ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಸಮಾರಂಭ ಹರ್ತಿಕೋಟೆ ಬಳಿ ಕಾರ್ಯಕ್ರಮ ಜರುಗುವ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

by | 21/03/23 | ಜನಧ್ವನಿ

ಚಿತ್ರದುರ್ಗ ಮಾರ್ಚ್ 21
ತಾಂಡಾ, ಹಾಡಿ, ಹಟ್ಟಿ ಮುಂತಾದ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿಸಲಾಗಿದ್ದು, ಚಿತ್ರದುರ್ಗ ಸೇರಿದಂತೆ ರಾಜ್ಯ 09 ಜಿಲ್ಲೆಗಳ ಇಂತಹ ಗ್ರಾಮಗಳ ಸುಮಾರು 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಸಮಾರಂಭವನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಹರ್ತಿಕೋಟೆ ಗ್ರಾಮದ ಬಳಿ ಏರ್ಪಡಿಸಲಾಗುತ್ತಿದ್ದು, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಮಂಗಳವಾರ ಕಾರ್ಯಕ್ರಮ ಏರ್ಪಡಿಸಲಾಗುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಂಡಾ, ಹಾಡಿ, ಗೊಲ್ಲರಹಟ್ಟಿ, ಹಟ್ಟಿ ಸೇರಿದಂತೆ ವಿವಿಧ ಜನವಸತಿ ಪ್ರದೇಶಗಳನ್ನು ಸರ್ಕಾರದಿಂದ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯೂ ಸೇರಿದಂತೆ, ತುಮಕೂರು, ವಿಜಯನಗರ, ಹಾವೇರಿ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಹಾಸನ ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 09 ಜಿಲ್ಲೆಗಳಲ್ಲಿರುವ ಇಂತಹ ಗ್ರಾಮಗಳಲ್ಲಿನ ಸುಮಾರು 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಸಮಾರಂಭವನ್ನು ಚಳ್ಳಕೆರೆ- ಹಿರಿಯೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಹರ್ತಿಕೋಟೆ ಗ್ರಾಮದ ಬಳಿ ಆಯೋಜಿಸಲು ಸ್ಥಳ ನಿಗದಿಪಡಿಸಲಾಗಿದ್ದು, ಸಮಾರಂಭಕ್ಕಾಗಿ ಸ್ಥಳ ಸಿದ್ಧತೆ ಕಾರ್ಯ ಪ್ರಾರಂಭಗೊಂಡಿದೆ. ಜಿಲ್ಲಾಧಿಕಾರಿಗಳು ಮಂಗಳವಾರ ಕಾರ್ಯಕ್ರಮ ಜರುಗುವ ಸ್ಥಳಕ್ಕೆ ಭೇಟಿ ನೀಡಿ, ಸಿದ್ಧತೆ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಸಮಾರಂಭಕ್ಕಾಗಿ ಬೃಹತ್ ವೇದಿಕೆ, 09 ಜಿಲ್ಲೆಗಳಿಂದ ಆಗಮಿಸುವ ವಾಹನಗಳ ಪಾರ್ಕಿಂಗ್, ಗಣ್ಯಾತಿಗಣ್ಯರಿಗಾಗಿ ಹೆಲಿಪ್ಯಾಡ್‍ಗಳ ನಿರ್ಮಾಣ, ಊಟದ ಕೌಂಟರ್‍ಗಳು ಮತ್ತಿತರ ಉದ್ದೇಶಕ್ಕಾಗಿ ನಿಗದಿಪಡಿಸುವ ಸ್ಥಳದ ಪರಿಶೀಲನೆ ನಡೆಸಿದರು.
ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ಚಂದ್ರಯ್ಯ, ಹಿರಿಯೂರು ತಹಸಿಲ್ದಾರ್ ಪ್ರಶಾಂತ್ ಪಾಟೀಲ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page