಮಾತೃ ಎಂದೇ ಪ್ರತಿ ಗಳಿಸಿದ್ದಾರೆ. ಆದ್ದರಿಂದ ಅವರ ಕುಟುಂಬದ ಕುಡಿ ಪ್ರಿಯಾಂಕಾ ಗಾಂಧಿಯ ಭಾಷಣ ಕೇಳಲು ಅಂದಾಜು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ 22 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಖಚಿತ ಎಂಬ ಸಮೀಕ್ಷೆಗಳು ಬಿಜೆಪಿಯವರ ನಿದ್ದೆ ಕೆಡಿಸಿದೆ. ನಮ್ಮ ಗುರಿ 28 ಕ್ಷೇತ್ರದಲ್ಲೂ ಗೆಲ್ಲಬೇಕೆಂಬುದು ಆಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪಕ್ಷದ ವರಿಷ್ಠರು ಎಲ್ಲ ರೀತಿಯ ಸಂಘಟನೆ ಕೈಗೊಂಡಿದ್ದಾರೆ ಎಂದರು.

ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಪಕ್ಷ ಘೋಷಣೆ ಮಾಡಿದಾಗ ಸಾಧ್ಯವೇ ಇಲ್ಲ ಇದು ಸುಳ್ಳು ಎಂದು ಪ್ರಚಾರ ನಡೆಸಿದರು. ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆ ಯೋಜನೆಗಳನ್ನು ಜಾರಿಗೊಳಿಸಿದ ಬಳಿಕ ರಾಜ್ಯ ದಿವಾಳಿ ಆಗಲಿದೆ ಎಂದು ಬಿಜೆಪಿಗರು ಆರೋಪಿಸಿದರು. ಆದರೆ, ಯೋಜನೆಗಳು ಸುಗಮವಾಗಿ ಅನುಷ್ಠಾನಗೊಂಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಭರದಿಂದ ಸಾಗುತ್ತಿವೆ ಎಂದರು.

ಈಗ ಎಐಸಿಸಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಗ್ಯಾರಂಟಿ ಸಾಧ್ಯವೇ ಇಲ್ಲ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಹೇಗೆ ಯೋಜನೆಗಳು ಜಾರಿಗೊಂಡಿವೆ, ಅದೇ ರೀತಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆ ಘೋಷಿತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು. ಈ ವಿಷಯದಲ್ಲಿ ಜನರಿಗಷ್ಟೇ ಅಲ್ಲ ಬಿಜೆಪಿಗರಲ್ಲೂ ನಂಬಿಕೆ ಇದೆ. ಆದರೆ ಅವರು ಸೋಲುವ ಭೀತಿಗೆ ಆತಂಕಗೊಂಡು ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಶೈಲಿಗೆ ಬಿಜೆಪಿಯವರು ಬೆಚ್ಚಿದ್ದಾರೆ. ಆರೋಪ ಮಾಡಲು ಏನೂ ಇಲ್ಲದೆ ಕಾಂಗ್ರೆಸ್ ಅಧಿಕಾರದಲ್ಲಿ ಬರಗಾಲ ಎಂಬ ಅವೈಜ್ಞಾನಿಕ, ಮೂಡನಂಬಿಕೆ ಮಾತುಗಳನ್ನು ಆಡುತ್ತಿದ್ದಾರೆ. ಅವರ ಈ ಹೇಳಿಕೆ ಮಧ್ಯೆಯೇ ರಾಜ್ಯದಲ್ಲಿ ಮಳೆ ಆಗುತ್ತಿದೆ. ವಿಜ್ಞಾನದ ತಿಳಿವಳಿಕೆ ಇಲ್ಲದವರು, ಸಾಮಾನ್ಯ ವ್ಯಕ್ತಿಗೆ ಇರುವಷ್ಟು ಜ್ಞಾನ ಇಲ್ಲದ ಬಿಜೆಪಿಯವರು ಪ್ರಕೃತಿ ಸಹಜ ಮುನಿಸನ್ನು ಕಾಂಗ್ರೆಸ್ ಮೇಲೆ ಆರೋಪಿಸುವ ಮೂಲಕ ನಗೆಪಾಟಿಲು ಆಗುತ್ತಿದ್ದಾರೆ ಎಂದರು.

