ಪ್ರೋತ್ಸಾಹಧನಕ್ಕೆ ಅರ್ಜಿ

by | 22/08/23 | ಆರ್ಥಿಕ

ಚಿತ್ರದುರ್ಗ ಆ.22:
2023-24ನೇ ಸಾಲಿನಲ್ಲಿ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಹಧನ ನೀಡಲು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2023ರ ಸೆಪ್ಟೆಂಬರ್ 21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, https://sevasindhu.karnataka.gov.in ವೆಬ್‍ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು: ನಿವಾಸಿ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ ಕಾರ್ಡ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಬುಕ್ (ಆಧಾರ್ ಲಿಂಕ್ ಮಾಡಿಸಿರಬೇಕು)
ಷರತ್ತುಗಳು: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು, ಕೋರ್ಸ್‍ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ.25000/- ದಂತೆ (ಗರಿಷ್ಟ 2ವರ್ಷ) ಅನುದಾನವನ್ನು ನೀಡಲಾಗುವುದು. ಅಲ್ಪ ಸಲ್ಪಸಂಖ್ಯಾತರ ಅಭ್ಯರ್ಥಿಗಳು ಪೋಷಕರ ವಾರ್ಷಿಕ ವರಮಾನ ಗರಿಷ್ಟ ರೂ 6ಲಕ್ಷಗಳ ಮಿತಿಯಲ್ಲಿರಬೇಕು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ ಅಥವಾ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಪ್ರೋತ್ಸಾಹಧನ ಪಡೆಯುವ ವಿದ್ಯಾರ್ಥಿಗಳು ಭಾರತ ಸರ್ಕಾರ ಅಥವಾ ಇತರೆ ವಿದ್ಯಾರ್ಥಿವೇತನ ಶಿಷ್ಯವೇತನ ಪಡೆಯಲು ಅರ್ಹರಿರುತ್ತಾರೆ, ಈ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳು ಸರ್ಕಾರಿ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ನಿಯಮಾನುಸಾರ ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ವಿದ್ಯಾರ್ಥಿಗಳು ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲೆಗಳನ್ನು ಸಲ್ಲಿಸಬೇಕು. ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ಸ್ ಎಜುಕೇಷನ್‍ನಿಂದ ಮಾನ್ಯತೆ ಪಡೆದಿರುವ ಬಿಎಡ್ ಹಾಗೂ ಡಿಪಾರ್ಟ್‍ಮೆಂಟ್ ಆಫ್ ಸ್ಟೇಟ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್‍ನಿಂದ ಮಾನ್ಯತೆ ಪಡೆದಿರುವ ಡಿಎಡ್ ಕೋರ್ಸುಗಳ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಅರ್ಹರಿರುತ್ತಾರೆ. ಅರ್ಜಿಸಲ್ಲಿಸುವ ವಿದ್ಯಾರ್ಥಿಗಳು ಅರ್ಹತೆ ಪರೀಕ್ಷೆ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಕನಿಷ್ಠ 50ರಷ್ಟು ಅಂಕಗಳನ್ನು ಪಡೆದಿರಬೇಕು. ಉತ್ತೀರ್ಣರಾಗದ ಅಭ್ಯರ್ಥಿಗಳು ಪ್ರೋತ್ಸಾಧನ ಪಡೆಯಲು ಅರ್ಹರಾಗಿರುವುದಿಲ್ಲ, ಮೊದಲನೇ ವರ್ಷದಲ್ಲಿ ಪ್ರೋತ್ಸಾಧನ ಪಡೆದಿರುವ ಅಭ್ಯರ್ಥಿಗಳು 2ನೇ ವರ್ಷಕ್ಕೆ ಪ್ರೋತ್ಸಾಧನ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸಬೇಕು. ಪ್ರತಿ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದಲ್ಲಿ ಕನಿಷ್ಠ ಶೇ 50ರಷ್ಟು ಬಾಲಕಿಯರಿಗೆ ಮೀಸಲಿರಿಸತಕ್ಕದ್ದು ಹಾಗೂ ಡಿಎಡ್ ಕೋರ್ಸ್‍ಗೆ ಶೇ.25ರಷ್ಟು ಮತ್ತು ಬಿಎಡ್ ಕೋರ್ಸ್‍ನ ಅಭ್ಯರ್ಥಿಗಳಿಗೆ ಶೇ. 75ರಷ್ಟು ಅನುಪಾತದಲ್ಲಿ ಉಪಯೋಗಿಸುವುದು, ಸುಳ್ಳು ಮಾಹಿತಿ ದಾಖಲಾತಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿ ಪ್ರೋತ್ಸಾಧನ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೀಡಲಾದ ಪ್ರೋತ್ಸಾಧನ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸಲಾಗುವದು. ಈ ಯೋಜನೆಯಡಿ ಪ್ರೋತ್ಸಾಧನ ಪಡೆದ ವಿದ್ಯಾರ್ಥಿಗಳು ಡಿಎಡ್ ಮತ್ತು ಬಿಎಡ್ ಕೋರ್ಸ್ ಪೂರ್ಣಗೊಳಿಸದೆ ಮಧ್ಯದಲ್ಲಿ ಬಿಟ್ಟು ಹೋದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ವಿಚಾರಣೆ ನಡೆಸಿ ಇಲಾಖೆಯ ಮುಖ್ಯಸ್ಥರಿಗೆ ವರದಿ ಸಲ್ಲಿಸಬೇಕು ಅಂತಹ ಪ್ರಕರಣಗಳಲ್ಲಿ ಪರಿಶೀಲಿಸಿ ಇಲಾಖಾ ಮುಖ್ಯಸ್ಥರು ಅಂತಿಮ ನಿರ್ಣಯ ತೆಗೆದುಕೊಳ್ಳತಕೊಳ್ಳುತ್ತಾರೆ, ಒಂದು ಪಕ್ಷ ಸಮಂಜಸವಾದ ಕಾರಣವಿಲ್ಲದಿದ್ದಲ್ಲಿ ಸಂಬಂಧಪಟ್ಟ ಅಭ್ಯರ್ಥಿಗಳಿಗೆ ನೀಡಲಾದ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page