ಫಲಿತಾಂಶ ಕಳಪೆ ಡಿಡಿಪಿಐ ಅಮಾನತಯ ಮುಖ್ಯಮಂತ್ರಿ ಸಿದ್ದರಾಮಯ್ಯ

by | 21/06/24 | ಅಮಾನತು


ವಿಜಯನಗರ ಜೂ.21 ಮೋಟಾರು ಕಳ್ಳತನ, ಮಟ್ಕಾ, ಬೆಟ್ಟಿಂಗ್‌, ಜೂಜು ಸೇರಿ ಕಾನೂನು ಬಾಹಿರ ಕ್ರಮಗಳು ಮೂರು ತಿಂಗಳ ಒಳಗೆ ಸ್ಥಗಿತಗೊಳ್ಳಬೇಕು ಇಲ್ಲವಾದರೆ, ಜಿಲ್ಲಾ ಪೊಲೀಸ್‌‍ ಮುಖ್ಯಾಧಿಕಾರಿಯವರನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಊರಿನ ಹೊರಗೆ ಇರುವ ಬೋರ್‌ವೆಲ್‌ಗಳ ಮೋಟಾರ್‌ಗಳನ್ನು ಪದೇ ಪದೇ ಕದಿಯಲಾಗುತ್ತಿದೆ ಎಂದು ಅಧಿಕಾರಿಗಳು ಉತ್ತರಿಸಿದರು.ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಎಚ್ಚರಿಸಿದ್ದಾರೆ, ಕಳ್ಳತನದ ಬಗ್ಗೆ ಇದುವರೆಗೂ ಏಕೆ ದೂರು ದಾಖಲಿಸಿಲ್ಲ ? ಕಳ್ಳರ ಮೇಲೆ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇದರಿಂದ ಸರ್ಕಾರಕ್ಕೆ ನಷ್ಟ ಆಗುತ್ತಿದೆ. ಈ ನಷ್ಟಕ್ಕೆ ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿದರು.

ಠಾಣಾಧಿಕಾರಿಗಳಿಗೆ ಅವರ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಕಾನೂನು ಬಾಹಿರ ಚಟುವಟಿಕೆಗಳು ಗೊತ್ತಿರುತ್ತವೆ. ಮೋಟಾರ್‌ ಕಳ್ಳರು ಯಾರು ಎನ್ನುವುದು ಗೊತ್ತಿರುತ್ತದೆ. ಆದರೂ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಮಟ್ಕಾ, ಬೆಟ್ಟಿಂಗ್‌, ಜೂಜು ಹೆಚ್ಚಾಗಿದೆ ಎನ್ನುವ ವರದಿ ಇದೆ. ಇವನ್ನೆಲ್ಲಾ ಸಂಪೂರ್ಣವಾಗಿ ನಿಲ್ಲಿಸಲು ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿಯವರು, ಕೇವಲ ನಿಯಂತ್ರಣ ಸಾಲಲ್ಲ. ಸಂಪೂರ್ಣ ನಿಲ್ಲಿಸಬೇಕು. ಅವರವರ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ರೀತಿಯ ಅಪರಾಧಗಳಿಗೂ ಠಾಣಾಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇರುತ್ತದೆ. ಆದರೂ ಕ್ರಮ ತೆಗೆದುಕೊಳ್ಳುವುದಿಲ್ಲ. ಮುಂದಿನ ಮೂರು ತಿಂಗಳುಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಬಂದ್‌ ಆಗಬೇಕು. ಇಲ್ಲದಿದ್ದರೆ ಜಿಲ್ಲಾ ರಕ್ಷಣಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಸೂಚಿಸಿದರು.

ಡಿಡಿಪಿಐ ಅಮಾನತ್ತು:
ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ವಿಜಯನಗರ ಜಿಲ್ಲೆ 10 ನೇ ಸ್ಥಾನದಿಂದ 27 ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಟ್ಟಾದ ಮುಖ್ಯಮಂತ್ರಿಯವರು, ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಡಿಡಿಪಿಐ ಅವರನ್ನು ಪ್ರಶ್ನಿಸಿದರು. ಎಸ್‌‍ಎಸ್‌‍ಎಲ್‌ಸಿ ಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಿಲಿತಾಂಶ ಪ್ರಮಾಣ ಕುಸಿದಿರುವುದಕ್ಕೆ ನೀವೇ ಕಾರಣ. ನಿಮ ಬಿಇಒಗಳು, ಶಿಕ್ಷಕರ ಪ್ರಯತ್ನ ಏನು? ಕಳಪೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಈ ಬಾರಿ ಶೇ.20 ರಷ್ಟು ಗ್ರೇಸ್‌‍ ಅಂಕಗಳನ್ನು ಕೊಟ್ಟರೂ ಫಲಿತಾಂಶ ಈ ಮಟ್ಟಕ್ಕೆ ಕುಸಿದಿದೆ. ಒಟ್ಟು ಸಾಧನೆ ನಿಮಗೆ ಸಮಾಧಾನ ತಂದಿದೆಯೇ ಎಂದು ಪ್ರಶ್ನಿಸಿದರು. 10 ರಿಂದ 27ನೇ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಕುಸಿದಿರುವುದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯದರ್ಶಿಯವರನ್ನು ತರಾಟೆಗೆ ತೆಗೆದುಕೊಂಡರು.

ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್‌ ಅವರನ್ನು ಸಂಪರ್ಕಿಸಿದ ಮುಖ್ಯಮಂತ್ರಿಯವರು, ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒ ಅವರಿಗೆ ನೋಟಿಸ್‌‍ ನೀಡಬೇಕು ಎಂದು ಸೂಚಿಸಿದರು. ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಗ್ಗೆ ಗಂಭೀರವಾಗಿ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು. ಈ ವೇಳೆ ಡಿಡಿಪಿಐ ಅವರನ್ನು ಸಭೆಯಿಂದ ಹೊರಗೆ ನಡೆಯುವಂತೆ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಅವರು ಸೂಚಿಸಿದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page