ಫಲಾನುಭವಿಗಳ ಸಮ್ಮೇಳನ ವಸ್ತುಪ್ರದರ್ಶನ ಮಳಿಗೆಗಳಿಗೆ ಜನರ ದಂಡು: ಯೋಜನೆಗಳ ಅರಿವು

by | 04/03/23 | ಸುದ್ದಿ


ಚಿತ್ರದುರ್ಗ ಮಾ. 04
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಆವರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಜನರು ತಂಡೋಪತಂಡವಾಗಿ ಇದೇ ಆವರಣದಲ್ಲಿ ವಿವಿಧ ಇಲಾಖೆಗಳ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದರು.
ಫಲಾನುಭವಿಗಳ ಸಮ್ಮೇಳನಕ್ಕಾಗಿ ಬೆಳಿಗ್ಗೆಯಿಂದಲೇ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದತ್ತ ಹರಿದು ಬಂದ ಜನಸಾಗರ, ಸಮಾರಂಭ ಪ್ರಾರಂಭವಾಗುವುದಕ್ಕೂ ಮುನ್ನ, ಇದೇ ಮೈದಾನದಲ್ಲಿ ವಿವಿಧ ಇಲಾಖೆಗಳು ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ತೆರೆದಿದ್ದ ವಸ್ತು ಪ್ರದರ್ಶನ ಮಳಿಗೆಯತ್ತ ಮುಖಮಾಡಿದರು. ಹಲವು ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಗಳಲ್ಲೂ ಜನಸಂದಣಿ ಕಂಡುಬಂದಿತು. ಅದರಲ್ಲೂ ಪ್ರಮುಖವಾಗಿ ಸ್ವ-ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ಸುಮಾರು 10 ಕ್ಕೂ ಹೆಚ್ಚು ಮಳಿಗೆಗಳನ್ನು ಒದಗಿಸಲಾಗಿತ್ತು. ಜಿಲ್ಲೆಯ ವಿವಿಧ ಸ್ವ-ಸಹಾಯ ಗುಂಪುಗಳು ಉತ್ಪಾದಿಸಿರುವ ತಿಂಡಿ ತಿನಿಸುಗಳು, ಅಲಂಕಾರಿಕ ವಸ್ತುಗಳು ಸೇರಿದಂತೆ ವಿವಿಧ ಉತ್ಪನ್ನಗಳ ಪ್ರದರ್ಶನ- ಸರಸ್ ಮೇಳವನ್ನು ವೀಕ್ಷಿಸಿದ ಜನರು, ಆಕರ್ಷಕ ಉತ್ಪನ್ನಗಳ ಖರೀದಿಯನ್ನೂ ಮಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಉದ್ಯೋಗಖಾತ್ರಿ ಕುರಿತು ವಸ್ತುಪ್ರದರ್ಶನ ಆಯೋಜಿಸಿದರೆ, ಆರೋಗ್ಯ ಇಲಾಖೆಯು ಇದೇ ಸಂದರ್ಭದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಲು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್‍ಗಾಗಿ ಫಲಾನುಭವಿಗಳ ನೊಂದಣಿಗೆ ಹಾಗೂ ಉಚಿತವಾಗಿ ಜನರ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಿತ್ತು. ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಪೂರೈಸುವ ಪ್ರಾತ್ಯಕ್ಷಿಕೆ ಮಾದರಿ, ತೋಟಗಾರಿಕೆ ಇಲಾಖೆ, ಕೃಷಿ, ಮೀನುಗಾರಿಕೆ, ಸಮಾಜ ಕಲ್ಯಾಣ, ಪಶುಸಂಗೋಪನೆ, ಕೈಗಾರಿಕೆ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ರೇಷ್ಮೆ ಇಲಾಖೆಗಳು ಕೂಡ ವಸ್ತುಪ್ರದರ್ಶನ ಏರ್ಪಡಿಸುವ ಮೂಲಕ ಆಯಾ ಇಲಾಖೆಯ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸುವಲ್ಲಿ ಯಶಸ್ಸು ಕಂಡವು. ಸಾವಿರಾರು ಜನ ವಸ್ತುಪ್ರದರ್ಶನ ಮಳಿಗೆಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ವಿಕಲಚೇತನರ ಕಲ್ಯಾಣ ಇಲಾಖೆಯಿಂದ ಇದೇ ವಸ್ತುಪ್ರದರ್ಶನ ಮಳಿಗೆಗಳ ಬಳಿ, ವಿವಿಧ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಉಚಿತವಾಗಿ ತ್ರಿಚಕ್ರ ಮೋಟಾರು ವಾಹನಗಳ ವಿತರಣೆಯೂ ನೆರವೇರಿತು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page