ಬಿಜೆಪಿಯವರಿಗೆ ಶಿಕ್ಷಣ, ಆರೋಗ್ಯ ಕ್ಷೇತ್ರ, ಅಭಿವೃದ್ಧಿ, ಜನರ ಬದುಕು ಬೇಕಿಲ್ಲ. ಸುಳ್ಳುಗಳ ಮೇಲೆ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಅವರ ಒಡೆದು ಆಳುವ ನೀತಿಗೆ ಜನರು ತಕ್ಕ ಪಾಠ ಕಲಿಸಿದ್ದು, ಆ ಫಲಿತಾಂಶ ಲೋಕಸಭಾ ಚುನಾವಣೆಯಲ್ಲಿ ಮರುಕಳಿಸಲಿದೆ ಎಂದು ಹೇಳಿದರು.

ಯಾದವ, ನಾಯಕ, ಒಕ್ಕಲಿಗ, ವೀರಶೈವ ಲಿಂಗಾಯತ, ಕುರುಬ, ಮಾದಿಗ ಸಮುದಾಯದ ಸೇರಿ ವಿವಿಧ ಜಾತಿ ಸಂಘಟನೆಗಳ ಮುಖಂಡರು, ರಾಷ್ಟ್ರನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಸಿದ್ದರಾಮಯ್ಯ ಅವರನ್ನು ವಿಶೇಷವಾಗಿ ಸ್ವಾಗತಿಸುವ ಕುರಿತು ಚರ್ಚಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‍ಪೀರ್,ಮುಖಂಡರಾದ ಪ್ರಕಾಶ ರಾಮನಾಯ್ಕ, ಎನ್.ಡಿ.ಕುಮಾರ್, ಓ.ಶಂಕರ್, ಬಿ.ಪಿ.ಪ್ರಕಾಶಮೂರ್ತಿ, ಡಿ.ಎನ್.ಮೈಲಾರಪ್ಪ, ವಕೀಲ ಶರಣಪ್ಪ, ರವಿಕುಮಾರ್ ಇತರರಿದ್ದರು.

*ಬಾಕ್ಸ್*
*ಹತ್ತು ವರ್ಷದ ಸಾಧನೆ ಶೂನ್ಯ*
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ, ತಮ್ಮನ್ನು ತಾವೇ ವೈಭವಿಕರಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಹತ್ತು ವರ್ಷದಲ್ಲಿ ಏನೂ ಮಾಡಿಲ್ಲ. ಅವರ ಸಾಧನೆ ಶೂನ್ಯ. ಸಿಲಿಂಡರ್‍ನ್ನು ಸಾವಿರದ ಗಡಿ ದಾಟಿಸಿದ್ದು, 70 ವರ್ಷದಲ್ಲಿ ಕಾಂಗ್ರೆಸ್ ಸ್ಥಾಪನೆ ಮಾಡಿದ್ದ ಸರ್ಕಾರಿ ಸಂಸ್ಥೆಗಳನ್ನು ಶ್ರೀಮಂತ ಸ್ನೇಹಿತರಿಗೆ ಮಾರಾಟ ಮಾಡಿದ್ದು, ನಿರುದ್ಯೋಗ ಹೆಚ್ಚಳ, ಬೆಲೆ ಏರಿಕೆ, ರೈತರು, ಕಾರ್ಮಿಕರ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ, ಸಂವಿಧಾನ ಬದಲಾಯಿಸುವ ಮಾತುಗಳು, ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟು ಮಾಡುವ ನಡೆಯೇ ಅವರ ಹತ್ತು ವರ್ಷದ ಸಾಧನೆ ಆಗಿದೆ. ಆದ್ದರಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿ-ಧರ್ಮ ಎಂದು ಭಾಷಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಟೀಕಿಸಿದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page