ಫೆ.1ರಂದು ತರಬೇತಿ ಕಾರ್ಯಾಗಾರ

by | 31/01/24 | ಸುದ್ದಿ

ಚಿತ್ರದುರ್ಗ ಜ.31:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಜಿಲ್ಲಾಮಟ್ಟ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಫೆ.1ರಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಕೆ.ಬಿ.ಗೀತಾ ಉದ್ಘಾಟನೆ ನೆರವೇರಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಘನಉಪಸ್ಥಿತಿವಹಿಸುವರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ, ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್, ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ ಕಾಯ್ದೆ ಕುರಿತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಡಿ.ಕೆ.ಶೀಲಾ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಕುರಿತು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಡಾ.ಕೆ.ರಾಘವೇಂದ್ರ ಭಟ್ ಉಪನ್ಯಾಸ ನೀಡುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.
========

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page